ಕರ್ನಾಟಕದಲ್ಲಿ ರೋಹಿತ್ ವೇಮುಲಾ ಕಾಯ್ದೆ ಜಾರಿ ಶೀಘ್ರ: ಸಿಎಂ

Date:

ಶಿಕ್ಷಣ ವ್ಯವಸ್ಥೆಯಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಕೊನೆಗಾಣಿಸಲು ‘ರೋಹಿತ್ ಮೇಮುಲಾ ಕಾಯ್ದೆ’ಯನ್ನು ಜಾರಿಗೊಳಿಸಬೇಕೆಂದು ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಕರೆ ಕೊಟ್ಟಿದ್ದಾರೆ. ಈ ಬೆನ್ನಲ್ಲೇ, ಕರ್ನಾಟಕದಲ್ಲಿ ಕಾಯ್ದೆಯನ್ನು ಜಾರಿಗೆ ತರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದಲ್ಲಿ ಶೀಘ್ರವೆ ಕಾಯ್ದೆ ಜಾರಿಯಾಗಲಿದೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಹುಲ್‌ ಗಾಂಧಿ ಪತ್ರ ಬರೆದಿದ್ದು, “ಅಂಬೇಡ್ಕರ್ ಎದುರಿಸಿದ ತಾರತಮ್ಯವು ಅತ್ಯಂತ ಶೋಚನೀಯ. ಭಾರತದ ಯಾವುದೇ ಮಗು ಈ ರೀತಿಯ ನೋವನ್ನು ಅನುಭವಿಸಬಾರದು. ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಇಂದಿಗೂ ದಲಿತ, ಆದಿವಾಸಿ ಹಾಗೂ ಒಬಿಸಿ ಸಮುದಾಯಗಳ ಲಕ್ಷಾಂತರ ವಿದ್ಯಾರ್ಥಿಗಳು ಇಂತಹ ಕ್ರೂರ ತಾರತಮ್ಯವನ್ನು ಎದುರಿಸುತ್ತಿದ್ದಾರೆ. ಇದು ಶೋಚನೀಯ ಸಂಗತಿ” ಎಂದು ಹೇಳಿದ್ದರು.

“ರೋಹಿತ್ ವೇಮುಲಾ, ಪಾಯಲ್ ತಡ್ವಿ ಮತ್ತು ದರ್ಶನ್ ಸೋಲಂಕಿಯಂತಹ ಪ್ರತಿಭಾವಂತ ಯುವಕರ ಹತ್ಯೆಯು ನೋವುಂಟುಮಾಡಿದೆ. ಇಂತಹ ಹತ್ಯೆಗಳನ್ನು ಸಹಿಸಲಾಗದು. ಇದಕ್ಕೆ ಅಂತ್ಯ ಹಾಡುವ ಸಮಯ ಬಂದಿದೆ. ಅಂಬೇಡ್ಕರ್, ರೋಹಿತ್ ವೇಮುಲಾ ಮತ್ತು ಲಕ್ಷಾಂತರ ಇತರರು ಅನುಭವಿಸಿದ ತಾರತಮ್ಯ-ನೋವನ್ನು ಭಾರತದ ಯಾವುದೇ ಮಗು ಎದುರಿಸದಂತೆ ರೋಹಿತ್ ವೇಮುಲಾ ಕಾಯ್ದೆಯನ್ನು ಜಾರಿಗೆ ತರಬೇಕೆಂದು ನಾನು ಕರ್ನಾಟಕ ಸರ್ಕಾರವನ್ನು ಒತ್ತಾಯಿಸುತ್ತೇನೆ” ಎಂದು ರಾಹುಲ್ ಗಾಂಧಿ ಹೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅವರ ಪತ್ರಕ್ಕೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ‘ಎಕ್ಸ್‌’ನಲ್ಲಿ ಟ್ವೀಟ್ ಮಾಡಿದ್ದು, “ಕರ್ನಾಟಕದಲ್ಲಿ ಯಾವುದೇ ವಿದ್ಯಾರ್ಥಿಯು ಜಾತಿ, ವರ್ಗ ಅಥವಾ ಧರ್ಮದ ಆಧಾರದ ಮೇಲೆ ತಾರತಮ್ಯವನ್ನು ಎದುರಿಸಬಾರದು. ಅದಕ್ಕಾಗಿ, ರೋಹಿತ್ ವೇಮುಲಾ ಕಾಯ್ದೆಯನ್ನು ಜಾರಿಗೆ ತರುವುದರಲ್ಲಿ ನಮ್ಮ ಸರ್ಕಾರದ ಸಂಕಲ್ಪ ದೃಢವಾಗಿದೆ. ರೋಹಿತ್, ಪಾಯಲ್, ದರ್ಶನ್ ಹಾಗೂ ಅಸಂಖ್ಯಾತ ಇತರರ ಕನಸುಗಳನ್ನು ಗೌರವಿಸಲು ನಾವು ರೋಹಿತ್ ಕಾಯ್ದೆಯನ್ನು ಜಾರಿಗೆ ತರುತ್ತೇವೆ” ಎಂದು ಹೇಳಿದ್ದಾರೆ.

“ಅಂಬೇಡ್ಕರ್ ಅವರ ಸಮಾನತೆಯ ದೃಷ್ಟಿಕೋನದ ಭಾರತದ ಸಾಕಾರಗೊಳಿಸುವತ್ತ ಇದು ಒಂದು ಹೆಜ್ಜೆಯಾಗಿದೆ” ಎಂದು ಹೇಳಿದ್ದಾರೆ.

ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿದ್ದ ರೋಹಿತ್ ವೇಮುಲಾ ಅವರು 2016ರಲ್ಲಿ ಜಾತಿ ಆಧಾರಿತ ತಾರತಮ್ಯದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದರು. ವಿಶ್ವವಿದ್ಯಾಲಯದ ಆಡಳಿತವು ಅವರು ನೀಡುತ್ತಿದ್ದ ಫೆಲೋಶಿಪ್‌ಅನ್ನು ಸ್ಥಗಿತಗೊಳಿಸಿತ್ತು. ಹಾಸ್ಟೆಲ್‌ನಿಂದ ಹೊರ ಹಾಕಿತ್ತು. ವಿಶ್ವವಿದ್ಯಾಯದ ಜಾತಿವಾದಿ ಧೋರಣೆಯ ವಿರುದ್ಧ ನಿರಂತರ ಪ್ರತಿಭಟನೆ ನಡೆಸಿದ್ದ ರೋಹಿತ್ ಅವರು ಕ್ಯಾಂಪಸ್‌ನ ಹಾಸ್ಟೆಲ್‌ ಕೊಠಡಿಯಲ್ಲಿ ಆತ್ಮಹತ್ಯಗೆ ಶರಣಾಗಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...