ಪ್ರಧಾನಿ ಮೋದಿ ಮಣಿಪುರಕ್ಕೆ ಭೇಟಿ ಸಾಧ್ಯತೆ: ‘ಅವಸರದ ಪ್ರವಾಸ ಜನರಿಗೆ ಮಾಡುವ ಅವಮಾನ’ ಎಂದ ಕಾಂಗ್ರೆಸ್

Date:

ಪ್ರಧಾನಿ ನರೇಂದ್ರ ಮೋದಿ ಅವರು ಮಣಿಪುರಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಈ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯಿಸಿದ್ದು “ಇಂತಹ ಅವಸರದ ಪ್ರವಾಸ 29 ತಿಂಗಳುಗಳ ಕಾಲ ಅವರಿಗಾಗಿ ಕಾಯುತ್ತಿರುವ ರಾಜ್ಯದ ಜನರಿಗೆ ಮಾಡುವ ಅವಮಾನ” ಎಂದು ಹೇಳಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, “ಸೆಪ್ಟೆಂಬರ್ 13ರಂದು ಪ್ರಧಾನಿ ಮಣಿಪುರಕ್ಕೆ ನೀಡುವ ಪ್ರಸ್ತಾವಿತ ಭೇಟಿಯನ್ನು ಅವರ ಚಿಯರ್‌ಲೀಡರ್‌ಗಳು ಶ್ಲಾಘಿಸುತ್ತಿದ್ದಾರೆ. ಆದರೆ ಅವರು ರಾಜ್ಯದಲ್ಲಿ ಕೇವಲ 3 ಗಂಟೆಗಳು, ಹೌದು ಕೇವಲ 3 ಗಂಟೆಗಳು ಕಳೆಯಲಿದ್ದಾರೆ ಎಂದು ತೋರುತ್ತದೆ. ಇಂತಹ ಅವಸರದ ಪ್ರವಾಸದಿಂದ ಅವರು ಏನು ಸಾಧಿಸಲು ಆಶಿಸುತ್ತಾರೆ” ಎಂದು ಪ್ರಶ್ನಿಸಿದ್ದಾರೆ.

ಇದನ್ನು ಓದಿದ್ದೀರಾ? ಪ್ರಧಾನಿ ನರೇಂದ್ರ ಮೋದಿ ನಿಂದನೆ ಆರೋಪ: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಘರ್ಷಣೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದು ವಾಸ್ತವವಾಗಿ 29 ದೀರ್ಘ ಮತ್ತು ನೋವಿನ ತಿಂಗಳುಗಳಿಂದ ಅವರಿಗಾಗಿ (ಪ್ರಧಾನಿ ಮೋದಿ) ಕಾಯುತ್ತಿದ್ದ ರಾಜ್ಯದ ಜನರಿಗೆ ಮಾಡುವ ಅವಮಾನ. ಸೆಪ್ಟೆಂಬರ್ 13 ಪ್ರಧಾನಿಯವರ ಭೇಟಿಯಲ್ಲ, ಏಕೆಂದರೆ ಅವರು ಮಣಿಪುರದ ಜನರ ಬಗ್ಗೆ ತಮ್ಮ ನಿರ್ದಯತೆ ಮತ್ತು ಸಂವೇದನಾಶೀಲತೆಯನ್ನು ಮತ್ತೊಮ್ಮೆ ಬಹಿರಂಗಪಡಿಸಿದ್ದಾರೆ” ಎಂದು ತಿಳಿಸಿದ್ದಾರೆ.

ಹಾಗೆಯೇ ಪ್ರಧಾನಿ ಮಣಿಪುರದಲ್ಲಿ ಸುಮಾರು ಮೂರು ಗಂಟೆಗಳ ಕಾಲ ಇರುತ್ತಾರೆ ಎಂದು ಹೇಳಲಾದ ಮಾಧ್ಯಮ ವರದಿಯನ್ನೂ ಜೈರಾಮ್ ರಮೇಶ್ ಹಂಚಿಕೊಂಡಿದ್ದಾರೆ.

2023ರ ಮೇ ತಿಂಗಳಿನಿಂದ ಮಣಿಪುರದಲ್ಲಿ ಮೈತೇಯಿ ಮತ್ತು ಕುಕಿ ಸಮುದಾಯದ ನಡುವೆ ಜನಾಂಗೀಯ ಹಿಂಸಾಚಾರ ನಡೆಯುತ್ತಿದ್ದು, ಈವರೆಗೆ 250ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜೀನಾಮೆ ನೀಡಿದ್ದು ಕೇಂದ್ರ ಸರ್ಕಾರ ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಹೇರಿದೆ. ಹಾಗೆಯೇ 2027ರವರೆಗೆ ಅಧಿಕಾರಾವಧಿಯನ್ನು ಹೊಂದಿದ್ದ ರಾಜ್ಯ ವಿಧಾನಸಭೆಯನ್ನು ಅಮಾನತುಗೊಳಿಸಿದೆ.

ಆದರೆ ಮಣಿಪುರದಲ್ಲಿ ಇಷ್ಟೊಂದು ಬೆಳವಣಿಗೆಗಳು ನಡೆದಿದ್ದರೂ ಹಿಂಸಾಚಾರ ಆರಂಭವಾದ ಬಳಿಕ ಒಂದು ಬಾರಿಯೂ ಪ್ರಧಾನಿ ಮೋದಿ ಮಣಿಪುರಕ್ಕೆ ಭೇಟಿ ನೀಡಿಲ್ಲ. ಇದೀಗ ಸುಮಾರು ಎರಡು ವರ್ಷಗಳ ಬಳಿಕ ಸೆಪ್ಟೆಂಬರ್ 13ರಂದು ಪ್ರಧಾನಿ ಮಣಿಪುರಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...