ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಆರೋಪ: ಪ್ರಾಸಿಕ್ಯೂಷನ್‌ ಅನುಮತಿಗಾಗಿ ರಾಜ್ಯಪಾಲರಿಗೆ ಅರ್ಜಿ

Date:

ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಲುಕಿಸಿ, ಅವರು ಭ್ರಷ್ಟಾಚಾರ ಮಾಡಿದ್ದಾರೆ ಎಂದು ಆರೋಪಿಸಲು ಬಿಜೆಪಿ ಭಾರೀ ಕಸರತ್ತು ನಡೆಸಿತು. ಆದರೆ, ಅದು ಬಿಜೆಪಿಗೆ ಲಾಭ ತಂದುಕೊಡಲಿಲ್ಲ. ಸಿದ್ದರಾಮಯ್ಯ ಅವರನ್ನು ಆರೋಪಿ ಅಥವಾ ಭ್ರಷ್ಟಾಚಾರಿ ಎಂದು ಬಿಂಬಿಸಲು ಸಾಧ್ಯವಾಗಲಿಲ್ಲ. ಪ್ರಕರಣದ ತನಿಖೆ ನಡೆಸಿದ ಲೋಕಾಯುಕ್ತ, ‘ಬಿ ರಿಪೋರ್ಟ್‌’ ಸಲ್ಲಿಸಿದ್ದು, ಪ್ರಕರಣದ ಸದ್ದು ಕಡಿಮೆಯಾಗಿದೆ. ಇದೀಗ, ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಆರೋಪವನ್ನು ಮುನ್ನೆಲೆಗೆ ತರಲಾಗಿದ್ದು, ಅವರ ವಿರುದ್ಧದ ತನಿಖೆ ನಡೆಸಲು ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಲಾಗಿದೆ.

ಗಣಿ ಗುತ್ತಿಗೆ ನವೀಕರಣದ ಹೆಸರಲ್ಲಿ ಸಿದ್ದರಾಮಯ್ಯ ಅವರು 500 ಕೋಟಿ ರೂ. ಕಿಕ್‌ಬ್ಯಾಕ್ ಪಡೆದಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ರಾಮಮೂರ್ತಿ ಗೌಡ ಆರೋಪಿಸಿದ್ದಾರೆ. ಈ ಬಗ್ಗೆ ತನಿಖೆಗಾಗಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕೆಂದು ರಾಜ್ಯಪಾಲ ಥಾವರ್​​ಚಂದ್ ಗೆಹ್ಲೋಟ್​​ ಅವರಿಗೆ ಮನವಿ ಮಾಡಿದ್ದಾರೆ.

2015ರಲ್ಲಿ ಸಿದ್ದರಾಮಯ್ಯ ಅವರು ಮೊದಲ ಅವಧಿಯ ಮುಖ್ಯಮಂತ್ರಿಯಾಗಿದ್ದರು. ಆ ವೇಳೆ, “ಅವರು 8 ಗಣಿ ಗುತ್ತಿಗೆಗಳನ್ನು ಹರಾಜು ಹಾಕುವ ಬದಲು ನವೀಕರಣ ಮಾಡಿದ್ದರು. ಮಾತ್ರವಲ್ಲ, ಗಣಿ ಹಗರಣದಲ್ಲಿ ಆರೋಪಿಗಳಾಗಿರುವ ಮತ್ತು ತನಿಖೆ ಎದುರಿಸುತ್ತಿರುವ ಗಣಿ ಕಂಪೆನಿಗಳ ಪರವಾನಗಿಯನ್ನೂ ನವೀಕರಣ ಮಾಡಿದ್ದರು. ಈ ರೀತಿ ನವೀಕರಣ ಮಾಡಿಕೊಟ್ಟು, ಆ ಕಂಪನಿಗಳಿಂದ ಅವರು 500 ಕೋಟಿ ಕಿಕ್‌ಬ್ಯಾಕ್ ಪಡೆದಿದ್ದಾರೆ” ಎಂದು ರಾಮಮೂರ್ತಿ ಗೌಡ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಿದ್ದರಾಮಯ್ಯ ಅವರು ಕಿಕ್‌ಬ್ಯಾಕ್‌ ಪಡೆದಿದ್ದಾರೆ. ಈ ಬಗ್ಗೆ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿ ತನಿಖೆ ನಡೆಸಬೇಕು. ಅದಕ್ಕಾಗಿ, ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ-1988ರ ಸೆಕ್ಷನ್ 7, 9, 11, 12 ಹಾಗೂ 15 ಅಡಿ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರು ಅನುಮತಿ ನೀಡಬೇಕು” ಎಂದು ತಮ್ಮ ದೂರು ಪತ್ರದಲ್ಲಿ ಬರೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...