ಇತರ ಸಮುದಾಯಗಳಿಗೆ ಅನ್ಯಾಯವಾಗದಂತೆ ಮೀಸಲಾತಿ ನೀಡಲಾಗಿದೆ: ಸಿಎಂ ಬೊಮ್ಮಾಯಿ

Date:

  • ʼಚುನಾವಣಾ ಲಾಭಕ್ಕಾಗಿ ರಾಜಕಾರಣ ಮಾಡುವುದಿಲ್ಲʼ
  • ʼ30 ವರ್ಷಗಳ ಬೇಡಿಕೆಯನ್ನು ನಮ್ಮ ಸರ್ಕಾರ ಈಡೇರಿಸಿದೆʼ

ಇತರ ಸಮುದಾಯಗಳಿಗೆ ಅನ್ಯಾಯವಾಗದಂತೆ ನ್ಯಾಯಸಮ್ಮತವಾಗಿ ಮೀಸಲಾತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಭಾನುವಾರ ಶಿಗ್ಗಾಂವಿಯಲ್ಲಿ ಆಯೋಜಿಸಿದ್ದ ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯ ಭವನ ಉದ್ಘಾಟನಾ ಮತ್ತು ಹರಧ್ಯಾನ ಮಂದಿರ ಶಂಕುಸ್ಥಾಪನಾ ಕಾರ್ಯ ನೆರವೇರಿಸಿ ಮಾತನಾಡಿದರು

“ವಚನಾನಂದ ಸ್ವಾಮೀಜಿಗಳು ಸೈದ್ಧಾಂತಿಕವಾಗಿ ಮಾರ್ಗದರ್ಶನ ಮಾಡಿದ್ದಾರೆ. ಭಿನ್ನಮತ ವ್ಯಕ್ತವಾದಾಗ, ಎಲ್ಲರಿಗೂ ಮನವರಿಕೆ, ಮಾರ್ಗದರ್ಶನ ಮಾಡಿದ್ದಾರೆ. ಜಯ ಮೃತ್ಯುಂಜಯ ಸ್ವಾಮೀಜಿಗಳ ದಿಟ್ಟ ಹೋರಾಟದಿಂದ ಸಮಾಜ ಹಾಗೂ ಸರ್ಕಾರದ ಜಾಗೃತಿ ಮೂಡಿಸಲು ಸಾಧ್ಯವಾಯಿತು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯಾರಿಗೂ ಹೆದರುವುದಿಲ್ಲ

ಗುರುಗಳು ಯಾರ ಒತ್ತಡಕ್ಕೂ ಮಣಿಯುವುದಿಲ್ಲ. ಸ್ವಂತ ಚಿಂತನೆ ಬದ್ಧತೆ ಅವರಿಗಿದೆ.  ನಮ್ಮ ಸ್ವಂತ ಚಿಂತನೆಯಿಂದ ಈ ಕೆಲಸ ಮಾಡಲಾಗಿದೆ. ಯಾವುದೇ ರೋಲ್ ಕಾಲ್ ಅಥವಾ  ಒತ್ತಡದಿಂದ ಈ ಕೆಲಸ ಮಾಡಿಲ್ಲ. ಇದನ್ನು ಜಾರಿಗೆ ತರಲು ಯಾರಿಗೂ ಹೆದರುವುದಿಲ್ಲ” ಎಂದರು.

ಚುನಾವಣಾ ಲಾಭಕ್ಕಾಗಿ ಅಲ್ಲ

ದೀನದಲಿತರ, ಆರ್ಥಿಕವಾಗಿ ಸಬಲರಾಗಬೇಕು. ವಿದ್ಯಾವಂತರಾಗಿ, ಸ್ವಾಭಿಮಾನದ ಬದುಕು ಬದುಕಬೇಕು. ಇದು ಕರ್ನಾಟಕದ ಅಭಿವೃದ್ಧಿಯ ಪ್ರಶ್ನೆ. ಚುನಾವಣಾ ಲಾಭಕ್ಕಾಗಿ ರಾಜಕಾರಣ ಮಾಡುವುದಿಲ್ಲ. ನಾವು ಭದ್ಧತೆಯಿಂದ ನಂಬಿರುವ ವಿಚಾರಗಳ ಬಗ್ಗೆ ಕೆಲಸ ಮಾಡಿದ್ದು, ಆತ್ಮಸಾಕ್ಷಿಯಾಗಿ ಕೆಲಸ ಮಾಡಲಾಗಿದೆ. ಇದು 30 ವರ್ಷಗಳ ಬೇಡಿಕೆಯಾಗಿದ್ದು, ಸಮಸ್ಯೆ  ಬಗೆಹರಿಸಲಾಗಿದೆ” ಎಂದರು.

ಅನ್ನದಾತನಿಗೆ ಆರ್ಥಿಕ ಸುರಕ್ಷಾ ಚಕ್ರ

ಕರ್ನಾಟಕದಲ್ಲಿ ರೈತಾಪಿ ವರ್ಗಕ್ಕೆ  ಬೆಲೆ ದೊರೆಯಬೇಕೆಂಬ ಉದ್ದೇಶ ನಮ್ಮದು. ರೈತ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆಯನ್ನು ರಾಜ್ಯದ 11ಲಕ್ಷ ವಿದ್ಯಾರ್ಥಿಗಳಿಗೆ 818 ಕೋಟಿ ರೂ. ಒದಗಿಸಲಾಗಿದೆ. ರೈತ ಕಾರ್ಮಿಕ ಮಹಿಳೆಗೆ ಪ್ರತಿ ತಿಂಗಳು ಒಂದು ಸಾವಿರ ರೂ.ನೀಡುವ ಯೋಜನೆ ಘೋಷಿಸಲಾಗಿದೆ. ಕಿಸಾನ್ ಸಮ್ಮಾನ್ ಯೋಜನೆಯಡಿ  ಪ್ರತಿ ವರ್ಷ 2 ಸಾವಿರ ಕೋಟಿ ಗಳನ್ನು 57 ಲಕ್ಷ ರೈತರಿಗೆ ನೀಡಲಾಗುತ್ತದೆ. ಶೂನ್ಯ ಬಡ್ಡಿ ದರದಲ್ಲಿ ನೀಡುವ  ಸಾಲವನ್ನು 5 ಲಕ್ಷಕ್ಕೆ ಏರಿಸಲಾಗಿದೆ. ಅನ್ನದಾತನಿಗೆ ಆರ್ಥಿಕ ಸುರಕ್ಷಾ ಚಕ್ರ ನೀಡಿ ದೇಶಕ್ಕೆ ಸಲ್ಲುವ ಕೆಲಸ ಮಾಡಲಾಗಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...