ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಸರ್ಕಾರದಿಂದ ಆಡಳಿತಾಧಿಕಾರಿಗಳನ್ನು ನೇಮಿಸಲು ಸಿಎಂಗೆ ಆಗ್ರಹ

Date:

ರಾಜ್ಯ ಸರ್ಕಾರಿ ನೌಕರರ ಸಂಘದ 2024 ರಿಂದ 2029ನೇ ಸಾಲಿನವರೆಗೆ ಆಡಳಿತ ಮಂಡಳಿಯ ಚುನಾವಣೆ ಬಾಕಿ ಇದ್ದು, ಪಾರದರ್ಶಕ ಚುನಾವಣೆ ಹಿನ್ನೆಲೆಯಲ್ಲಿ ಸರ್ಕಾರದಿಂದ ಆಡಳಿತಾಧಿಕಾರಿಗಳನ್ನು ನೇಮಕ ಮಾಡಬೇಕು ಎಂದು ಮಾಜಿ ಎಂಎಲ್‌ಸಿ ರಮೇಶ್‌ ಬಾಬು ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಕೋರಿದ್ದಾರೆ.

ಈ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಅವರು, “ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿ ಆಡಳಿತದ ಅವಧಿ ಮುಗಿದಿರುವ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಹೊಸ ಚುನಾಯಿತ ಆಡಳಿತ ಮಂಡಳಿ ಅಧಿಕಾರಕ್ಕೆ ಬರುವವರೆಗೆ ಆಡಳಿತಾಧಿಕಾರಿಗಳನ್ನು ನೇಮಿಸಬೇಕು. ಮತ್ತು ಆಡಳಿತಾಧಿಕಾರಿಗಳ ಮೂಲಕ ಸರ್ಕಾರಿ ನೌಕರರ ಸಂಘದ 2024-29 ನೇ ಸಾಲಿಗೆ ಪಾರದರ್ಶಕವಾದ ಚುನಾವಣೆ ನಡೆಸಲು ಕ್ರಮಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

“ಸಂಘದ ಬೈಲಾ ಅನ್ವಯ ಈಗಿನ ಆಡಳಿತ ಮಂಡಳಿಯು ನಿಗದಿತ ಸಮಯದ ಒಳಗೆ ಆಡಳಿತ ಮಂಡಳಿಗೆ ಚುನಾವಣೆಯನ್ನು ನಡೆಸಲು ವಿಫಲವಾಗಿರುತ್ತದೆ. ಸಾಂಕೇತಿಕವಾಗಿ ದಿನಪತ್ರಿಕೆಯಲ್ಲಿ ಒಂದು ಜಾಹೀರಾತು ನೀಡಿದ್ದು, ಇಲ್ಲಿಯವರೆಗೆ ಕರಡು ಮತದಾರರ ಪಟ್ಟಿ ಚುನಾವಣಾ ವೇಳಾಪಟ್ಟಿ ಚುನಾವಣಾ ಅಧಿಕಾರಿಯ ನೇಮಕ ಆಗಿರುವುದಿಲ್ಲ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಲ್ಲಿಯವರೆಗೆ ಇಲಾಖೆಯ ಅಧಿಕಾರಿಗಳು ನಿಯಮಾನುಸಾರ ಅವಧಿ ಮುಗಿದಿರುವ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿಗಳನ್ನು ನೇಮಿಸಲು ನಿರ್ದಿಷ್ಟವಾದ ಕ್ರಮಗಳನ್ನು ಕೈಗೊಂಡಿರುವುದಿಲ್ಲ. ಯಾವುದೇ ಸಂಘ ಸಂಸ್ಥೆಗಳು ತಮ್ಮ ಆಡಳಿತ ಅವಧಿಯನ್ನು ದುರುಪಯೋಗ ಪಡಿಸಿಕೊಂಡು ಚುನಾಯಿತ ಅವಧಿ ಮುಗಿದ ನಂತರವೂ ಪದಾಧಿಕಾರಿಗಳಾಗಿ ಮುಂದುವರಿಯುವುದು ಕಾನೂನುಬಾಹಿರವಾಗಿರುತ್ತದೆ” ಎಂದು ವಿವರಿಸಿದ್ದಾರೆ.

“ತಾಲ್ಲೂಕು ಮಟ್ಟದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಜಿಲ್ಲಾಮಟ್ಟದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ರಾಜ್ಯಸಮಿತಿಯ ಸದಸ್ಯರು ಮತ್ತು ಇವರ ಮೂಲಕ ರಾಜ್ಯ ಮಟ್ಟದ ಪದಾಧಿಕಾರಿಗಳು ಚುನಾಯಿತರಾಗಬೇಕಾಗಿರುತ್ತದೆ. ಸಹಕಾರ ಸಂಘಗಳ ಇಲಾಖೆಯ ಬೆಂಗಳೂರು ನಗರ ಜಿಲ್ಲೆಯ 4ನೇ ವಲಯದ ಸಂಘಗಳ ಜಿಲ್ಲಾ ನೋಂದಣಾಧಿಕಾರಿಗಳು 21-08-2024 ರಲ್ಲಿ ಉಪನಿಬಂಧಕರ ಕಾರ್ಯಾಲಯದ ಸಹಕಾರ ಅಭಿವೃದ್ಧಿ ಅಧಿಕಾರಿಗೆ ಲಿಖಿತ ಪತ್ರ ನೀಡಿ ಸರ್ಕಾರಿ ನೌಕರರ ಸಂಘದ ವಿರುದ್ಧ ಚುನಾವಣೆ ಸಂಬಂಧ ಬಂದಿರುವ ಅರ್ಜಿಯ ಅಂಶಗಳನ್ನು ನಿಯಮಾನುಸಾರ ಪರಿಶೀಲಿಸಿ, ಆಡಳಿತ ಮಂಡಳಿಗೆ ಪಾರದರ್ಶಕವಾಗಿ ಚುನಾವಣೆ ನಡೆಸಲು ಮತ್ತು ಚುನಾವಣೆಯವರೆಗೆ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿ ನೇಮಿಸುವ ಸಂಬಂಧ ವರದಿ ನೀಡುವಂತೆ ಸೂಚಿಸಿರುತ್ತಾರೆ” ಎಂದಿದ್ದಾರೆ.

ರಾಜ್ಯದಲ್ಲಿ ಸುಮಾರು ನಾಲ್ಕುವರೆ ಲಕ್ಷ ಸರ್ಕಾರಿ ನೌಕರರು ತಮ್ಮ ಪ್ರಾತಿನಿಧಿಕ ಸಂಸ್ಥೆಯಾದ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಚುನಾಯಿತ ಆಡಳಿತ ಮಂಡಳಿಯನ್ನು ಮತ್ತು ಪಾರದರ್ಶಕವಾದ ಆಡಳಿತವನ್ನು ಬಯಸುತ್ತಿದ್ದಾರೆ. ಈಗಿರುವ ಆಡಳಿತ ಮಂಡಳಿಯು ಉದ್ದೇಶಪೂರಕವಾಗಿ ಕೆಲವು ಸರ್ಕಾರಿ ನೌಕರರನ್ನು ಚುನಾವಣೆಗೆ ಸ್ಪರ್ಧಿಸದಂತೆ ತಡೆಯಲು ಅರ್ಹ ಮತದಾರರ ಪಟ್ಟಿಯಿಂದ ಹೊರಗಿಡಲು ಪ್ರಯತ್ನಿಸುತ್ತಿದೆ ಎಂಬ ಆರೋಪಗಳಿರುತ್ತವೆ” ಎಂದು ರಮೇಶ್‌ ಬಾಬು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...