2,000 ಕೋಟಿ ರೂ. ಹಗರಣ: ಎಎಪಿ ನಾಯಕ ಮನೀಶ್ ಸಿಸೋಡಿಯಾ ವಿರುದ್ಧ ಮತ್ತೊಂದು ಪ್ರಕರಣ

Date:

ದೆಹಲಿ ಮಾಜಿ ಉಪಮುಖ್ಯಮಂತ್ರಿ, ಎಎಪಿ ನಾಯಕ ಮನೀಶ್‌ ಸಿಸೋಡಿಯಾ ಮತ್ತು ಮಾಜಿ ಸಚಿವ ಸತ್ಯೇಂದರ್ ಜೈನ್ ವಿರುದ್ಧ ಹೊಸದಾಗಿ ಮತ್ತೊಂದು ಪ್ರಕರಣ ದಾಖಲಾಗಿದೆ. ಶಾಲಾ ಕೊಠಡಿಗಳ ನಿರ್ಮಾಣದಲ್ಲಿ 2,000 ರೂ. ಹಗರಣ ನಡೆಸಿದ್ದಾರೆ ಎಂಬ ಆರೋಪದ ಮೇಲೆ ದೆಹಲಿ ಭ್ರಷ್ಟಾಚಾರ ನಿಗ್ರಹ ದಳವು (ಎಸಿಬಿ) ಹೊಸ ಪ್ರಕರಣ ದಾಖಲಿಸಿದೆ.

ದೆಹಲಿಯಲ್ಲಿ ಹಿಂದಿನ ಎಎಪಿ ಸರ್ಕಾರದಲ್ಲಿ ಸಿಸೋಡಿಯಾ ಅವರು ಶಿಕ್ಷಣ ಖಾತೆ ಸಚಿವರಾಗಿದ್ದರು. ಜೈನ್ ಅವರು ಸರ್ಕಾರಿ ಕಟ್ಟಡಗಳ ನಿರ್ಮಾಣ ಸಂಸ್ಥೆ ಲೋಕೋಪಯೋಗಿ ಇಲಾಖೆಯ ಸಚಿವರಾಗಿದ್ದರು. ಎಎಪಿ ಸರ್ಕಾರದ ಅವಧಿಯಲ್ಲಿ 12,000ಕ್ಕೂ ಹೆಚ್ಚು ತರಗತಿ ಕೊಠಡಿ ಮತ್ತು ಶಾಲಾ ಕಟ್ಟಡಗಳನ್ನು ದುಬಾರಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇದರಲ್ಲಿ, 2,000 ಕೋಟಿ ರೂ. ಮೌಲ್ಯದ ಅಕ್ರಮ ನಡೆದಿದೆ ಎಂದು ಎಸಿಬಿ ಆರೋಪಿಸಿದೆ.

ತರಗತಿ ಕೊಠಡಿಗಳನ್ನು 30 ವರ್ಷಗಳ ಕಾಲ ಬಾಳಿಕೆ ಬರುವ ಅರೆ-ಶಾಶ್ವತ ರಚನೆ (ಸೆಮಿ-ಪರ್ಮನೆಂಟ್‌ ಸ್ಟ್ರಕ್ಚರ್ – ಎಸ್‌ಪಿಎಸ್) ಮಾದರಿಯಲ್ಲಿ ನಿರ್ಮಿಸಲಾಗಿದೆ. ಆದಾಗ್ಯೂ, ನಿರ್ಮಾಣ ವೆಚ್ಚವು 75 ವರ್ಷಗಳ ಜೀವಿತಾವಧಿ ಹೊಂದಿರುವ ಪಕ್ಕಾ ತರಗತಿ ಕೊಠಡಿಗಳ ವೆಚ್ಚಕ್ಕೆ ಸಮನಾಗಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿರುವಾಗಿ ಎಸಿಬಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಲಾ ಕೊಠಡಿಗಳ ನಿರ್ಮಾಣ ಯೋಜನೆಯ ಅನುಷ್ಠಾನಕ್ಕಾಗಿ ಕನಿಷ್ಠ 34 ಗುತ್ತಿಗೆದಾರರನ್ನು ನಿಯೋಜಿಸಲಾಗಿತ್ತು. ಅವರಲ್ಲಿ ಹೆಚ್ಚಿನವರು ಆಡಳಿತಾರೂಢ ಎಎಪಿ ಜೊತೆಗೆ ನಿಕಟ ಸಂಬಂಧ ಹೊಂದಿದ್ದಾರೆ. ಅಲ್ಲದೆ, ನಿಗದಿತ ಸಮಯದೊಳಗೆ ನಿರ್ಮಾಣ ಪೂರ್ಣಗೊಂಡಿಲ್ಲ. ವಿಳಂಬವು ವೆಚ್ಚದಲ್ಲಿ ಭಾರಿ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಎಸಿಬಿ ತಿಳಿಸಿದೆ.

ಈ ವರದಿ ಓದಿದ್ದೀರಾ?: ಸಿಂಧು ಜಲ ಒಪ್ಪಂದ ಸ್ಥಗಿತವು ಭಾರತಕ್ಕೇ ಹಾನಿಕಾರಕ; ಯಾಕೆ ಗೊತ್ತೇ?

ಈ ಹಿಂದೆ, ಎಎಪಿ ಸರ್ಕಾರದ ವಿರುದ್ಧ ಅಬಕಾರಿ ನೀತಿ ಹಗರಣದ ಆರೋಪ ಹೊರಿಸಲಾಗಿತ್ತು. ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ನಡೆಸಿದ ಆರೋಪದ ಮೇಲೆ ಮನೀಶ್‌ ಸಿಸೋಡಿಯಾ ಅವರನ್ನು ಬಂಧಿಸಲಾಗಿತ್ತು. ಆ ನಂತರದಲ್ಲಿ, ಇದೇ ಪ್ರಕರಣದಲ್ಲಿ ತೆಲಂಗಾಣದ ಬಿಆರ್‌ಎಸ್‌ ನಾಯಕಿ ಕೆ ಕವಿತಾ ಅವರನ್ನು ಬಂಧಿಸಲಾಗಿತ್ತು. ಕಳೆದ ಲೋಕಸಭಾ ಚುನಾವಣೆಯ ಸಮಯದಲ್ಲಿ ಆಗ ದೆಹಲಿ ಮುಖ್ಯಮಂತ್ರಿಯಾಗಿದ್ದ ಅರವಿಂದ ಕೇಜ್ರಿವಾಲ್ ಅವರನ್ನೂ ಬಂಧಿಸಲಾಗಿತ್ತು. ಪ್ರಸ್ತುತ, ಎಲ್ಲರೂ ಜಾಮೀನು ಪಡೆದು ಹೊರಬಂದಿದ್ದಾರೆ.

ಅಬಕಾರಿ ನೀತಿ ಪ್ರಕರಣದಲ್ಲಿ ಸಿಸೋಡಿಯಾ ಅವರು ನಿರಂತರ 2 ವರ್ಷಗಳ ಕಾಲ ಜೈಲಿನಲ್ಲಿದ್ದರು. ಇದೀಗ, ಅವರ ವಿರುದ್ಧ ಮತ್ತೊಂದು ಹೊಸ ಪ್ರಕರಣ ದಾಖಲಾಗಿದೆ. ಅವರನ್ನು ಮತ್ತೆ ಬಂಧಿಸುವ ಸಾಧ್ಯತೆಗಳಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...