ಸಿಬಿಐ ಕೋರ್ಟ್‌ ದೋಷಿ ಎಂದು ಘೋಷಿಸಿದ್ದ ಆರ್‌ಜೆಡಿ ನಾಯಕ ಅನಿಲ್ ಸಹಾನಿ ಬಿಜೆಪಿ ಸೇರ್ಪಡೆ

Date:

ಮೂರು ವರ್ಷಗಳ ಹಿಂದೆ ವಂಚನೆ ಪ್ರಕರಣದಲ್ಲಿ ಸಿಬಿಐ ಕೋರ್ಟ್‌ ದೋಷಿ ಎಂದು ಘೋಷಿಸಿದ್ದ ಮಾಜಿ ಆರ್‌ಜೆಡಿ ನಾಯಕ ಅನಿಲ್ ಸಹಾನಿ ಅವರು ಬುಧವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ವಂಚನೆ ಪ್ರಕರಣದಲ್ಲಿ ಅನಿಲ್ ಸಹಾನಿ ಬಿಹಾರ ವಿಧಾನಸಭೆಯಿಂದ ಅನರ್ಹಗೊಂಡಿದ್ದರು.

ಬಿಹಾರ ವಿಧಾನಸಭೆ ಚುನಾವಣೆಯ ಬಿಜೆಪಿ ಉಸ್ತುವಾರಿಯಾಗಿರುವ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರ ಸಮ್ಮುಖದಲ್ಲಿ ಸಹಾನಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಇದನ್ನು ಓದಿದ್ದೀರಾ? ಎಎಪಿಯ ಏಕೈಕ ಸಂಸದ ಬಿಜೆಪಿ ಸೇರ್ಪಡೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2012ರಲ್ಲಿ ಆರ್‌ಜೆಡಿ ನಾಯಕ ರಾಜ್ಯಸಭಾ ಸಂಸದರಾಗಿದ್ದಾಗ, ಪ್ರಯಾಣ ಮಾಡದೆಯೇ ಪ್ರಯಾಣ ರಿಯಾಯಿತಿಯನ್ನು ಪಡೆಯಲು ನಕಲಿ ವಿಮಾನ ಟಿಕೆಟ್‌ಗಳನ್ನು ಸಲ್ಲಿಸಿದ್ದರು. ದೆಹಲಿಯ ಸಿಬಿಐ ಕೋರ್ಟ್‌ ಅವರನ್ನು ದೋಷಿ ಎಂದು ಘೋಷಿಸಿದ್ದರು.

ಸಹಾನಿ ಅವರನ್ನು ಬಿಜೆಪಿಗೆ ಸೇರಿಸುವ ಮೂಲಕ ಮುಜಾಫರ್‌ಪುರದಲ್ಲಿ ಗಣನೀಯ ಪ್ರಮಾಣದಲ್ಲಿರುವ ಅತ್ಯಂತ ಹಿಂದುಳಿದ ವರ್ಗವಾದ ‘ನಿಶಾದ್’ ಸಮುದಾಯವನ್ನು ತಲುಪುವ ಗುರಿಯನ್ನು ಬಿಜೆಪಿ ಹೊಂದಿದೆ. ಸಹಾನಿ ಅವರ ತವರು ಜಿಲ್ಲೆ ಮುಜಾಫರ್‌ಪುರ ಆಗಿದೆ.

ಸಹಾನಿ 2020ರ ವಿಧಾನಸಭೆ ಚುನಾವಣೆಯಲ್ಲಿ ಕುರ್ಹಾನಿಯಿಂದ ಬಿಜೆಪಿಯ ಕೇದಾರ್ ಗುಪ್ತಾ ಅವರನ್ನು 900ಕ್ಕಿಂತ ಕಡಿಮೆ ಮತಗಳ ಅಂತರದಿಂದ ಸೋಲಿಸಿ ಗೆದ್ದಿದ್ದರು. ಸಹಾನಿಯವರ ಅನರ್ಹತೆಯ ನಂತರ ನಡೆದ ಉಪಚುನಾವಣೆಯಲ್ಲಿ ಗುಪ್ತಾ ಗೆದ್ದು ಸಚಿವರಾದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...