ತೆಲಂಗಾಣದ ಬಿಆರ್​ಎಸ್ ಪಕ್ಷದ ಶಾಸಕಿ ಲಾಸ್ಯ ನಂದಿತಾ ಕಾರು ಅಪಘಾತ; ದಾರುಣ ಸಾವು

Date:

ತೆಲಂಗಾಣದ ಬಿಆರ್​ಎಸ್ (ಭಾರತ್ ರಾಷ್ಟ್ರ ಸಮಿತಿ)​ ಪಕ್ಷದ ಶಾಸಕಿ ಲಾಸ್ಯ ನಂದಿತಾ (37) ಅವರು ಶುಕ್ರವಾರ ರಸ್ತೆ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟಿದ್ದಾರೆ.

ಹೈದರಾಬಾದ್‌ನ ಔಟರ್‌ ರಿಂಗ್‌ ರೋಡ್‌ನಲ್ಲಿ ನಂದಿತಾ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. “ಕಾರು ಅತಿವೇಗದಲ್ಲಿ ಡಿಕ್ಕಿ ಹೊಡೆದ ಪರಿಣಾಮ ಲಾಸ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ” ಎಂದು ಪೊಲೀಸರು ತಿಳಿಸಿದ್ದಾರೆ.

ಲಾಸ್ಯ ನಂದಿತಾ ಅವರು ಸಿಕಂದರಾಬಾದ್ ಕಂಟೋನ್ಮೆಂಟ್ (ಪ.ಜಾತಿ) ವಿಧಾನಸಭಾ ಕ್ಷೇತ್ರದ ಶಾಸಕಿಯಾಗಿದ್ದರು. ಇತ್ತೀಚೆಗಷ್ಟೇ ರಸ್ತೆ ಅಪಘಾತದಲ್ಲಿ ಸ್ವಲ್ಪದರಲ್ಲೇ ಬಚಾವಾಗಿದ್ದ ಶಾಸಕಿ ಲಾಸ್ಯ ನಂದಿತಾ ಅವರನ್ನು ಸಾಲು ಸಾಲು ಅವಘಡಗಳು ಕಾಡಿದ್ದನ್ನು ಗಮನಿಸಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚೆಗೆ ಶಾಸಕಿ ಬಿಆರ್‌ಎಸ್‌ನ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ, ಬಳಿಕ ಮನೆಗೆ ಮರಳುತ್ತಿದ್ದಾಗ ಅವರ ಕಾರು ಅಪಘಾತಕ್ಕೀಡಾಗಿತ್ತು. ಆಗ ಅವರು ಪ್ರಾಣಾಪಾಯದಿಂದ ಪಾರಾಗಿದ್ದರು. ಆ ವೇಳೆ ಕರ್ತವ್ಯದಲ್ಲಿದ್ದ ಗೃಹರಕ್ಷಕ ದಳದ ಸಿಬ್ಬಂದಿ ಮೃತಪಟ್ಟಿದ್ದರು. ಕಳೆದ ತಿಂಗಳು ಲಿಫ್ಟ್‌ನಲ್ಲಿ ಸಿಕ್ಕಿಹಾಕಿಕೊಂಡಿದ್ದು ಭಾರೀ ಸುದ್ದಿಯಾಗಿತ್ತು. ಹತ್ತು ದಿನಗಳ ಹಿಂದೆ ಲಾಸ್ಯ ನಂದಿತಾ ಅವರ ಇನ್ನೋವಾ ಕಾರು ಕೂಡ ಅಪಘಾತಕ್ಕೀಡಾಗಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಂಡ್ ಎಂಬ ಬಿಜೆಪಿ ಭ್ರಷ್ಟಾಚಾರದ ಬಗ್ಗೆ ಜನ ಪ್ರಶ್ನಿಸಬಾರದೇ?

ಕಳೆದ ವರ್ಷ ಇದೇ ತಿಂಗಳಲ್ಲಿ ಶಾಸಕಿ ಲಾಸ್ಯ ನಂದಿತಾ ಅವರ ತಂದೆ ಸಾಯಣ್ಣ ಮೃತಪಟ್ಟಿದ್ದರು. ಸಾಯಣ್ಣ 2023 ರ ಫೆಬ್ರವರಿ 19ರಂದು ನಿಧನರಾಗಿದ್ದರು. ಇದೀಗ ಅವರ ಮಗಳು 2024ರ ಫೆಬ್ರವರಿ 23ರಂದು ನಿಧನರಾಗಿದ್ದಾರೆ. ಇದು ಅವರ ಕುಟುಂಬದವರನ್ನು ತೀವ್ರ ಆಘಾತಕ್ಕೀಡು ಮಾಡಿದೆ.

ಶಾಸಕಿ ಲಾಸ್ಯ ನಂದಿತಾ ನಿಧನಕ್ಕೆ ಬಿಆರ್‌ಎಸ್ ನಾಯಕರು ಕಂಬನಿ ಮಿಡಿದಿದ್ದಾರೆ. ಸ್ವಲ್ಪ ಸಮಯದ ನಂತರ, ಮೃತದೇಹವನ್ನು ಚಿಕ್ಕಡಪಲ್ಲಿಯಲ್ಲಿರುವ ಅವರ ನಿವಾಸಕ್ಕೆ ಕೊಂಡೊಯ್ಯಲಾಗುತ್ತದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...