NHM ಯೋಜನೆಯಡಿ ಕರ್ತವ್ಯ ನಿರ್ವಹಿಸುವ ವೈದ್ಯರು, ಸ್ಟಾಫ್ ನರ್ಸ್‌ಗಳಿಗೆ ವೇತನ ಹೆಚ್ಚಳ

Date:

ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದಡಿ ಕರ್ತವ್ಯ ನಿರ್ವಹಿಸುತ್ತಿರುವ ಎಂಬಿಬಿಎಸ್ ವೈದ್ಯರು, ತಜ್ಞ ವೈದ್ಯರು ಮತ್ತು ಎಸ್​​ಎನ್​​ಸಿಯು ಹಾಗೂ ಐಸಿಯುದಲ್ಲಿ ಕಾರ್ಯ ನಿರ್ವಹಿಸುವ ಸ್ಟಾಫ್ ನರ್ಸ್​ಗಳ ವೇತನ ಪರಿಷ್ಕರಿಸಿ ಗಣನೀಯವಾಗಿ ಹೆಚ್ಚಳ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

ಶೇಷಾದ್ರೀಪುರಂ ಕಚೇರಿಯಲ್ಲಿ ಆರೋಗ್ಯ ಇಲಾಖೆಯ ಕುರಿತು ಸುದ್ದಿಗೋಷ್ಠಿ ಕರೆದು ಮಾಹಿತಿ ಹಂಚಿಕೊಂಡ ಅವರು, ಎಂಬಿಬಿಎಸ್‌ ವೈದ್ಯರಿಗೆ 60 ಸಾವಿರ ರೂ. (ಹಿಂದಿನ ವೇತನ: 46,895-50,000 ರೂ.), ತಜ್ಞ ವೈದ್ಯರಿಗೆ 1,40,000 ರೂ. (ಹಿಂದಿನ ವೇತನ : 1,10,000 – 1,30,000) ಹಾಗೂ ಸ್ಟಾಫ್‌ ನರ್ಸ್‌ಗಳಿಗೆ 22 ಸಾವಿರ ರೂ. (ಹಿಂದಿನ ವೇತನ : 14,186 – 18,774 ರೂ.) ವೇತನ ನಿಗದಿಗೊಳಿಸಲಾಗಿದೆ” ಎಂದು ತಿಳಿಸಿದರು.

“ಪ್ರಮುಖ ಕ್ಲಿನಿಕಲ್ ತಜ್ಞ OBG, ಪೀಡಿಯಾಟ್ರಿಕ್, ಅರಿವಳಿಕೆ, ಜನರಲ್ ಮೆಡಿಸಿನ್, ಆರ್ಥೋ, ಸರ್ಜನ್, ನೇತ್ರಶಾಸ್ತ್ರಜ್ಞ)” ಹುದ್ದೆಗೆ ಆರಂಭಿಕ ವೇತನ ರೂ. 1,40,000.00 ನಿಗದಿಯಾಗಿದ್ದು, ಅನುಭವ ಹೊಂದಿರುವ ಅಭ್ಯರ್ಥಿಗಳು ಆಯ್ಕೆಯಾದಲ್ಲಿ, ಪ್ರತಿ ವರ್ಷದ ಅನುಭವಕ್ಕೆ 2.5 % ರಷ್ಟು ಹೆಚ್ಚುವರಿ ವೇತನವನ್ನು ಸಹ ನೀಡಲಾಗುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪರಿಷ್ಕರಿಸಲ್ಪಟ್ಟ ವೇತನವು ಹೊಸದಾಗಿ ನೇಮಕಗೊಂಡ ಸಿಬ್ಬಂದಿಗಳಿಗೆ ಮಾತ್ರ ಅನ್ವಯಿಸುತ್ತಿದ್ದು, ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ಹಾಲಿ ಪಡೆಯುತ್ತಿರುವ ವೇತನ ಶ್ರೇಣಿಯಲ್ಲಿಯೇ ಮಂದುವರಿಯುತ್ತಾರೆ. ಈ ನೌಕರರು ರಾಜೀನಾಮೆ ಸಲ್ಲಿಸಿ, ಹೊಸ ನೇಮಕಾತಿಯಲ್ಲಿ ಪಾಲ್ಗೊಳ್ಳಬಹುದಾಗಿರುತ್ತದೆ. ಹೊಸ ನೇಮಕಾತಿ ಮಾಡುವ ಸಂದರ್ಭದಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಅವರ ಅನುಭವದ ಆಧಾರದ ಮೇಲೆ (ಪ್ರತಿ ವರ್ಷದ ಅನುಭವಕ್ಕೆ 2 ಅಂಕಗಳು) ಆದ್ಯತೆ ನೀಡುವುದು” ಎಂದರು.

ಈ ಸುದ್ದಿ ಓದಿದ್ದೀರಾ? ಎರಡು ವರ್ಷದಲ್ಲಿ ಒಮ್ಮೆಯೂ ರಾಜ್ಯದ ಪರವಾಗಿ ಸಂಸದರು ಮಾತನಾಡಿಲ್ಲ: ಸಿಎಂ ಸಿದ್ದರಾಮಯ್ಯ

ಸರ್ಕಾರದಿಂದಲೇ 108 ಆ್ಯಂಬುಲೆನ್ಸ್ ಸೇವೆ

“ಸರ್ಕಾರವೇ ಇನ್ಮುಂದೆ 108 ಆ್ಯಂಬುಲೆನ್ಸ್ ಸೇವೆ ನೀಡುತ್ತದೆ. ಯಾವುದೇ ಏಜೆನ್ಸಿ ಮೂಲಕ 108 ಆ್ಯಂಬುಲೆನ್ಸ್ ಕಾರ್ಯ ನಡೆಯುವುದಿಲ್ಲ. ಈಗಾಗಲೇ ಚಾಮರಾಜನಗರದಲ್ಲಿ ಪ್ರಾಯೋಗಿಕವಾಗಿ ನಡೆಸಲಾಗುತ್ತಿದೆ. ಸಂಪೂರ್ಣ ಸರ್ವಿಸ್ ಹಾಗೂ ನಿರ್ವಹಣೆ ಸರ್ಕಾರವೇ ನಡೆಸಲು ಮುಂದಾಗಿದೆ” ಎಂದು ತಿಳಿಸಿದರು.

30 ಸಾವಿರ ಸಿಬ್ಬಂದಿ ವೇತನವಾಗದ ವಿಚಾರವಾಗಿ ಪ್ರತಿಕ್ರಿಯಿಸಿ, “2023-24 ರಲ್ಲಿ ಓಪನಿಂಗ್ ಬ್ಯಾಲೆನ್ಸ್ ಹೆಚ್ಚು ಇರ್ತಾ ಇತ್ತು. ಆದರೆ ಕಳೆದ ಸರ್ಕಾರದಿಂದ ಓಪನಿಂಗ್ ಬ್ಯಾಲೆನ್ ಕಡಿಮೆಯಾಗಿದೆ. ಹೀಗಾಗಿ ನಾವು ರಾಜ್ಯ ಸರ್ಕಾರದಿಂದ ಕೊಡಲು ಆಗುತ್ತಿಲ್ಲ. ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ. ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡದ ಹಿನ್ನಲೆ ಕೊಂಚ ಲೇಟ್ ಆಗಿದೆ. ಇನ್ನೇರಡು ಮೂರು ದಿನಗಳಲ್ಲಿ ವೇತನ ಆಗಬಹುದು. ನಾವು ಯಾವುದೇ ವೇತನ ತಡೆ ಹಿಡದಿಲ್ಲ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...