ಗೌರಿ ಲಂಕೇಶ್ ಹತ್ಯೆ ಪ್ರಕರಣ | ಜಾಮೀನಿನ ಮೇಲೆ ಹೊರಬಂದ ಆರೋಪಿಗಳಿಗೆ ಸಂಘಪರಿವಾರದಿಂದ ಸನ್ಮಾನ!

Date:

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ವಿಜಯಪುರದ ಇಬ್ಬರು ಆರೋಪಿಗಳು ಜಾಮೀನಿನ ಮೇಲೆ ಹೊರಬಂದಿದ್ದು, ತವರಿಗೆ ಆಗಮಿಸಿದ ಬೆನ್ನಲ್ಲೇ ಸಂಘಪರಿವಾರದ ಕಾರ್ಯಕರ್ತರು ಅವರಿಬ್ಬರಿಗೂ ಸನ್ಮಾನಿಸಿ ಅದ್ದೂರಿ ಸ್ವಾಗತ ಕೋರಿರುವ ಘಟನೆ ವರದಿಯಾಗಿದೆ.

ಪ್ರಕರಣದಲ್ಲಿ ಬಂಧಿತರಾಗಿದ್ದ ವಿಜಯಪುರದ ಇಬ್ಬರು ಆರೋಪಿಗಳಾದ ಪರಶುರಾಮ ವಾಗ್ಮೋರೆ ಹಾಗೂ ಮನೋಹರ್ ಯಡವೆ ಎಂಬ ಇಬ್ಬರಿಗೆ ಸುಮಾರು ಆರೂವರೆ ವರ್ಷಗಳ ಬಳಿಕ 2024ರ ಅ.11ರಂದು ಬೆಂಗಳೂರಿನ ಸೆಷನ್ಸ್ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ನೀಡಿ ಆದೇಶಿಸಿತ್ತು. ಅ.11ರಂದೇ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಹೊರ ಬಂದ ಆರೋಪಿಗಳು ನೇರವಾಗಿ ವಿಜಯಪುರಕ್ಕೆ ಆಗಮಿಸಿದ್ದಾರೆ.

ಗೌರಿ ಲಂಕೇಶ್ ಹತ್ಯೆಯ ಇಬ್ಬರು ಆರೋಪಿಗಳು ವಿಜಯಪುರ ಜಿಲ್ಲೆಯ ಸಂಘಪರಿವಾರ ಹಾಗೂ ಶ್ರೀರಾಮ ಸೇನೆಯ ಮುಖಂಡರು, ಕಾರ್ಯಕರ್ತರು ಸ್ವಾಗತ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಜಯಪುರ ನಗರದ ಕಾಳಿಕಾ ದೇವಾಲಯದಲ್ಲಿ ಇಬ್ಬರೂ ಆರೋಪಿಗಳು ಪೂಜೆ ಮಾಡಿಸಿದ್ದಾರೆ. ಬಳಿಕ ಸಂಘಪರಿವಾರದ ಕಾರ್ಯಕರ್ತರು ಪರಶುರಾಮ ವಾಗ್ಮೋರೆ ಹಾಗೂ ಮನೋಹರ ಯಡವೆಗೆ ಶಾಲು ಹೊದಿಸಿ ಹಾರ ಹಾಕಿ ಸನ್ಮಾನಿಸಿದ್ದಾರೆ. ಬಳಿಕ ಶಿವಾಜಿ ವೃತ್ತಕ್ಕೆ ತೆರಳಿ ಶಿವಾಜಿ ಮೂರ್ತಿಗೆ ಆರೋಪಿಗಳು ಹಾರ ಹಾಕಿದ್ದಾರೆ ಎಂದು ತಿಳಿದು ಬಂದಿದೆ.

2017ರ ಸಪ್ಟೆಂಬರ್ 5ರಂದು ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಬೆಂಗಳೂರಿನ ಅವರ ಮನೆಯ ಮುಂದೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿತ್ತು. ಬಳಿಕ ವಿಜಯಪುರದ ಸಿಂಧಗಿ ಪಟ್ಟಣದ ಬಸವನಗರ ನಿವಾಸಿ ಪರಶುರಾಮ್ ವಾಗ್ಮೋರೆ ಹಾಗೂ ಜಯಪುರ ತಾಲೂಕಿನ ರತ್ನಾಪೂರ ಗ್ರಾಮದ ಮನೋಹರ ಯಡವೆ ಎಂಬುವರನ್ನು ಗೌರಿ ಲಂಕೇಶ್ ಹತ್ಯೆ ಆರೋಪದ ಮೇಲೆ ಪ್ರಕರಣದ ತನಿಖೆ ನಡೆಸುತ್ತಿದ್ದ ವಿಶೇಷ ತನಿಖಾ ತಂಡ(ಎಸ್‌ಐಟಿ) ಬಂಧಿಸಿತ್ತು.

ಗೌರಿ ಲಂಕೇಶ್ ಹತ್ಯೆಯಲ್ಲಿ ಒಟ್ಟು 25 ಜನ ಆರೋಪಿಗಳನ್ನು ಎಸ್‌ಐಟಿ ಬಂಧಿಸಿತ್ತು.

ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದ್ದರೂ ಆರೋಪಿಗಳಿಗೆ ಜಾಮೀನು ಸಿಕ್ಕಿರಲಿಲ್ಲ. ಗೌರಿ ಲಂಕೇಶ್ ಹತ್ಯೆ ನಂತರದಲ್ಲಿ ಸುಮಾರು ಆರೂವರೆ ವರ್ಷಗಳ ಬಳಿಕ 25 ಜನ ಆರೋಪಿಗಳಲ್ಲಿ 18 ಜನರಿಗೆ ಬೆಂಗಳೂರಿನ ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿದ್ದು, ಇನ್ನೂ 7 ಮಂದಿ ಆರೋಪಿಗಳೂ ಕೂಡ ಜಾಮೀನಿಗೆ ಅರ್ಜಿ ಸಲ್ಲಿಸಿರುವುದಾಗಿ ತಿಳಿದು ಬಂದಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...