ಸಂಸ್ಕೃತ ದೈನಂದಿನ ಸಂವಹನದ ಭಾಷೆಯಾಗಬೇಕು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

Date:

ಸಂಸ್ಕೃತ ಎಲ್ಲಾ ಭಾರತೀಯ ಭಾಷೆಗಳ ತಾಯಿ. ಸಂಸ್ಕೃತ ಭಾರತದ ಪ್ರತಿಯೊಂದು ಮನೆಗೂ ತಲುಪಬೇಕು ಮತ್ತು ದೈನಂದಿನ ಸಂವಹನದ ಭಾಷೆಯಾಗಬೇಕು ಎಂದು ಶುಕ್ರವಾರ ರಾಷ್ಟ್ರೀಯ ಸ್ವಯಂಸೇವಕ ಸಂಘದ(ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

ನಾಗ್ಪುರದ ಕವಿ ಕುಲಗುರು ಕಾಳಿದಾಸ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ಕಟ್ಟಡದ ಉದ್ಘಾಟನೆ ಬಳಿಕ ಮಾತನಾಡಿದ ಭಾಗವತ್, “ನಮ್ಮ, ಭಾವನೆಗಳನ್ನು ಬೆಳೆಸುವ ಭಾಷೆ ಸಂಸ್ಕೃತ. ಪ್ರತಿಯೊಬ್ಬರೂ ಪ್ರಾಚೀನ ಭಾಷೆಯನ್ನು ತಿಳಿದುಕೊಳ್ಳಬೇಕು. ಸಂಸ್ಕೃತವನ್ನು ಅರ್ಥಮಾಡಿಕೊಳ್ಳುವುದು ಮತ್ತು ಅದೇ ಭಾಷೆಯಲ್ಲಿ ಸಂವಾದ ನಡೆಸುವುದರ ನಡುವೆ ವ್ಯತ್ಯಾಸವಿದೆ” ಎಂದರು.

ಇದನ್ನು ಓದಿದ್ದೀರಾ? ಮಣಿಪುರ ಗಲಭೆಗೆ ‘ಸಾಂಸ್ಕೃತಿಕ ಮಾರ್ಕ್ಸ್‌ವಾದಿಗಳು’ ಕಾರಣ: ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇಶದಲ್ಲಿ ಕೇಂದ್ರ ಸರ್ಕಾರ ಹಿಂದಿ ಹೇರಿಕೆ ಮಾಡುತ್ತಿದೆ ಎಂಬ ಆರೋಪಗಳ ನಡುವೆ ಆರ್‌ಎಸ್‌ಎಸ್‌ ನಾಯಕರ ಹೇಳಿಕೆ ಬಂದಿದೆ. ಸಂಸ್ಕೃತ ದೈನಂದಿನ ಸಂವಹನ ಭಾಷೆಯಾಗಬೇಕು, ಎಲ್ಲರೂ ಕಲಿಯಬೇಕು ಎಂಬುದು ಕೂಡಾ ಭಾಷಾ ಹೇಳಿಕೆಯಲ್ಲವೇ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. ಬಿಜೆಪಿ-ಆರ್‌ಎಸ್‌ಎಸ್‌ ಹಿಂದಿ-ಸಂಸ್ಕೃತವನ್ನು ಬೆಳೆಸಿ ಉಳಿದ ಸ್ಥಳೀಯ ಭಾಷೆಗಳ ಅವನತಿಗೆ ಅವಕಾಶ ನೀಡುತ್ತಿದೆ ಎಂಬ ಆರೋಪವೂ ಇದೆ.

“ಸಂಸ್ಕೃತ ವಿಶ್ವವಿದ್ಯಾಲಯಕ್ಕೆ ಸರ್ಕಾರ ಪ್ರೋತ್ಸಾಹ ನೀಡುತ್ತದೆ. ಆದರೆ ಜನರ ಬೆಂಬಲವೂ ಅಗತ್ಯ. ಸಂಸ್ಕೃತ ಭಾರತದ ಎಲ್ಲಾ ಭಾಷೆಗಳ ತಾಯಿ. ಅದನ್ನು ದೈನಂದಿನ ಜೀವನದಲ್ಲಿ ಬಳಸಬೇಕು. ನಾನು ಭಾಷೆಯನ್ನು ಕಲಿತಿದ್ದೇನೆ. ಆದರೆ ನಿರರ್ಗಳವಾಗಿ ಮಾತನಾಡಲು ಸಾಧ್ಯವಾಗುತ್ತಿಲ್ಲ. ನಾವು ಸಂಸ್ಕೃತವನ್ನು ತಿಳಿದುಕೊಳ್ಳುವುದು ದೇಶವನ್ನು ಅರ್ಥಮಾಡಿಕೊಂಡಂತೆ” ಎಂದು ಭಾಗವತ್ ಹೇಳಿದರು.

ಈಗಾಗಲೇ ಕೇಂದ್ರ ಸರ್ಕಾರ ಒಂದು ದೇಶ, ಒಂದು ಚುನಾವಣೆ ಬಳಿಕ ಒಂದು ಭಾಷೆ ಜಾರಿಗೆ ಮುಂದಾಗುತ್ತಿದೆ ಎಂಬ ಆರೋಪಗಳಿವೆ. ಹಿಂದಿ ಕಡ್ಡಾಯಗೊಳಿಸುವುದರ ವಿರುದ್ಧ ಪ್ರಮುಖ ದಕ್ಷಿಣ ಭಾರತದ ರಾಜ್ಯಗಳಲ್ಲಿ ವಿರೋಧಕ್ಕೆ ಕಾರಣವಾಗಿದೆ. ಮಹಾರಾಷ್ಟ್ರದಲ್ಲೂ ತೀವ್ರ ವಿರೋಧ ವ್ಯಕ್ತವಾಗಿದೆ. ಇವೆಲ್ಲವುದರ ನಡುವೆ ಆರ್‌ಎಸ್‌ಎಸ್‌ ನಾಯಕರು ಸಂಸ್ಕೃತ ದೈನಂದಿನ ಸಂವಹನದ ಭಾಷೆಯಾಗಬೇಕು ಎಂದು ಹೇಳಿರುವುದು ಚರ್ಚೆಗೆ ಗ್ರಾಸವಾಗುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...