ಉಚಿತವಿದ್ದ ತಿದ್ದುಪಡಿ ಈಗ ದುಬಾರಿ | ದ್ವಿತೀಯ ಪಿಯುಸಿ ಅಂಕಪಟ್ಟಿ ತಿದ್ದಲು 1,600 ರೂ. ಶುಲ್ಕ

Date:

ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿಯ ಅಂಕಪಟ್ಟಿಗಳನ್ನು ತಿದ್ದುಪಡಿ ಮಾಡಿಸಲು ಬಯಸುವ ವಿದ್ಯಾರ್ಥಿಗಳು 1,600 ರೂ. ಶುಲ್ಕ ಪಾವತಿಸಬೇಕು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಹೇಳಿದೆ. ಈ ಹಿಂದೆ, ಅಂಕಪಟ್ಟಿಗಳಲ್ಲಿ ದೋಷಗಳು ಕಂಡುಬಂದಲ್ಲಿ, ಅಂತಹ ಅಂಕಪಟ್ಟಿಗಳನ್ನು ಉಚಿತವಾಗಿ ತಿದ್ದುಪಡಿ ಮಾಡಿಕೊಡಲಾಗುತ್ತಿತ್ತು. ಆದರೆ, ಈಗ ಬರೋಬ್ಬರಿ 1,600 ರೂ. ಶುಲ್ಕ ನಿಗದಿ ಮಾಡಲಾಗಿದೆ. ಇದು, ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಮತ್ತಷ್ಟು ಹೊರೆಯನ್ನು ಹೇರಲಿದೆ.

ವಿದ್ಯಾರ್ಥಿಗಳ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಅಂಕಪಟ್ಟಿಗಳಲ್ಲಿ ಹೆಸರು, ಜನ್ಮ ದಿನಾಂಕ, ಲಿಂಗ, ಭಾವಚಿತ್ರ ಸೇರಿದಂತೆ ಯಾವುದೇ ರೀತಿಯ ದೋಷಗಳು ಕಂಡುಬಂದಿಲ್ಲಿ, ಮಂಡಳಿಗೆ ಅರ್ಜಿ ಸಲ್ಲಿಸಿ ವಿದ್ಯಾರ್ಥಿಗಳು ಉಚಿತವಾಗಿ ತಿದ್ದುಪಡಿ ಪಡೆಯುತ್ತಿದ್ದರು. ಆದರೆ, ಈಗ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಶುಲ್ಕ ನಿಗದಿ ಮಾಡಿದೆ. ಇದರಿಂದ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ ಎಂದು ಆಕ್ಷೇಪಗಳು ವ್ಯಕ್ತವಾಗಿವೆ.

ಕಾಲೇಜುಗಳ ಪ್ರಾಂಶುಪಾಲರಿಗೆ ಮಂಡಳಿಯು ಸುತ್ತೋಲೆಯನ್ನು ಕಳುಹಿಸಿದೆ. ಆದೇಶದಲ್ಲಿ, “ಅಂಕಪಟ್ಟಿಯಲ್ಲಿ ತಿದ್ದುಪಡಿಗೆ ಮಂಡಳಿಯ ಇ-ಕಚೇರಿ ಕಡತದಲ್ಲಿ ಅನುಮೋದಿಸಿರುವಂತೆ ನಿಗದಿತ ಶುಲ್ಕ 1,600 ರೂ.ಗಳನ್ನು ಕೆ-2 ತಂತ್ರಾಂಶದಲ್ಲಿ ಲಾಗಿನ್ ಆಗಿ ಚಲನ್ ಪ್ರತಿ ಪಡೆದು ಬ್ಯಾಂಕ್‌ನಲ್ಲಿ ಹಣ ಪಾವತಿಸಬೇಕು. ಹಣ ಪಾವತಿಸಿದ ಮೂಲ ಕೆ-2 ಚಲನ್ ಪ್ರತಿ, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿಯ ದೃಢೀಕೃತ ಪ್ರತಿ ಮತ್ತು ದ್ವಿತೀಯ ಪಿಯುಸಿಯ ಮೂಲ ಅಂಕಪಟ್ಟಿಯನ್ನು ಅರ್ಜಿಯೊಂದಿಗೆ ಲಗತ್ತಿಸಿ ಮಂಡಳಿಗೆ ತಲುಪಿಸಬೇಕು. ಆ ಬಳಿಕ ಮಂಡಳಿಯಿಂದ ಪರಿಷ್ಕೃತ ಅಂಕಪಟ್ಟಿ ನೀಡಲಾಗುತ್ತದೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಈ ಹಿಂದೆ, ಅಂಕಪಟ್ಟಿ ತಿದ್ದುಪಡಿಗೆ ಯಾವುದೆ ಶುಲ್ಕವಿರಲಿಲ್ಲ. ಅಂಕಪಟ್ಟಿಯ ಉದ್ದೇಶಿತ ತಿದ್ದುಪಡಿಯನ್ನು ಸೂಚಿಸಿ ಕಾಲೇಜುಗಳ ಪ್ರಾಂಶುಪಾಲರು ಪ್ರಸ್ತಾವನೆಗಳನ್ನು ಮಂಡಳಿಯ ಅಂಕಪಟ್ಟಿ ಶಾಖೆಗೆ ಕಳಿಸುತ್ತಿದ್ದರು. ಮೂಲ ಅಂಕಪಟ್ಟಿಯಲ್ಲಿಯೇ ಬೆರಳಚ್ಚು ಯಂತ್ರದ ಮೂಲಕ ತಿದ್ದುಪಡಿ ಮಾಡಿ, ಇಲಾಖೆಯ ಮೊಹರಿನೊಂದಿಗೆ ದೃಢೀಕರಿಸಲಾಗುತ್ತಿತ್ತು.

ಈಗ ತಿದ್ದುಪಡಿಗೂ ಶುಲ್ಕ ವಿಧಿಸಲಾಗಿದೆ. ವಿಧಿಸಲಾಗಿರುವ ಶುಲ್ಕವೂ ದುಬಾರಿಯಾಗಿದ್ದು, ಸಾಮಾನ್ಯ ಮತ್ತು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ 1,600 ರೂ. ಶುಲ್ಕ ಪಾವತಿಸುವುದು ಸವಾಲಿನ ವಿಷಯವಾಗಿದೆ. ಹೀಗಾಗಿ, ಶಿಕ್ಷಣ ತಜ್ಞರು, ಪೋಷಕರು ದುಬಾರಿ ಶುಲ್ಕದ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ವರದಿ ಓದಿದ್ದೀರಾ?: ವಲಸೆ ಕಾರ್ಮಿಕರ ಮಕ್ಕಳ ರಕ್ಷಣೆ ಯಾರ ಹೊಣೆ?; ಅವರೂ ನಮ್ಮ ಮಕ್ಕಳಂತೆ ಅಲ್ಲವೇ?

“ಅಂಕಪಟ್ಟಿಗಳಲ್ಲಿನ ಲೋಪಕ್ಕೆ ಶಿಕ್ಷಣ ಇಲಾಖೆ ಮತ್ತು ಪರೀಕ್ಷಾ ಮಂಡಳಿಗಳೇ ಕಾರಣ. ಅವರು ಮಾಡುವ ಯಡವಟ್ಟಿಗೆ ವಿದ್ಯಾರ್ಥಿಗಳ ಮೇಲೆ ಹೊರೆ ಹೇರಬಾರದು. ಅಂಕಪಟ್ಟಿ ತಿದ್ದುಪಡಿಗೆ ಮಂಡಳಿಯು ಸುಲಭ ಮತ್ತು ಖರ್ಚು-ಕಡಿತ ಮಾರ್ಗಗಳನ್ನು ಕಂಡುಕೊಳ್ಳಬೇಕು. ಶಿಕ್ಷಣ ಪ್ರತಿಯೊಬ್ಬರ ಹಕ್ಕಾಗಿದ್ದು, ಇಂತಹ ದುಬಾರಿ ಶುಲ್ಕಗಳನ್ನು ವಿಧಿಸಿ, ಮಕ್ಕಳು ಶಿಕ್ಷಣದಿಂದ ವಂಚಿತರಾಗುವಂತೆ ಮಾಡಬಾರದು. ಈ ಹಿಂದಿನಂತೆ ಉಚಿತವಾಗಿಯೇ ಅಂಕಪಟ್ಟಿ ತಿದ್ದುಪಡಿ ಮಾಡುವುದನ್ನು ಮಂಡಳಿ ಮುಂದುವರೆಸಬೇಕು” ಎಂದು ಪೋಷಕರು ಆಗ್ರಹಿಸಿದ್ದಾರೆ.

ಈದಿನ.ಕಾಮ್ ಜೊತೆ ಮಾತನಾಡಿದ ಹೆಸರು ಹೇಳಲು ಇಚ್ಚಿಸಿದ ಶಿಕ್ಷಕರೊಬ್ಬರು, “ವಿದ್ಯಾರ್ಥಿಗಳು ಶಾಲೆ-ಕಾಲೇಜುಗಳಿಗೆ ಧಾಖಲಾಗುವಾಗದೇ ಸರಿಯಾದ ಮಾಹಿತಿಯನ್ನು ಒದಗಿಸಿರುತ್ತಾರೆ. ಆದರೆ, ಪರೀಕ್ಷೆ ನಡೆದು, ಅಂಕಪಟ್ಟಿ ಸಿದ್ದಪಡಿಸುವಾಗ ಶಿಕ್ಷಣ ಇಲಾಖೆ ಮತ್ತು ಮಂಡಳಿಯ ಸಿಬ್ಬಂದಿಗಳು ಲೋಪ ಎಸಗುತ್ತಾರೆ. ಅವರು ಮಾಡುವ ಲೋಪಕ್ಕೆ ವಿದ್ಯಾರ್ಥಿಗಳು, ಪೋಷಕರು ಶುಲ್ಕ ಪಾವತಿ ಮಾಡಬೇಕು ಎಂಬುದು ಸರಿಯಾದ ನಿರ್ಧಾರವಲ್ಲ. ಮಂಡಳಿಯು ತನ್ನ ಆದೇಶವನ್ನು ಹಿಂಪಡೆಯಬೇಕು” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...