ಅಣ್ಣಾಮಲೈ ಅಯೋಗ್ಯ, ರಾಜ್ಯದಿಂದ ನಿವೃತ್ತಿ ಸಂಬಳ ಪಡೆದು ಇಲ್ಲಿ ಪುಕ್ಸಟ್ಟೆ ಭಾಷಣ: ಮಧು ಬಂಗಾರಪ್ಪ ವಾಗ್ದಾಳಿ

Date:

ಅಣ್ಣಾಮಲೈ ಒಬ್ಬ ಅಯೋಗ್ಯ ವ್ಯಕ್ತಿ. ನಮ್ಮ ರಾಜ್ಯದಿಂದ ನಿವೃತ್ತಿ ಸಂಬಳ ತೆಗೆದುಕೊಂಡು ಇಲ್ಲಿ ಬಂದು ಪುಕ್ಸಟ್ಟೆ ಭಾಷಣ ಮಾಡುತ್ತಾರೆ. ನಮ್ಮ ಇಲಾಖೆಯಲ್ಲಿ ನ್ಯೂನತೆ ಇದೆ. ಸರಿ ಮಾಡಿಕೊಳ್ಳುತ್ತೇವೆ. ಹಳೆ ಸರ್ಕಾರದ ಶಿಕ್ಷಣ ಇಲಾಖೆ 500 ಕೋಟಿ ರೂ. ಸಾಲ ನಾವು ತೀರಿಸುತ್ತಿದ್ದೇವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿರುಗೇಟು ನೀಡಿದರು.

2023-2024ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ ಕುರಿತು ಶಿವಮೊಗ್ಗದಲ್ಲಿ ಶನಿವಾರ ಸುದ್ದಿಗಾರರ ಪ್ರತಿಕ್ರಿಯಿಸಿ, “ನಾನು ಓದುವುದರಲ್ಲಿ ಅಷ್ಟು ಬುದ್ದಿವಂತನಾಗಿರಲಿಲ್ಲ. ನಾನು ಸಹ ಫೇಲ್ ಆಗಿದ್ದೇನೆ. ನನಗೆ ಕನ್ನಡ ಅಷ್ಟು ಶುದ್ಧವಾಗಿ ಓದಲು ಬರಲ್ಲ. ಸ್ವಲ್ಪ ಉಚ್ಚಾರಣೆ ತಪ್ಪಾಗುತ್ತೆ. ನನ್ನ ಬಗ್ಗೆ ಕೆಟ್ಟ ಟ್ರೋಲ್ ಮಾಡುವವರು ಎಂದೂ ಉದ್ಧಾರಾಗಲ್ಲ ಎಂದು ಹೇಳಿದರು.

“ಬಾಗಲಕೋಟೆ ಜಿಲ್ಲೆಯ ಮಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊಣ್ಣೂರ‌‌‌ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ನಮ್ಮ ಇಲಾಖೆವತಿಯಿಂದ ವಿದ್ಯಾರ್ಥಿನಿ ಮತ್ತು ಆಕೆಯ ಪೋಷಕರಿಗೆ ಧನ್ಯವಾದ ತಿಳಿಸುತ್ತೇನೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ಇಲಾಖೆಯಲ್ಲಿ ಅನೇಕ ಬದಲಾವಣೆ ಮಾಡಿದ್ದೇವೆ. ಪಠ್ಯ ಪುಸ್ತಕ ಬದಲಾವಣೆ, ಶಿಕ್ಷಕರ ನೇಮಕ ಹೀಗೆ ಅನೇಕ ಬದಲಾವಣೆ ತಂದಿದ್ದೇವೆ. ಅನುದಾನಿತ ಶಾಲೆಗಳಿಗೂ ಶಿಕ್ಷಕರ ನೇಮಕ‌ ಮಾಡುತ್ತೇವೆ” ಎಂದು ತಿಳಿಸಿದರು.

ಈ ವರ್ಷಕ್ಕೆ ಮಾತ್ರ ಕೃಪಾಂಕ ಅಂಕ ಸೀಮಿತ

“ಪರೀಕ್ಷೆಯ ಪಾವಿತ್ರ್ಯತೆ ಕಾಪಾಡಲು ನಾವು ಅನೇಕ ಕ್ರಮ ಕೈಗೊಂಡಿದ್ದೇವೆ. ಕೊರೊನಾ ಸಮಯದ ವಿದ್ಯಾರ್ಥಿಗಳು ಈಗ ಎಸ್ಎಸ್ಎಲ್​ಸಿ ಪರೀಕ್ಷೆ ಬರೆದಿದ್ದಾರೆ. ಶೇ 20 ರಷ್ಟು ಕೃಪಾಂಕ ಅಂಕ ಕೊಟ್ಟಿದ್ದೇವೆ. ಅದು ಈ ವರ್ಷಕ್ಕೆ ಮಾತ್ರ ಸೀಮಿತವಾಗಿರುತ್ತದೆ” ಎಂದರು.

ಕೊಡಗು ವಿದ್ಯಾರ್ಥಿನಿ ಕೊಲೆ ಪ್ರಕರಣ ಬಗ್ಗೆ ಮಾತನಾಡಿ, “ಕಾನೂನು ಕ್ರಮ ಕೈಗೊಳ್ಳಲಿದೆ. ರಾಜ್ಯದ ಸರ್ಕಾರಿ ಶಾಲೆಗಳ ದುರಸ್ತಿ ಕಾರ್ಯ ಮಾಡುತ್ತೇವೆ. ಸರ್ಕಾರಿ ಶಾಲೆಗೆ ಮಕ್ಕಳು ಬರಬೇಕು. ಖಾಸಗಿ ಶಾಲೆಗಳಲ್ಲಿ ಬೇಕಾಬಿಟ್ಟಿ ಶುಲ್ಕ ವಸೂಲಿ ಮಾಡುವಂತಿಲ್ಲ” ಎಂದು ಎಚ್ಚರಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...