RSS – ಕೈಯಲ್ಲಿ ದೊಣ್ಣೆ ಹಿಡಿದು ಜನರನ್ನು ಹೆದರಿಸುವ ಭೂಗತ ಸಂಘಟನೆ: ಬಿ.ಕೆ ಹರಿಪ್ರಸಾದ್

Date:

ರಾಜ್ಯದಲ್ಲಿ ಆರ್‌ಎಸ್‌ಎಸ್‌ ಸೇರಿದಂತೆ ಯಾವುದೇ ಖಾಸಗಿ ಸಂಸ್ಥೆಗಳು ಅನುಮತಿ ಪಡೆಯದೆ ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ ಎಂದು ಸರ್ಕಾರವು ನಿಯಮ ರೂಪಿಸಿ, ಜಾರಿಗೊಳಿಸಿದೆ. ನೋಂದಣಿಯೇ ಆಗದೆ ದೇಶದಲ್ಲಿ ಸಕ್ರಿಯವಾಗಿರುವ ಆರ್‌ಎಸ್‌ಎಸ್‌ನ ಚಟುವಟಿಕೆಗಳ ವಿಚಾರವಾಗಿ ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಮತ್ತು ವಿಪಕ್ಷ ಬಿಜೆಪಿ ನಡುವೆ ವಾಗ್ವಾದ ನಡೆಯುತ್ತಿದೆ. ಆರ್‌ಎಸ್‌ಎಸ್‌ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್‌ ನಾಯಕ ಬಿ.ಕೆ ಹರಿಪ್ರಸಾದ್, “ಆರ್‌ಎಸ್‌ಎಸ್‌ ನೋಂದಣಿಯಾಗಿಲ್ಲ. ಇದು ದೊಣ್ಣೆ ಹಿಡಿದು ಜನರನ್ನು ಹೆದರಿಸುವ ಭೂಗತ ಸಂಘಟನೆ ಅಲ್ಲವೇ?” ಎಂದು ಆರ್‌ಎಸ್‌ಎಸ್‌ನ ಮುಖಂಡ ಬಿ.ಎಲ್‌ ಸಂತೋಷ್‌ ಅವರನ್ನು ಪ್ರಶ್ನಿಸಿದ್ದಾರೆ.

ಆರ್‌ಎಸ್‌ಎಸ್‌ ನೋಂದಣಿಯಾಗದ ಕುರಿತು ಟ್ವೀಟ್‌ ಮಾಡಿರುವ ಹರಿಪ್ರಸಾದ್, “ಆರ್‌ಎಸ್‌ಎಸ್‌ ಕೈಯಲ್ಲಿ ದೊಣ್ಣೆ ಹಿಡಿದು ಜನರಲ್ಲಿ ಭಯ ಹುಟ್ಟಿಸಬಹುದೇ ಹೊರತು ಭರವಸೆ ಮೂಡಿಸಲು ಸಾಧ್ಯವಿಲ್ಲ ಬಿ.ಎಲ್ ಸಂತೋಷ್‌ ಅವರೇ. ದೇಶದ ಜನರಲ್ಲಿ ಆತ್ಮವಿಸ್ವಾಸ, ಧೈರ್ಯ, ಭರವಸೆ ಮೂಡಿಸಿರುವುದು ಬಾಬಾ ಸಾಹೇಬರು ನೀಡಿರುವ ಸಂವಿಧಾನದಿಂದ ಮಾತ್ರ” ಎಂದಿದ್ದಾರೆ.

“ಪಥ ಸಂಚಲನ ಸಾಗುವ ದ್ವೇಷದ ಬೀದಿಯಲ್ಲಿ ಪ್ರೀತಿ ಹುಟ್ಟವುದಾದರೂ ಹೇಗೆ? ದೊಣ್ಣೆ, ಲಾಟಿ, ಬೂಟಿನ ಪಥಸಂಚಲನದಿಂದ ಸಮಾಜದಲ್ಲಿ ಭಯ, ದ್ವೇಷದ ವಾತಾವರಣ ಸೃಷ್ಟಿಸಲಾಗುತ್ತಿದೆ. ಪಥಸಂಚಲನದ ಉದ್ದೇಶವೇ ಭಯದ ವಾತಾವರಣದ ನಿರ್ಮಾಣ ಎನ್ನುವುದು ಸ್ಪಷ್ಟ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆರ್‌ಎಸ್‌ಎಸ್‌ ‘ಪೇಯ್ಡ್’ ಸಂಘಟನೆಯಲ್ಲ ಎಂದಾದರೇ ದೇಶ-ವಿದೇಶಿ ಮೂಲದಿಂದಲೂ ಹರಿದು ಬರುತ್ತಿರುವ ಹಣಕ್ಕೆ ಹೊಣೆ ಯಾರು? ಸಮಾಜ ಸೇವೆ ಮಾಡಲು ಆರ್.ಎಸ್.ಎಸ್ ಸರ್ಕಾರಿ ಸಂಸ್ಥೆಯೂ ಅಲ್ಲ, ಸರ್ಕಾರೇತರ ಸಂಸ್ಥೆಯೂ ಅಲ್ಲ, ಕನಿಷ್ಟ ನೊಂದಾವಣಿಯೂ ಆಗಿಲ್ಲ. ಹಾಗಾದರೆ ಇದೊಂದು ಭೂಗತ ಸಂಘಟನೆ ಅಲ್ಲವೇ? ವಿದೇಶದಿಂದ ಆರ್‌ಎಸ್ಎಸ್ ಗೆ ಮಾತ್ರ ಹಣ ಬರಲಿ ಎಂಬ ಕಾರಣಕ್ಕಾಗಿಯೇ ಅಲ್ಲವೇ ಎನ್.ಜಿ.ಓ ಗಳಿಗೆ ವಿದೇಶಿ ಫಂಡ್ ಬರುವುದನ್ನು ನಿಲ್ಲಿಸಿರುವುದು” ಎಂದಿದ್ದಾರೆ.

“ನೂರು ವರ್ಷದ ಇತಿಹಾಸದಲ್ಲಿ ದೊಣ್ಣೆ ಹಿಡಿದು ಸಾಗಿರುವ ಪಥಸಂಚಲನದಿಂದ ಸಮಾಜಕ್ಕೆ ಆಗಿರುವ ಲಾಭವೇನು? ಹಾದಿ ಬೀದಿಯಲ್ಲಿ ದೊಣ್ಣೆ ಹಿಡಿದು ಶಾಂತಿ-ಸುವ್ಯವಸ್ಥೆಯನ್ನು ಹಾಳು ಮಾಡಿದ್ದೇ ಸಾಧನೆಯೇ? ದೊಣ್ಣೆ ಜನರ ಕೈಗೆ ಸಿಕ್ಕಿ ಬಡಿಸಿಕೊಳ್ಳಬೇಡಿ, ಬೇಗ ಎಚ್ಚೆತ್ತುಕೊಳ್ಳದಿದ್ದರೇ ಸಂಘಕ್ಕೆ ಉಳಿಗಾಲವಿಲ್ಲ” ಎಂದು ಎಚ್ಚರಿಕೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...