ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನ: ಮತ್ತೆ ಸ್ಯಾಮ್ ಪಿತ್ರೋಡಾರನ್ನೇ ನೇಮಿಸಿದ ಕಾಂಗ್ರೆಸ್

Date:

ಲೋಕಸಭೆ ಚುನಾವಣೆ ವೇಳೆ ಭಾರತೀಯರ ಬಣ್ಣದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ, ರಾಜೀನಾಮೆ ನೀಡಿದ್ದ ಸ್ಯಾಮ್ ಪಿತ್ರೋಡಾ ಅವರನ್ನು ಮತ್ತೆ ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷರನ್ನಾಗಿ ಎಐಸಿಸಿ ನೇಮಕ ಮಾಡಿದೆ.

“ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷರನ್ನಾಗಿ ಸ್ಯಾಮ್‌ ಪಿತ್ರೋಡಾ ಅವರನ್ನು ಮರು ನೇಮಕ ಮಾಡಿ ಎಐಸಿಸಿ ಅಧ್ಯಕ್ಷರು ಆದೇಶ ಹೊರಡಿಸಿದ್ದಾರೆ. ತತ್‌ಕ್ಷಣದಿಂದಲೇ ಅವರು ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ” ಎಂಬುದಾಗಿ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಮೆರಿಕದಲ್ಲಿರುವಂತೆ ಪಿತ್ರಾರ್ಜಿತ ಆಸ್ತಿಯ ಮೇಲೆ ತೆರಿಗೆ ಹಾಕುವ ಪದ್ಧತಿಯನ್ನು ಭಾರತದಲ್ಲೂ ಜಾರಿಗೆ ತರಬೇಕು” ಹಾಗೂ “ದಕ್ಷಿಣ ಭಾರತೀಯರು ನೋಡಲು ಆಫ್ರಿಕನ್ನರಂತೆ ಇದ್ದಾರೆ” ಎಂಬುದಾಗಿ ಲೋಕಸಭೆ ಚುನಾವಣೆ ಹೊತ್ತಿನಲ್ಲೇ ಸ್ಯಾಮ್‌ ಪಿತ್ರೋಡಾ ಹೇಳಿಕೆ ನೀಡಿದ್ದರು. ಇದು ಭಾರೀ ವಿವಾದಕ್ಕೆ ಎಡೆಮಾಡಿಕೊಟ್ಟಿತ್ತು.

ಚುನಾವಣಾ ಭಾಷಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಹಿಡಿದು ಬಿಜೆಪಿಯ ಹಲವು ನಾಯಕರು ಸ್ಯಾಮ್‌ ಪಿತ್ರೋಡಾ ಹೇಳಿಕೆಯನ್ನು ಖಂಡಿಸಿದ್ದರು. ಇದರ ಹಿನ್ನೆಲೆಯಲ್ಲಿ ಸ್ಯಾಮ್‌ ಪಿತ್ರೋಡಾ ಅವರು ಮೇ 8ರಂದು ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದರು.

“ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ಸ್ಯಾಮ್‌ ಪಿತ್ರೋಡಾ ನಿರ್ಧರಿಸಿದ್ದಾರೆ. ಇದು ಅವರು ಸ್ವ-ಇಚ್ಛೆಯಿಂದ ತೆಗೆದುಕೊಂಡಿರುವ ತೀರ್ಮಾನವಾಗಿದೆ. ಅವರ ನಿರ್ಧಾರವನ್ನು ಕಾಂಗ್ರೆಸ್‌ ಅಧ್ಯಕ್ಷರು ಸ್ವಾಗತಿಸಿದ್ದಾರೆ” ಎಂದು ಅವರ ರಾಜೀನಾಮೆಯನ್ನು ಅಂಗೀಕರಿಸುತ್ತಾ ಕಾಂಗ್ರೆಸ್‌ನ ಹಿರಿಯ ನಾಯಕ ಜೈರಾಮ್‌ ರಮೇಶ್‌ ಹೇಳಿದ್ದರು.

ಪಿತ್ರೋಡಾ ಹೇಳಿದ್ದೇನು?

ಮಾಧ್ಯಮವೊಂದಕ್ಕೆ ಸಂದರ್ಶನ ನೀಡುವ ವೇಳೆ ಭಾರತದ ವೈವಿಧ್ಯತೆಯ ಬಗ್ಗೆ ಸ್ಯಾಮ್‌ ಪಿತ್ರೋಡಾ ಮಾತನಾಡಿದ್ದರು. ಈ ವೇಳೆ ಭಾರತದ ವಿವಿಧ ಭಾಗಗಳ ಜನತೆಯನ್ನು ಚೀನಿಯರು, ಅರಬ್ಬರು, ಬಿಳಿಯರು ಮತ್ತು ಆಫ್ರಿಕನ್ನರಿಗೆ ಹೋಲಿಸಿದ್ದರು. ಇದು ವಿವಾದ ಹುಟ್ಟು ಹಾಕಿತ್ತು.

“ನಾವು ಜಗತ್ತಿನಲ್ಲಿ ಪ್ರಜಾಪ್ರಭುತ್ವದ ಉಜ್ವಲ ಉದಾಹರಣೆಯಾಗಿದ್ದೇವೆ. ನಾವು ವೈವಿಧ್ಯತೆಯನ್ನು ಒಟ್ಟಿಗೆ ಹಿಡಿದಿಟ್ಟುಕೊಂಡಿರುವ ದೇಶವಾಗಿದ್ದೇವೆ. ಇಲ್ಲಿ ಪೂರ್ವದಲ್ಲಿರುವ ಜನರು ಚೀನಿಯರಂತೆ ಕಾಣುತ್ತಾರೆ. ಪಶ್ಚಿಮದಲ್ಲಿ ಜನರು ಅರಬ್ಬರಂತೆ, ಉತ್ತರದ ಜನರು ಬಹುಶಃ ಶ್ವೇತವರ್ಣೀಯರಂತೆ ಹಾಗೂ ದಕ್ಷಿಣದ ಜನರು ದಕ್ಷಿಣ ಆಫ್ರಿಕಾದವರಂತೆ ಕಾಣುತ್ತಾರೆ. ಪರವಾಗಿಲ್ಲ, ನಾವೆಲ್ಲರೂ ಸಹೋದರರು ಮತ್ತು ಸಹೋದರಿಯರು. ಇಷ್ಟೆಲ್ಲ ವೈವಿಧ್ಯತೆ ಇಟ್ಟುಕೊಂಡು ಬದುಕುತ್ತಿದ್ದೇವೆ” ಎಂದು ಪಿತ್ರೋಡಾ ಹೇಳಿಕೆ ನೀಡಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...