ವಕ್ಫ್ ಮಸೂದೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲು ಮುಂದಾದ ಆರ್‌ಜೆಡಿ ನಾಯಕರು

Date:

ವಕ್ಫ್ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ಅಂಗೀಕಾರಗೊಂಡಿದೆ. ಈ ಬೆನ್ನಲ್ಲೇ ವಿಪಕ್ಷಗಳು, ಹಲವು ಸಂಘಟನೆಗಳು, ಪ್ರಗತಿಪರರು ಈ ವಿವಾದಾತ್ಮಕ ಮಸೂದೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಕದ ತಟ್ಟುತ್ತಿದ್ದಾರೆ. ಇದೀಗ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ರಾಜ್ಯಸಭಾ ಸಂಸದ ಮನೋಜ್ ಝಾ ಮತ್ತು ನಾಯಕ ಫಯಾಜ್ ಅಹ್ಮದ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ.

ಮಸೂದೆಯಲ್ಲಿರುವ ನಿಬಂಧನೆಗಳನ್ನು ಪ್ರಶ್ನಿಸಿ ಆರ್‌ಜೆಡಿ ನಾಯಕರು ಸೋಮವಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲಿದ್ದಾರೆ. ಈ ತಿದ್ದುಪಡಿ ಮಸೂದೆಯು ವಕ್ಫ್ ಆಸ್ತಿಗಳ ನಿರ್ವಹಣೆಗೆ ಗಮನಾರ್ಹ ಪರಿಣಾಮಗಳನ್ನು ಬೀರಬಹುದು ಎಂದು ಆರ್‌ಜೆಡಿ ನಾಯಕರು ವಾದಿಸಿದ್ದಾರೆ.

ಇದನ್ನು ಓದಿದ್ದೀರಾ? ವಕ್ಫ್ ಮಸೂದೆ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಎಎಪಿ ಶಾಸಕ ಅಮಾನತುಲ್ಲಾ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಸತ್ತಿನ ಎರಡೂ ಸದನಗಳಲ್ಲಿ ಎರಡು ದಿನಗಳ ಚರ್ಚೆಯ ಬಳಿಕ ವಕ್ಫ್ ತಿದ್ದುಪಡಿ ಮಸೂದೆ 2025 ಅನ್ನು ಈ ವಾರ ಅಂಗೀಕರಿಸಲಾಯಿತು. ರಾಜ್ಯಸಭೆಯಲ್ಲಿ 128 ಮಂದಿ ಮಸೂದೆ ಪರ, 95 ಮಸೂದೆ ವಿರುದ್ಧ ಮತ ಹಾಕಿದ್ದಾರೆ. ಲೋಕಸಭೆಯಲ್ಲಿ ಮಸೂದೆಯನ್ನು 288 ಸದಸ್ಯರು ಪರವಾಗಿ ಮತ್ತು 232 ಸದಸ್ಯರು ವಿರೋಧಿಸಿದರು.

ರಾಜಕೀಯ ವಲಯದಲ್ಲಿ ವಿವಾದಕ್ಕೆ ಕಾರಣವಾಗಿರುವ ವಕ್ಫ್ ಮಸೂದೆ ಅಂಗೀಕಾರದ ವಿರುದ್ಧ ಪ್ರತಿಭಟನೆಗಳೂ ನಡೆಯುತ್ತಿದೆ. ಕಾಂಗ್ರೆಸ್, ಎಎಪಿ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಈಗಾಗಲೇ ವಕ್ಫ್ ಮಸೂದೆ ಪ್ರಶ್ನಿಸಿ ಉನ್ನತ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ತನ್ನ ಅಖಿಲ ಭಾರತ ಮಹಾ ಅಧಿವೇಶನದಲ್ಲಿ ವಕ್ಫ್ ಮಸೂದೆ ವಿರುದ್ಧ ನಿರ್ಣಯ ಕೈಗೊಂಡಿರುವ ಸಿಪಿಐಎಂ ಕೂಡಾ ಕೋರ್ಟ್ ಕದ ತಟ್ಟುವ ಸಾಧ್ಯತೆಯಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...