108 ಆ್ಯಂಬುಲೆನ್ಸ್ ಸಿಬ್ಬಂದಿಗಳಿಗೆ ವೇತನ ಬಾಕಿ ಉಳಿಸಿಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Date:

“108 ಆರೋಗ್ಯ ಕವಚದ ಆ್ಯಂಬುಲೆನ್ಸ್ ಚಾಲಕರಿಗೆ ಸರ್ಕಾರದ ಕಡೆಯಿಂದ ಯಾವುದೇ ವೇತನ ಬಾಕಿ ಉಳಿಸಿಕೊಂಡಿಲ್ಲ” ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವರು, “ಆ್ಯಂಬುಲೆನ್ಸ್ ಚಾಲಕರಿಗೆ ನ್ಯಾಯಯುತವಾಗಿ ಸಿಗಬೇಕಾದ ವೇತನವನ್ನ ಸರ್ಕಾರ ನೀಡುತ್ತಿದೆ” ಎಂದರು.

“ಸರ್ಕಾರದಲ್ಲಿ ಯಾವುದೇ ಹಣಕಾಸಿನ ತೊಂದರೆ ಇಲ್ಲ. 108 ಅಂಬ್ಯುಲೆನ್ಸ್ ಯೋಜನೆ ಸುಗಮವಾಗಿ ನಡೆಸಲು ಆರ್ಥಿಕ ವರ್ಷ 2023-24 ನೇ ಸಾಲಿನಲ್ಲಿ ಆರ್ಥಿಕ ಇಲಾಖೆಯಿಂದ ಆರೋಗ್ಯ ಇಲಾಖೆಗೆ ರೂ. 210.33 ಕೋಟಿಗಳ ಅನುದಾನವನ್ನು ಆಯವ್ಯಯದಲ್ಲಿ ಅನುಮೋದನೆಯಾಗಿದ್ದು, ಸದರಿ ಅನುದಾನದಲ್ಲಿ ಸೇವಾದಾರರೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆಯನ್ವಯ ನಿಗದಿಯಾದ ರೂ. 162.40 ಕೋಟಿಗಳ ಪೂರ್ಣ ಅನುದಾನವನ್ನು ಸೇವಾದಾರರಿಗೆ ಬಿಡುಗಡೆಗೊಳಿಸಲಾಗಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“2024-25ನೇ ಸಾಲಿನಲ್ಲಿ 108-ಆರೋಗ್ಯ ಕವಚ ಯೋಜನೆಗೆ ಆರ್ಥಿಕ ಇಲಾಖೆಯಿಂದ ಆರೋಗ್ಯ ಇಲಾಖೆಗೆ ರೂ. 260.33 ಕೋಟಿಗಳ ಅನುದಾನವನ್ನು ಆಯವ್ಯಯದಲ್ಲಿ ಅನುಮೋದನೆಯಾಗಿದ್ದು, ಸೇವಾದಾರರೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆಯನ್ವಯ ವಾರ್ಷಿಕ ರೂ. 162.40 ಕೋಟಿಗಳ ಅನುದಾನವನ್ನು ಬಿಡುಗಡೆಗೊಳಿಸಬೇಕಾಗಿರುತ್ತದೆ. ಆರೋಗ್ಯ ಇಲಾಖೆ ಹಾಗೂ ಇ.ಎಂ.ಆರ್‌.ಐ ಗ್ರೀನ್‌ ಹೆಲ್ತ್‌ ಸಂಸ್ಥೆಯವರೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆಯ ಅನ್ವಯ 711 ಆಂಬ್ಯುಲೆನ್ಸ್‌ಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಿ ಸೇವೆ ಒದಗಿಸಿದ್ದಲ್ಲಿ ಪ್ರತಿ ತ್ರೈಮಾಸಿಕಕ್ಕೆ ರೂ. 40.60 ಕೋಟಿಗಳಂತೆ ವಾರ್ಷಿಕ ರೂ. 162.40 ಕೋಟಿಗಳ ಅನುದಾನವು ಬಿಡುಗಡೆಗೊಳಿಸಲಾಗುವುದು. ವಿಪಕ್ಷಗಳ ನಾಯಕರು ಅನಗತ್ಯವಾಗಿ ಗ್ಯಾರಂಟಿ ಯೋಜನೆಯಿಂದ ಹಣಕಾಸಿನ ತೊಂದರೆಯಾಗಿದೆ ಎಂದು 108 ಆರೋಗ್ಯ ಕವಚ ಯೋಜನೆಗೆ ತಳುಕು ಹಾಕುವುದರಲ್ಲಿ ಯಾವುದೇ ಹುರುಳಿಲ್ಲ” ಎಂದು‌ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು.

“ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 108 ವ್ಯವಸ್ಥೆಯಲ್ಲಿ ಒಂದಿಷ್ಟು ಲೋಪದೋಷಗಳು ಆಗಿರುವುದು ನಿಜ. 108 ಸಿಬ್ಬಂದಿಗಳಿಗೆ ಕನಿಷ್ಠಿ ವೇತನದ ಜಾರಿಗೊಳಿಸಿದ್ದಲ್ಲದೇ, ಸರ್ಕಾರದ ಅನುಮತಿ ಇಲ್ಲದೇ ನಿಯಮಬಾಹಿರವಾಗಿ ಶೇ 45ರಷ್ಟು ವೇತನ ಹೆಚ್ಚಳ ಮಾಡಲಾಗಿತ್ತು. ಇದೀಗ 108 ಸಿಬ್ಬಂದಿಗಳು ಶೇ. 45ರಷ್ಟು ವೇತನ ಹೆಚ್ಚಳ ಮಾಡಿರುವುದನ್ನ ಕಡಿತಗೊಳಿಸದಂತೆ ಬೇಡಿಕೆ ಇಡುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

“ನಮ್ಮ ಸರ್ಕಾರ ನಿಯಮಾನುಸಾರ ಕನಿಷ್ಠ ವೇತನ ನೀಡಲು ಬದ್ಧವಾಗಿದ್ದು, ಅದರಂತೆ ಅನುದಾನವನ್ನು ನೀಡುತ್ತಾ ಬಂದಿದೆ. ಪ್ರತಿಯೊಬ್ಬ ಆ್ಯಂಬುಲೆನ್ಸ್ ಚಾಲಕರಿಗೆ 35 ಸಾವಿರಕ್ಕೂ ಹೆಚ್ವು ವೇತನ ದೊರೆಯುತ್ತಿದೆ. ಇದರ ಮೇಲೂ ಮೂಲ ವೇತನದಲ್ಲಿ ಶೇ 45 ರಷ್ಟು ಹೆಚ್ಚಳ ಮಾಡುವ ಬಗ್ಗೆ ಸಿಬ್ಬಂದಿಗಳು ಬೇಡಿಕೆ ಇಟ್ಟಿದ್ದು, ನಿಯಮಬಾಹಿರವಾಗಿ ಈ ಕ್ರಮ ಕೈಗೊಳ್ಳಲು ಸದ್ಯದ ಪರಿಸ್ಥಿತಿಯಲ್ಲಿ ಸಾಧ್ಯವಿಲ್ಲ. ಈ ಬಗ್ಗೆ 108 ಸಿಬ್ಬಂದಿಗಳನ್ನ ಕರೆದು ಚರ್ಚಿಸಿ ಮನವರಿಕೆ ಮಾಡಿಕೊಡಲಾಗಿದೆ. ಅಲ್ಲದೇ, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಬದಲಾವಣೆ ಮಾಡಲು ಅವಕಾಶವಿಲ್ಲ ಎಂದು ಸಿಬ್ಬಂದಿಗಳಿಗೆ ತಿಳಿಸಲಾಗಿದೆ. ನ್ಯಾಯಯುತವಾಗು ಕನಿಷ್ಠ ವೇತನ ಸರ್ಕಾರ ನೀಡುತ್ತಿದ್ದು, ಸರ್ಕಾರದಲ್ಲಿ ಯಾವುದೇ ಹಣಕಾಸಿನ ಕೊರತೆಯಿಲ್ಲ” ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು.

“ಜಿವಿಕೆ ಇಎಂಆರ್ ಸಂಸ್ಥೆ ಹಾಗೂ ಚಾಲಕರ ನಡುವಿನ ವೇತನ ಪಾವತಿ ಸಮಸ್ಯೆಗಳ ಬಗ್ಗೆಯೂ ಸಂಸ್ಥೆಯವರೊಂದಿಗೆ ಇಲಾಖೆ ಆಯುಕ್ತರು ಚರ್ಚಿಸಿ, ವೇತನ ಬಾಕಿ ಉಳಿಸಿಕೊಳ್ಳದಂತೆ ಆದೇಶಿಸಿದ್ದಾರೆ. ಇದಕ್ಕೂ ಮೀರಿ 108 ಆ್ಯಂಬುಲೆನ್ಸ್ ಸಿಬ್ಬಂದಿಗಳು ಮುಷ್ಕರಕ್ಕೆ ಮುಂದಾದರೆ ಪರ್ಯಾಯ ವ್ಯವಸ್ಥೆಗೆ ಸರ್ಕಾರ ಸಿದ್ಧವಿದೆ. 108 ಆ್ಯಂಬುಲೆನ್ಸ್ ಸೇವೆಯನ್ನ ನಿಲ್ಲಿಸಲು ಸಾಧ್ಯವಿಲ್ಲ. ಅನಿವಾರ್ಯವಾಗಿ ಸರ್ಕಾರ ಪರ್ಯಾಯ ವ್ಯವಸ್ಥೆಗೆ ಮುಂದಾಗಬೇಕಾಗಲಿದೆ. ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ” ಎಂದು ಸಚಿವರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಬಿಜೆಪಿ-ಜೆಡಿಎಸ್ ನಾಯಕರ ಅಣತಿಯಂತೆ ದೇವರಾಜೇಗೌಡರಿಂದ ನನ್ನ ವಿರುದ್ಧ ಸುಳ್ಳು ಆರೋಪ: ಡಿ ಕೆ ಶಿವಕುಮಾರ್

“ಹಿಂದಿನ ಸರ್ಕಾರವಿದ್ದ ವೇಳೆ ವ್ಯವಸ್ಥೆಯಲ್ಲಾದ ಲೋಪವನ್ನ ನಮ್ಮ ಸರ್ಕಾರ ಸರಿಪಡಿಸುತ್ತಿದೆ. ಟೆಂಡರ್‌ಗಳನ್ನ ಕರೆಯದೇ ಜಿವಿಕೆ ಇಎಂಆರ್ ಸಂಸ್ಥೆಯೊಂದಿಗೆ ಒಡಂಬಡಿಕೆಯ ಮೂಲಕವೇ 108 ವ್ಯವಸ್ಥೆಯನ್ನ ಮುಂದುವರಿಸಿಕೊಂಡು ಬರಲಾಗಿದೆ. ನಮ್ಮ ಸರ್ಕಾರ ಬಂದ ಬಳಿಕ ನಿಯಮನುಸಾರ ಟೆಂಡರ್ ಕರೆಯಲು ಕ್ರಮ ಕೈಗೊಳ್ಳುತ್ತಿದೆ. ವ್ಯವಸ್ಥೆಯಲ್ಲಾದ‌ ಲೋಪಗಳನ್ನ ಸರಿಪಡಿಸುತ್ತಿರುವಾಗ ಸಿಬ್ಬಂದಿಗಳು ಸಹಕರಿಸಬೇಕು” ಎಂದು ಸಚಿವ ದಿನೇಶ್ ಗುಂಡೂರಾವ್ ಇದೇ ವೇಳೆ ಮನವಿ ಮಾಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...