ಮಾಯಾವತಿಯವರ ಎಲ್ಲಾ ನಿರ್ಧಾರಗಳನ್ನು ಗೌರವಿಸುತ್ತೇನೆ: ಆಕಾಶ್ ಆನಂದ್

Date:

ಬಿಎಸ್‌ಪಿ ನಾಯಕಿ ಮಾಯಾವತಿ ಅವರು ತಮ್ಮ ಸೋದರಳಿಯ ಆಕಾಶ್ ಆನಂದ್ ಅವರನ್ನು ಮಾಯಾವತಿಯವರ ರಾಜಕೀಯ ಉತ್ತರಾಧಿಕಾರಿ ಮತ್ತು ಬಿಎಸ್‌ಪಿಯ ರಾಷ್ಟ್ರೀಯ ಸಂಯೋಜಕ ಜವಾಬ್ದಾರಿಗಳಿಂದ ಬಿಡುಗಡೆ ಮಾಡಿದರು. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಆಕಾಶ್ ಆನಂದ್, “ಮಾಯಾವತಿಯವರ ಎಲ್ಲಾ ನಿರ್ಧಾರವನ್ನು ಗೌರವಿಸುತ್ತೇನೆ” ಎಂದು ಹೇಳಿದ್ದಾರೆ.

ದಿಢೀರ್ ಆಗಿ ಮಾಯಾವತಿ ಕೈಗೊಂಡಿರುವ ನಿರ್ಧಾರವು ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಒಂದೆಡೆ ಕಾಂಗ್ರೆಸ್ ಅಸಮಾಧಾನಗೊಂಡಿರುವ ಬಿಎಸ್‌ಪಿ ಕಾರ್ಯಕರ್ತರನ್ನು ತನ್ನೆಡೆ ಸೆಳೆಯುವ ಯತ್ನ ಮಾಡುತ್ತಿದೆ. ಇನ್ನು ಎಸ್‌ಪಿ ಸೇರಿ ಕೆಲವು ಪಕ್ಷದ ನಾಯಕರುಗಳು ಬಿಎಸ್‌ಪಿ ನಾಯಕಿ ಬಿಜೆಪಿಯ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ಸಾಮಾಜಿಕ ಚಳವಳಿಯ ದಮನ ಮಾಡಿದ ಮಾಯಾವತಿಯ ಕತ್ತು ಹಿಸುಕುವ ಸಮಯ ಬಂದಿದೆ: ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇವೆಲ್ಲವುದರ ನಡುವೆ ಆಕಾಶ್ ಆನಂದ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. “ನಾನು ಪರಮಪೂಜ್ಯ, ಆದರಣೀಯ ಸಹೋದರಿ ಮಾಯಾವತಿ ಅವರ ಕಾರ್ಯಕರ್ತನಾಗಿದ್ದೇನೆ. ಅವರ ನೇತೃತ್ವದಲ್ಲಿ ನಾನು ತ್ಯಾಗ, ನಿಷ್ಠೆ ಮತ್ತು ಸಮರ್ಪಣೆಯನ್ನು ಎಂದಿಗೂ ಮರೆಯದ ಪಾಠವನ್ನು ಕಲಿತ್ತಿದ್ದೇನೆ. ಇವೆಲ್ಲವೂ ನನಗೆ ಬರೀ ವಿಚಾರವಲ್ಲ, ಬದಲಾಗಿ ಜೀವನದ ಉದ್ದೇಶವಾಗಿದೆ. ಗೌರವಾನ್ವಿತ ಸಹೋದರಿ ಅವರ ಎಲ್ಲಾ ನಿರ್ಧಾರವು ನನಗೆ ಪ್ರೀತಿಯ ರೇಖೆಗೆ ಸಮವಾಗಿದೆ. ನಾನು ಅವರ ಎಲ್ಲಾ ನಿರ್ಧಾರವನ್ನು ಗೌರವಿಸುತ್ತೇನೆ. ಆ ನಿರ್ಧಾರದೊಂದಿಗೆ ನಾನು ನಿಲ್ಲುತ್ತೇನೆ” ಎಂದು ತಿಳಿಸಿದ್ದಾರೆ.

“ಮಾಯಾವತಿಯವರು ನನ್ನನ್ನು ಪಕ್ಷದ ಎಲ್ಲಾ ಸ್ಥಾನದಿಂದ ಮುಕ್ತಗೊಳಿಸಿರುವುದು ನನಗೆ ವೈಯಕ್ತಿಕವಾಗಿ ಭಾವಾನಾತ್ಮಕ ವಿಚಾರವಾಗಿದೆ. ಆದರೆ ಮುಂದೆ ಚುನಾವಣೆ ಬರಲಿದೆ. ಪರೀಕ್ಷೆ ಕಠಿಣವಾಗಿದೆ ಮತ್ತು ಹೋರಾಟ ದೀರ್ಘವಾಗಿದೆ” ಎಂದು ಆಕಾಶ್ ಎಕ್ಸ್‌ನಲ್ಲಿ ಹಿಂದಿಯಲ್ಲಿ ಬರೆದುಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ಆಕಾಶ್ ಆನಂದ್ ವಜಾ | ಕಾಂಗ್ರೆಸ್‌ಗೆ ಸೇರಿ; ಬಿಎಸ್‌ಪಿ ಕಾರ್ಯಕರ್ತರಿಗೆ ಉದಿತ್ ರಾಜ್ ಆಹ್ವಾನ

“ಇಂತಹ ಕಠಿಣ ಸಂದರ್ಭದಲ್ಲಿ ದೈರ್ಯ ಮತ್ತು ಸಂಕಲ್ಪ ಮುಖ್ಯವಾಗುತ್ತದೆ. ಬಹುಜನದ ಓರ್ವ ಕಾರ್ಯಕರ್ತನಾಗಿ ನಾನು ನಿಷ್ಠೆಯಿಂದ ಎಲ್ಲಾ ಕೆಲಸವನ್ನು ಮಾಡುತ್ತೇನೆ. ನನ್ನ ಕೊನೆಯ ಉಸಿರು ಇರುವವರೆಗೂ ನನ್ನ ಸಮಾಜದ ಹಕ್ಕಿಗಾಗಿ ಹೋರಾಟ ನಡೆಸುತ್ತಲೇ ಇರುತ್ತೇನೆ” ಎಂದಿದ್ದಾರೆ.

“ಬಿಎಸ್‌ಪಿಯ ಈ ನಿರ್ಧಾರದಿಂದ ನನ್ನ ರಾಜಕೀಯ ಜೀವನ ಅಂತ್ಯವಾಯಿತು ಎಂದು ಕೆಲವು ವಿರೋಧ ಪಕ್ಷದ ನಾಯಕರು ಅಂದುಕೊಂಡಿದ್ದಾರೆ. ಆದರೆ ಬಹುಜನ ಚಳುವಳಿ ಯಾವುದೇ ರಾಜಕೀಯ ಜೀವನವಲ್ಲ, ಬದಲಾಗಿ ಕೋಟ್ಯಾಂತರ ದಲಿತರು, ಶೋಷಿತರು, ವಂಚಿತರು ಮತ್ತು ಬಡವರ ಆತ್ಮ ಸಮ್ಮಾನಕ್ಕಾಗಿ, ಸ್ವಾಭಿಮಾನಕ್ಕಾಗಿ ಮಾಡುವ ಹೋರಾಟ ಎಂದು ಅವರು ತಿಳಿಯಬೇಕು” ಎಂದು ಹೇಳಿದ್ದಾರೆ.

“ಇದು ಒಂದು ವಿಚಾರವಾಗಿದೆ, ಆಂದೋಲನವಾಗಿದೆ, ಇದನ್ನು ನಾವು ಧಮನಿಸಲು ಸಾಧ್ಯವಾಗುವುದಿಲ್ಲ. ಈ ಜ್ವಾಲೆಯು ಉರಿಯುತ್ತಿರುವಂತೆಯೇ ನೋಡಿಕೊಳ್ಳಲು ಮತ್ತು ಈ ಹೋರಾಟಕ್ಕಾಗಿ ತಮ್ಮನ್ನು ಮುಡಿಪಾಗಿಡಲು ಲಕ್ಷಾಂತರು ಜನರು ಇದ್ದಾರೆ” ಎಂದು ಆಕಾಶ್ ಆನಂದ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...