ಅಧಿವೇಶನದ ಸಿದ್ಧತೆಯಲ್ಲಿ ಭ್ರಷ್ಟಾಚಾರ ಪ್ರಕರಣ; ಮರು ಪರಿಶೀಲನಾ ಅರ್ಜಿ ಸಲ್ಲಿಸಿದ ಎಸ್ ಮೂರ್ತಿ

Date:

  • ಪರಿಶಿಷ್ಟ ಜಾತಿಯ ಅಧಿಕಾರಿ ಎಂಬ ಕಾರಣಕ್ಕೆ ದುರುದ್ದೇಶದಿಂದ ಇಂತಹ ನಿರ್ಧಾರ
  • ಪೂರ್ವಗ್ರಹಪೀಡಿತ ವಿಚಾರಣಾ ವರದಿ ಆಧಾರಿಸಿ ಹುದ್ದೆಯಿಂದ ಕೆಳಕ್ಕಿಳಿಸಲಾಗಿದೆ

2016 ಮತ್ತು 2017ರಲ್ಲಿ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದ ಸಿದ್ಧತೆಯಲ್ಲಿ ಭ್ರಷ್ಟಾಚಾರ ನಡೆಸಿದ ಆರೋಪದ ಪ್ರಕರಣವನ್ನು ಪುನರ್ ಪರಿಶೀಲನೆ ನಡೆಸಿ, ದೋಷ ಮುಕ್ತಗೊಳಿಸಿ, ತಮಗೆ ಹಿಂದಿನ ಹುದ್ದೆಯನ್ನು ನೀಡುವಂತೆ ವಿಧಾನಸಭೆಯ ಅಧೀನ ಕಾರ್ಯದರ್ಶಿ ಎಸ್ ಮೂರ್ತಿ ವಿಧಾನಸಭೆ ಸಚಿವಾಲಯದ ವಿಶೇಷ ಮಂಡಳಿಗೆ ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದಾರೆ.

ಜೂನ್ 30ರಂದು ಹೊಸದಾಗಿ ಮರು ಪರಿಶೀಲನಾ ಅರ್ಜಿ ಸಲ್ಲಿಸಿರುವ ಅವರು, “ಲೆಕ್ಕ ಪರಿಶೋಧನಾ ಇಲಾಖೆಯ ಕೆಲವು ಅಧಿಕಾರಿಗಳಿಂದ ಅನಧಿಕೃತವಾಗಿ ಪಡೆದ ಲೆಕ್ಕ ಪರಿಶೋಧನಾ ವರದಿ ಆಧಾರದಲ್ಲಿ ನನ್ನ ವಿರುದ್ಧ ಕ್ರಮ ಜರುಗಿಸಲಾಗಿದೆ. ದಂಡನೆ ವಿಧಿಸಿ ವಿಧಾನಸಭೆಯ ಕಾರ್ಯದರ್ಶಿ ಹುದ್ದೆಯಿಂದ ಅಧೀನ ಕಾರ್ಯದರ್ಶಿ ಹುದ್ದೆಗೆ ಹಿಂಬಡ್ತಿ ನೀಡಲಾಗಿದೆ. ಶೋಕಾಸ್ ನೋಟಿಸ್‌ಗೆ ನಾನು ಉತ್ತರಿಸಿದ್ದರೂ ಆ ಬಗ್ಗೆ ಉಲ್ಲೇಖಿಸದೇ ದಂಡನಾ ಆದೇಶ ಹೊರಡಿಸಲಾಗಿದೆ” ಅರ್ಜಿಯಲ್ಲಿ ತಿಳಿಸಿದ್ದಾರೆ.

“ಎರಡೂ ಅಧಿವೇಶನಗಳಲ್ಲಿ ನಾನು ಕೈಗೊಂಡಿದ್ದ ತೀರ್ಮಾನಗಳಿಂದ ವಿಧಾನಸಭೆ ಸಚಿವಾಲಯಕ್ಕೆ ಆರ್ಥಿಕವಾಗಿ ಉಳಿತಾಯವಾಗಿದೆ. ಆದರೆ, ತಪ್ಪು ಲೆಕ್ಕಾಚಾರವನ್ನು ಆಧರಿಸಿ ನನ್ನ ವಿರುದ್ಧ ಕ್ರಮ ಜರುಗಿಸಲಾಗಿದೆ. ನಾನು ಪರಿಶಿಷ್ಟ ಜಾತಿಯ ಅಧಿಕಾರಿ ಎಂಬ ಕಾರಣಕ್ಕೆ ದುರುದ್ದೇಶದಿಂದ ಇಂತಹ ನಿರ್ಧಾರ ಕೈಗೊಳ್ಳಲಾಗಿದೆ. ಪೂರ್ವಗ್ರಹಪೀಡಿತವಾದ ವಿಚಾರಣಾ ವರದಿ ಆಧಾರದಲ್ಲಿ ಹುದ್ದೆಯಿಂದ ಕೆಳಕ್ಕೆ ಇಳಿಸಲಾಗಿದೆ” ಎಂದು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ನಾನು ಸಿದ್ದರಾಮಯ್ಯರ ಅಭಿಮಾನಿ, ಅವರ ಶಿಷ್ಯ; ಬಿಜೆಪಿ ನಾಯಕ ಎಸ್ ಟಿ ಸೋಮಶೇಖರ್‌ ಅಚ್ಚರಿಯ ಹೇಳಿಕೆ

“ನಿಯಮಾನುಸಾರ ಮರು ಪರಿಶೀಲನೆ ನಡೆಸುವಂತೆ ರಾಜ್ಯಪಾಲರಿಗೆ ನಾನು ಮನವಿ ಸಲ್ಲಿಸಿದ್ದೆ. ರಾಜ್ಯಪಾಲರು ನನ್ನ ಮನವಿಯನ್ನು ಮುಂದಿನ ಕ್ರಮಕ್ಕಾಗಿ ವಿಶೇಷ ಮಂಡಳಿಗೆ ಕಳುಹಿಸಿದ್ದಾರೆ. ಆದರೆ, ಈವರೆಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಪ್ರಕರಣದ ಮರು ಪರಿಶೀಲನೆ ನಡೆಸಲು ಮಂಡಳಿಗೆ ಕಾನೂನಿನಲ್ಲಿ ಅವಕಾಶವಿದೆ” ಎಂದು ತಿಳಿಸಿದ್ದಾರೆ.

“ದುರುದ್ದೇಶದಿಂದ ನೀಡಿದ ವಿಚಾರಣಾ ವರದಿ ಆಧಾರದಲ್ಲಿ ನನಗೆ ವಿಧಿಸಿರುವ ದಂಡನೆಯನ್ನು ರದ್ದುಪಡಿಸಿ, ವಿಧಾನಸಭೆ ಕಾರ್ಯದರ್ಶಿ ಹುದ್ದೆಗೆ ಮರು ನೇಮಕ ಮಾಡಬೇಕು. ಎಂ ಕೆ ವಿಶಾಲಾಕ್ಷಿ ಅವರಿಗೆ ಕಾರ್ಯದರ್ಶಿ ಹುದ್ದೆಗೆ ಬಡ್ತಿ ನೀಡಿರುವ ತೀರ್ಮಾನವನ್ನೂ ರದ್ದುಪಡಿಸಬೇಕು” ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...