ಸಂಘಪರಿವಾರ ಕರೆ ಕೊಟ್ಟಿದ್ದ ‘ಮಂಡ್ಯ ಬಂದ್‌’ ವಿಫಲ; ದೂರ ಉಳಿದ ಜೆಡಿಎಸ್‌

Date:

ಕೆರಗೋಡು ಕೇಸರಿ ಧ್ವಜ ತೆರವುಗೊಳಿಸಿ, ರಾಷ್ಟ್ರಧ್ವಜ ಹಾರಿಸಿದ್ದನ್ನೇ ದಾಳವಾಗಿಟ್ಟುಕೊಂಡು ವಿವಾದ ಸೃಷ್ಠಿಸಿ, ಬಿಜೆಪಿ ಮತ್ತು ಸಂಘಪರಿವಾರ ಕರೆಕೊಟ್ಟಿದ್ದ ಫೆಬ್ರವರಿ 9ರ ಮಂಡ್ಯ ಬಂದ್‌ ಸಂಪೂರ್ಣ ವಿಫಲವಾಗಿದೆ.

ಬಿಜೆಪಿಗರ ಧ್ವಜ ವಿವಾದಕ್ಕೆ ಜನರು ಬೆಂಬಲ ನೀಡಲು ನಿರಾಕರಿಸಿದ್ದಾರೆ. ಮಂಡ್ಯ ನಗರದಲ್ಲಿ ಎಂದಿನಂತೆ ಅಂಗಡಿ ಮುಂಗಟ್ಟುಗಳು ತೆರೆದಿವೆ. ಜನರು ವ್ಯಾಪಾರ ವಹಿವಾಟಿನಲ್ಲಿ ತೊಡಗಿದ್ದಾರೆ. ಶಾಲಾ ಕಾಲೇಜು, ಚಿತ್ರಮಂದಿರಗಳು ಕಾರ್ಯನಿರ್ವಹಿಸುತ್ತಿವೆ. ಕೆಲ ಬಿಜೆಪಿ ಕಾರ್ಯಕರ್ತರು ಮಾತ್ರ ಸಂಘಪರಿವಾರದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ಕೇಸರಿ ಶಾಲು ಧರಿಸಿ ಬಿಜೆಪಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರ ಜೆಡಿಎಸ್‌ ಕೂಡ ಶುಕ್ರವಾರದ ಬಂದ್‌ ಮತ್ತು ಪ್ರತಿಭಟನೆಯಿಂದ ದೂರ ಉಳಿದಿದೆ. ಧ್ವಜ ವಿವಾದದಿಂದ ರಾಜಕೀಯ ಲಾಭವಾಗಬಹುದು ಎಂದು ಎಣಿಸಿದ್ದ ಜೆಡಿಎಸ್‌ಗೆ, ವಿವಾದವೇ ಮತ್ತಷ್ಟು ಪೆಟ್ಟು ಕೊಟ್ಟಿದೆ. ಹೀಗಾಗಿ, ಜೆಡಿಎಸ್‌ ದೂರು ಉಳಿದಿದೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಂಡ್ಯ ಬಂದ್‌ಗೆ ಬೆಂಬಲ ನೀಡುವಂತೆ ಸಂಘಪರಿವಾರದ ಮುಖಂಡರು ವರ್ತಕರು, ಆಟೊ ಚಾಲಕರನ್ನು ಗುರುವಾರ ಭೇಟಿ ಮಾಡಿ, ಮನವಿ ಮಾಡಿದ್ದರು. ಆದರೂ, ಯಾರೂ ಕೂಡ ಬಂದ್‌ಗೆ ಬೆಂಬಲ ನೀಡಿಲ್ಲ. ಇನ್ನು, ‘ಬಂದ್‌ ಬಗ್ಗೆ ತಟಸ್ಥವಾಗಿ ಉಳಿಯಲು ನಿರ್ಧರಿಸಿದ್ದೇವೆ’ ಎಂದು ವರ್ತಕರ ಸಂಘ ಜಿಲ್ಲಾಅಧ್ಯಕ್ಷ ಕೆ.ಪ್ರಭಾಕರ್‌ ತಿಳಿಸಿದ್ದರು.

ಹೀಗಾಗಿ, ಸಂಘಪರಿವಾರ ಕರೆಕೊಟ್ಟಿದ್ದ ಮೊದಲ ಮಂಡ್ಯ ಬಂದ್‌ ಸಂಪೂರ್ಣ ವಿಫಲವಾಗಿದೆ. ಬಂದ್‌ಗೆ ಬೆಂಬಲ ದೊರೆಯದ ಕಾರಣ, ಸಂಘಪರಿವಾದ ಕಾರ್ಯಕರ್ತರು ಕೆರಗೋಡಿನಿಂದ ಮಂಡ್ಯಕ್ಕೆ ಬೈಕ್ ರ್‍ಯಾಲಿ ನಡೆಸಿದ್ದು, ನಗರದ ವೀರಾಂಜನೇಯ ದೇವಾಲಯದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೌನ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...