ಕರ್ನಾಟಕ ಕಲಾಪ | ನೀಟ್ ರದ್ದತಿಗೆ ಒತ್ತಾಯಿಸಿ ನಿರ್ಣಯ ಅಂಗೀಕಾರ

Date:

ಪ್ರಶ್ನೆ ಪತ್ರಿಕೆ ಸೋರಿಕೆ, ಗ್ರೇಸ್‌ ಅಂಕ, ನಾನಾ ವಿದ್ಯಾರ್ಥಿಗಳಿಗೆ ಅನ್ಯಾಯದ ಆರೋಪಗಳಿಂದ ವಿವಾದಕ್ಕೆ ಸಿಲುಕಿರುವ ‘ನೀಟ್’ ಅನ್ನು ರದ್ದುಪಡಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಕರ್ನಾಟಕ ಸರ್ಕಾರವು ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿದೆ. ಸಿಇಟಿ ಅಂಕಗಳನ್ನು ಆಧರಿಸಿ ವೈದ್ಯಕೀಯ ಪ್ರವೇಶಾತಿ ನೀಡಬೇಕೆಂದು ನಿರ್ಣಯದಲ್ಲಿ ಆಗ್ರಹಿಸಿದೆ.

ವಿಧಾನಸಭೆಯಲ್ಲಿ ಬುಧವಾರದಿಂದ ಬಿಜೆಪಿ ಮತ್ತು ಜೆಡಿಎಸ್‌ ಶಾಸಕರು ಆಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಮುಡಾ ಹಗರಣದ ವಿಚಾರವಾಗಿ ಗಲಾಟೆ, ಗದ್ದಲ ಮುಂದುವರೆಸಿದ್ದಾರೆ. ಈ ಗದ್ದಲಗಳ ನಡುವೆಯೇ ಸರ್ಕಾರ ನಿರ್ಣಯವನ್ನು ಮಂಡಿಸಿ, ಅಂಗೀಕರಿಸಿದೆ.

ವಿಧಾನಪರಿಷತ್​ನಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ನೀಟ್‌ ರದ್ದತಿಗೆ ಆಗ್ರಹಿಸುವ ನಿರ್ಣಯವನ್ನು ಮಂಡಿಸಿದ್ದು, ಪರಿಷತ್‌ನಲ್ಲಿಯೂ ನಿರ್ಣಯ ಅಂಗೀಕಾರವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 

ನೀಟ್ ವಿರುದ್ಧ ನಿರ್ಣಯ ಮಾತ್ರವಲ್ಲದೆ, ‘ಒಂದು ದೇಶ – ಒಂದು ಚುನಾವಣೆ’ಯ ವಿರುದ್ಧವೂ ನಿರ್ಣಯವನ್ನು ಅಂಗೀಕರಿಸಲಾಗಿದೆ.

ಜೊತೆಗೆ, ವಿಧಾನಸಭೆಯಲ್ಲಿ ಅರಣ್ಯ ವಾಸಿ ಅನುಸೂಚಿತ ಬುಡಕಟ್ಟುಗಳಿಗೆ ಸಮಾನವಾಗಿ ಇತರ ಪಾರಂಪರಿಕ ಅರಣ್ಯ ವಾಸಿಗಳನ್ನು ಪರಿಗಣಿಸುವಂತೆ ಒತ್ತಾಯಿಸಿ ‘ಅನುಸೂಚಿತ ಬುಡಕಟ್ಟುಗಳ ಮತ್ತು ಇತರೆ ಪಾರಂಪರಿಕ ಅರಣ್ಯವಾಸಿಗಳ(ಅರಣ್ಯ ಹಕ್ಕುಗಳ ಮಾನ್ಯತೆ) ಅಧಿನಿಯಮ-2006’ಕ್ಕೆ ಕೇಂದ್ರ ಸರ್ಕಾರ ಮಾರ್ಪಾಡುಗಳನ್ನು ತರಬೇಕೆಂದು ನಿರ್ಣಯವನ್ನು ಮಂಡಿಸಿ, ಅಂಗೀಕರಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...