ದಾವಣಗೆರೆಗೆ ಸಮರ್ಥ್, ಬಾಗಲಕೋಟೆಗೆ ಉಮೇಶ್: ಕಾಂಗ್ರೆಸ್ ಅಧಿಕೃತ ಘೋಷಣೆ

Date:

ರಾಜ್ಯದ 2 ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್‌ ಟಿಕೆಟ್‌ ಘೋಷಣೆ ಮಾಡಿದ್ದು, ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಶಾಮನೂರು ಶಿವಶಂಕರಪ್ಪನವರ ಮೊಮ್ಮಗ ಸಮರ್ಥ್ ಶಾಮನೂರು, ಬಾಗಲಕೋಟೆ ಟಿಕೆಟ್‌ ಎಚ್‌ ವೈ ಮೇಟಿ ಅವರ ಕಿರಿಯ ಪುತ್ರ ಉಮೇಶ್‌ ಮೇಟಿಗೆ ಟಿಕೆಟ್‌ ಘೋಷಣೆ ಮಾಡಲಾಗಿದೆ.

ಈ ಮೂಲಕ ಕಾಂಗ್ರೆಸ್‌ ಟಿಕೆಟ್‌ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದ್ದು, ಭಾನುವಾರ ಬೆಳಿಗ್ಗೆ ಅಧಿಕೃತ ಟಿಕೆಟ್‌ ಘೋಷಣೆ ಮಾಡಿ ಎಐಸಿಸಿ ರಾಷ್ಟ್ರೀಯ ಕಾರ್ಯದರ್ಶಿ ವೇಣುಗೋಪಾಲ್‌ ಆದೇಶ ಹೊರಡಿಸಿದ್ದಾರೆ.

ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಅವರ ಮೊಮ್ಮಗ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ ಅವರಿಗೆ ಟಿಕೆಟ್‌ ಘೋಷಿಸಲಾಗಿದೆ. ಆದರೆ ಈ ಕ್ಷೇತ್ರದಲ್ಲಿ ಮುಸ್ಲಿಂ ಪ್ರಾಬಲ್ಯ ಇರುವುದರಿಂದ ಮುಸ್ಲಿಂ ನಾಯಕರು ತಮ್ಮ ಸಮುದಾಯಕ್ಕೆ ಟಿಕೆಟ್‌ ನೀಡಬೇಕೆಂದು ಪಟ್ಟು ಹಿಡಿದಿದ್ದರು. ಸಚಿವ ಜಮೀರ್ ಅಹ್ಮದ್ ಖಾನ್ ನೇತೃತ್ವದಲ್ಲಿ ಅಲ್ಪಸಂಖ್ಯಾತ ನಾಯಕರು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಅಭ್ಯರ್ಥಿಯನ್ನು 50 ಸಾವಿರ ಮತಗಳ ಅಂತರದಿಂದ ಸೋಲಿಸುವ ಎಚ್ಚರಿಕೆ ನೀಡಿದ್ದರು. ಆದರೆ ಅದಕ್ಕೆ ಮಣೆ ಹಾಕದ ಹೈಕಮಾಂಡ್‌ ಸಮರ್ಥ್‌ಗೆ ಟಿಕೆಟ್‌ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ? ಬಾಗಲಕೋಟೆ ಉಪಚುನಾವಣೆ | ಮೇಟಿ ಪುತ್ರನನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧಾರ

ಬಾಗಲಕೋಟೆ ಕ್ಷೇತ್ರದಲ್ಲಿ ದಿವಂಗತ ಶಾಸಕ ಎಚ್ ವೈ ಮೇಟಿ ಅವರ ಮಕ್ಕಳಾದ ಮಲ್ಲಿಕಾರ್ಜುನ್, ಉಮೇಶ್ ಮತ್ತು ಮಹಾದೇವಿ ನಡುವೆ ಬಹಿರಂಗವಾಗಿಯೇ ಭಾರೀ ಜಗಳ ನಡೆದಿತ್ತು. ಅಲ್ಲದೆ ಎಚ್‌ ವೈ ಮೇಟಿ ಅವರ ಕುಟುಂಬಕ್ಕೆ ಟಿಕೆಟ್ ನೀಡದಿದ್ದರೆ, ನಮಗೇ ನೀಡಬೇಕೆಂದು ಈ ಹಿಂದೆ ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿರುವ ವೀಣಾ ಕಾಶಪ್ಪನವರ ಮತ್ತು ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷರಾಗಿದ್ದ ರಕ್ಷಿತಾ ಈಟಿ ಹೇಳಿಕೆ ನೀಡಿದ್ದರು. ಸಿಎಂ ಹಾಗೂ ಡಿಸಿಎಂ ನೇತೃತ್ವದಲ್ಲಿ ಸಂಧಾನ ಸಭೆ ಯಶಸ್ವಿಯಾಗಿದ್ದು, ಅಂತಿಮವಾಗಿ ಕುಟುಂಬದ ಒಮ್ಮತದ ಮೇರೆಗೆ, ಕುರುಬ ಸಮುದಾಯದ ಮತಗಳನ್ನು ಭದ್ರಪಡಿಸಿಕೊಳ್ಳುವ ಉದ್ದೇಶದಿಂದ ಉಮೇಶ್ ಮೇಟಿ ಅವರಿಗೆ ಟಿಕೆಟ್‌ ನೀಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...