ನಿತೀಶ್ ಕುಮಾರ್‌ ಅವರನ್ನು ‘ಮಿಮಿಕ್’ ಮಾಡಿದ ಆರ್‌ಜೆಡಿ ಎಂಎಲ್‌ಸಿ ಸದನದಿಂದ ಉಚ್ಚಾಟನೆ

Date:

ಬಿಹಾರ ಸಿಎಂ ನಿತೀಶ್ ಕುಮಾರ್ ಅವರನ್ನು ಅನುಕರಣೆ ಮಾಡಿದ್ದಕ್ಕಾಗಿ ಆರ್‌ಜೆಡಿ ಎಂಎಲ್‌ಸಿ ಸುನೀಲ್ ಸಿಂಗ್ ಅವರನ್ನು ಶುಕ್ರವಾರ ಸದನದಿಂದ ಉಚ್ಚಾಟಿಸಲಾಗಿದೆ. ಕೌನ್ಸಿಲ್‌ನ ನೈತಿಕ ಸಮಿತಿಯ ಶಿಫಾರಸಿನ ಆಧಾರದ ಧ್ವನಿ ಮತದ ಮೂಲಕ ಈ ಉಚ್ಚಾಟನೆಯನ್ನು ಅಂಗೀಕರಿಸಲಾಗಿದೆ.

ಫೆಬ್ರವರಿ 13ರಂದು ಕೌನ್ಸಿಲ್ ಕಲಾಪದಲ್ಲಿ ಸುನೀಲ್ ಸಿಂಗ್ ಅವರು ತಮ್ಮ ಭಾಷಣದಲ್ಲಿ ನಿತೀಶ್ ಕುಮಾರ್ ಅವರ ನಡವಳಿಕೆಯನ್ನು ಅನುಕರಿಸಲು ಪ್ರಯತ್ನಿಸಿದ್ದರು ಎಂದು ಆರೋಪಿಸಲಾಗಿದೆ. ಆದರೆ “ನಾನು ಎಂದಿಗೂ ಮುಖ್ಯಮಂತ್ರಿಯನ್ನು ಅನುಕರಣೆ ಮಾಡಿಲ್ಲ” ಎಂದು ಸಿಂಗ್ ಹೇಳಿದ್ದಾರೆ.

ಇನ್ನು ಸದನದಿಂದ ಸುನೀಲ್ ಸಿಂಗ್ ಉಚ್ಚಾಟನೆಯನ್ನು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕಿ ರಾಬ್ರಿ ದೇವಿ, “ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಕರಾಳ ಅಧ್ಯಾಯ” ಎಂದು ಕರೆದಿದ್ದಾರೆ. ಇನ್ನು ರಾಬ್ರಿ ದೇವಿ ಸೇರಿ ಆರ್‌ಜೆಡಿ ಶಾಸಕರು ಕಪ್ಪು ಪಟ್ಟಿ ಧರಿಸಿ ಸದನಕ್ಕೆ ಆಗಮಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತನ್ನ ಉಚ್ಚಾಟನೆಯ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಸುನೀಲ್ ಸಿಂಗ್, “ನಾನು ಎಂದಿಗೂ ಸಿಎಂ ನಿತೀಶ್ ಅವರ ಅನುಕರಣೆ ಮಾಡಿಲ್ಲ. ಒಂದು ವೇಳೆ ಅನುಕರಣೆ ಮಾಡಿದರೂ ಅದು ಎರಡೂ ಸದನಗಳ ಸದಸ್ಯತ್ವವನ್ನು ಕಸಿದುಕೊಳ್ಳುವ ಅಪರಾಧವಲ್ಲ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ?  ಕೇಂದ್ರ ಬಜೆಟ್ | ಬಿಜೆಪಿ ಮಿತ್ರರಾದ ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡು ತಮ್ಮ ರಾಜ್ಯಕ್ಕೆ ಗಳಿಸಿದ್ದೇನು?

“ನಿತೀಶ್ ಕುಮಾರ್ ಅವರು ನನ್ನಂತಹವರಿಗೆ ಪರಿಷತ್ತಿನಲ್ಲಿ ನಾನು ನಿಮ್ಮನ್ನು ನಾಶಪಡಿಸುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ. ಅವರು ಮಹಿಳೆಯರಿಗೆ ಅಗೌರವ ತೋರುವ ಮುಖ್ಯಮಂತ್ರಿಯಾಗಿದ್ದಾರೆ. ಅವರ ಅಧಿಕಾರಾವಧಿಯಲ್ಲಿ ಹಲವಾರು ಭ್ರಷ್ಟಾಚಾರ ಪ್ರಕರಣಗಳು ನಡೆದಿದೆ” ಎಂದು ಆರೋಪಿಸಿದರು.

ಇನ್ನು ಮತ್ತೋರ್ವ ಆರ್‌ಜೆಡಿ ಎಂಎಲ್‌ಸಿ ಮೊಹಮ್ಮದ್ ಖಾರಿ ಸೊಹೈಬ್ ಕೂಡ ಸಿಎಂ ನಿತೀಶ್ ಅನುಕರಿಸುವ ಪ್ರಯತ್ನಿಸಿದ್ದು ಬಳಿಕ ಕ್ಷಮೆಯಾಚಿಸಿದ್ದಾರೆ. ಅದಾದ ಬಳಿಕ ಸೊಹೈಬ್‌ ಅವರನ್ನು ವಿಧಾನ ಪರಿಷತ್ತಿನಿಂದ ಎರಡು ದಿನಗಳ ಅಮಾನತುಗೊಳಿಸಲಾಗಿದೆ. ಆದರೆ ಸುನೀಲ್ ಸಿಂಗ್ ಕ್ಷಮೆ ಕೇಳಲು ನಿರಾಕರಿಸಿದ್ದರು.

ರಜಪೂತ ನಾಯಕ ಸುನೀಲ್ ಸಿಂಗ್ ಎರಡು ದಶಕಗಳಿಂದ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರ ನಿಕಟ ಸಹವರ್ತಿಯಾಗಿದ್ದಾರೆ. ಸಿಂಗ್ ಬಿಹಾರ ರಾಜ್ಯ ಸಹಕಾರ ಮಾರುಕಟ್ಟೆ ಒಕ್ಕೂಟದ ಮುಖ್ಯಸ್ಥರೂ ಆಗಿದ್ದಾರೆ.

ಮುಂಗಾರು ಅಧಿವೇಶನದ ಅಂತಿಮ ದಿನದಂದು ಈ ನಿರ್ಧಾರಕ್ಕೆ ಬಂದಿದ್ದು, ಸದನ ಮತ್ತೆ ಸೇರಿದಾಗ ಸಿಂಗ್ ಅವರ ಅಮಾನತು ಜಾರಿಗೆ ಬರಲಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...