ಸಂಡೂರು | ಸಚಿವ ಸಂತೋಷ್ ಲಾಡ್ ಅವರ ಆರ್ಥಿಕ ಭಾಷಣಕ್ಕೆ ಸಿಎಂ ಸಿದ್ದರಾಮಯ್ಯ ಫಿದಾ!

Date:

2013-18ರ ಅವಧಿಯಲ್ಲಿ ತೆರಿಗೆ ಸಂಗ್ರಹದಲ್ಲಿ ಮುಂಚೂಣಿಯಲ್ಲಿದ್ದ ಕರ್ನಾಟಕ ರಾಜ್ಯ ಈಗ ಜಿಡಿಪಿ ಪ್ರಗತಿಯಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಕೇಂದ್ರ ಸರಕಾರದ ಆಯವ್ಯಯದ ವರದಿಯಲ್ಲಿ ದೇಶದಲ್ಲಿ ಜಿಡಿಪಿ ಬೆಳವಣಿಗೆ ಸುಮಾರು 8.2%ಇದ್ದರೆ ಕರ್ನಾಟಕದಲ್ಲಿ ಶೇ.10% ಬೆಳವಣಿಗೆಯಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ವಿವರಿಸಿದರು.

ಅವರು ಇಂದು (ಡಿ.8) ಸಂಡೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಮತದಾರರಿಗೆ ಕೃತಜ್ಞತಾ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿ, “ಈ ಬೆಳವಣಿಗೆಗೆ ನಮ್ಮ ಕಾರ್ಯಕ್ರಮಗಳು ಕಾರಣ. ಕೇಂದ್ರದಲ್ಲಿ ಅಧಿಕಾರ ನಡೆಸಿದ ಕಾಂಗ್ರೆಸ್ ಹಿಂದಿನ 50 ವರ್ಷಗಳ ಕಾಲ ರೂಪಿಸಿ ಜಾರಿ ಮಾಡಿದ ಕಾರ್ಯಕ್ರಮಗಳ ಒಟ್ಟು ಪರಿಣಾಮದಲ್ಲಿ ದೇಶದ ಜಿಡಿಪಿ ಬೆಳವಣಿಗೆ ಸುಮಾರು 51% ಇದೆ. ಇದನ್ನು ಸಾಧಿಸಲು ನಮ್ಮ ಸರ್ಕಾರದ ಕಾರ್ಯಕ್ರಮಗಳು ಕಾರಣ” ಎಂದರು.

“2013-18 ರ ಅವಧಿಯಲ್ಲಿ ತೆರಿಗೆ ಸಂಗ್ರಹದಲ್ಲಿ ನಾವು ಮುಂಚೂಣಿಯಲ್ಲಿದ್ದೆವು ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳಿಗೆ ಮಾಡುವ ವೆಚ್ಚವೂ ರಾಜ್ಯದಲ್ಲಿ ಹೆಚ್ಚು. ಪಂಚ ಗ್ಯಾರಂಟಿ ಕಾರ್ಯಕ್ರಮ ಗಳಿಗಾಗಿ 60 ಸಾವಿರ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗುತ್ತಿದೆ. ದೇಶದ ಬುನಾದಿಯನ್ನು ಹಾಕುವಲ್ಲಿ ಕರ್ನಾಟಕದಲ್ಲಿ ವಿಶೇಷವಾಗಿ ಬಡವರಿಗೆ ಅನುಕೂಲವಾಗುವ ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ಹಮ್ಮಿಕೊಂಡಿದೆ. ಬಿಸಿಯೂಟ, ಅಂಗನವಾಡಿಗಳು, ವಿಧಾವ ವೇತನ, ವೃದ್ಧಾಪ್ಯ ವೇತನ ಮುಂತಾದ ಬಡವರ ಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಡವರಿಗಾಗಿ ಹೆಚ್ಚು ಅನುದಾನ

“ರೈತರಿಗೆ ಮೂರು ಲಕ್ಷದವರೆಗೆ ಬಡ್ಡಿ ರಹಿತ ಸಾಲಕ್ಕಾಗಿ ಸುಮಾರು 9.50 ಕೋಟಿ ರೂಪಾಯಿಗಳನ್ನು ಒದಗಿಸಿದೆ.8165 ಕೋಟಿ ರೂ.ಗಳ ರೈತರ ಸಾಲ ಮನ್ನಾ ಮಾಡಲಾಗಿದೆ. ಎಸ್.ಸಿ.ಎಸ್. ಟಿ ಸಾಲ ಮನ್ನಾ, ಗ್ರಾಮ ಪಂಚಾಯತಿಗಳಿಗೆ 3700 ಕೋಟಿ ಅನುದಾನವನ್ನು ನೀಡಲಾಗಿದೆ. ಆಶ್ರಯ ಯೋಜನೆಯಡಿ 2,633 ಕೋಟಿ ರೂಪಾಯಿ , 2013-18 ರ ಅವಧಿಯಲ್ಲಿ 18 ಸಾವಿರ ಕೋಟಿ ಗಳಿಗೂ ಹೆಚ್ಚು ಅನುದಾನ ನೀಡಿ ಬಡವರಿಗೆ ಅನುಕೂಲ ಮಾಡಿರುವುದಲ್ಲದೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 80 ಸಾವಿರ ಕೋಟಿಗಳನ್ನು ವೆಚ್ಚ ಮಾಡಿದೆ” ಎಂದರು.

“ಕೇಂದ್ರದಲ್ಲಿ ನಮ್ಮ ಪಕ್ಷ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ 72 ಸಾವಿರ ಕೋಟಿ ಸಾಲ ಮನ್ನಾ ಮಾಡಲಾಗಿದೆ.ನಮ್ಮ ಸರ್ಕಾರ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ದೇಶದಲ್ಲಿ 26 ಸಾವಿರ ಕೋಟಿ ಕೈಗಳಿಗೆ ಕೆಲಸವನ್ನು ಒದಗಿಸಲಾಗಿದೆ” ಎಂದು ತಿಳಿಸಿದರು.‌

ವೇದಿಕೆಯಲ್ಲಿ ಸಚಿವ ಸಂತೋಷ್ ಲಾಡ್ ಭಾಷಣ ಮಾಡುತ್ತಿದ್ದರೆ ಸಿಎಂ ಸಿದ್ದರಾಮಯ್ಯ ಅವರ ಕಡೆಯೇ ದೃಷ್ಟಿಯಿಟ್ಟು ಕೇಳುತ್ತಿದ್ದರು. ಭಾಷಣ ಮುಗಿಸಿ ಸಿಎಂ ಪಕ್ಕದಲ್ಲಿ ಲಾಡ್‌ ಬಂದು ಕೂರುತ್ತಿದ್ದಂತೆ ಸಿದ್ದರಾಮಯ್ಯ ಅವರು ಲಾಡ್‌ ಅವರ ಬೆನ್ನು ತಟ್ಟಿ ಪ್ರೋತ್ಸಾಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...