ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ: ಸಿಎಂ ಸಿದ್ದರಾಮಯ್ಯ

Date:

ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶ ಇದೆ. ಉತ್ತರ ಕರ್ನಾಟಕ ವಿಮೋಚನಾ ದಿನದಂದೇ ಈ ಬಗ್ಗೆ ಹೇಳಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುನರುಚ್ಚರಿಸಿದರು.

ಕಲಬುರಗಿ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು‌. ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಬೇಕು ಎನ್ನುವ ಬೇಡಿಕೆ ಬಹಳ ವರ್ಷಗಳಿಂದ ಇದೆ. ಪ್ರತ್ಯೇಕ ಸಚಿವಾಲಯ ಮಾಡುವ ಉದ್ದೇಶ ನಮಗೆ ಇದೆ ಎಂದರು.

ತೊಗರಿ ಪ್ಯಾಕೇಜ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತೊಗರಿಗೆ ಪ್ರತ್ಯೇಕ ಪ್ಯಾಕೇಜ್ ಘೋಷಿಸಿ ಎನ್ನುವ ಬೇಡಿಕೆ ರೈತರಿಂದ ಇದೆ. ತೊಗರಿ ಬೆಳೆ ಸ್ಥಿತಿ ಗತಿ ಕುರಿತ ವರದಿ ಕೇಳಿದ್ದೇವೆ. ಈ ವರದಿ ಬಂದ ಬಳಿಕ ಆ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಜಯದೇವ ಮಹತ್ವದ ಹೆಜ್ಜೆ

ಕಲ್ಯಾಣ ಕರ್ನಾಟಕದ ಆರೋಗ್ಯ ವ್ಯವಸ್ಥೆಯಲ್ಲಿ ಇಂದು ಉದ್ಘಾಟನೆಗೊಳ್ಳಲಿರುವ ಜಯದೇವ ಆಸ್ಪತ್ರೆ ಮಹತ್ವದ್ದು. ರಾಜ್ಯಸಭೆ ಪ್ರತಿಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಹೋರಾಟದ ಫಲವಾಗಿ 371J ಜಾರಿಯಾಗಿದೆ. ಇಲ್ಲಿ 371 ಬೆಡ್‌ಗಳ ಆಸ್ಪತ್ರೆಯನ್ನು ಇಂದು ಉದ್ಘಾಟಿಸುತ್ತಿದ್ದೇವೆ ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಹಿತ್ಯ ಸಮ್ಮೇಳನ – ಜನ ಮರುಳೋ-ಜಾತ್ರೆ ಮರುಳೋ ಎಂದಾಗಬಾರದು!

ಸಿ.ಟಿ.ರವಿ ಮಾತು ಕ್ರಿಮಿನಲ್ ಅಪರಾಧ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಿ.ಟಿ.ರವಿ ಬಳಸಿದ ಪದ ಅತ್ಯಂತ ಅನಾಗರಿಕವಾದದ್ದು. ಇದು ಕ್ರಿಮಿನಲ್ ಅಪರಾಧ. ಬಿಜೆಪಿಯ ರಾಷ್ಟ್ರೀಯ ಪದಾಧಿಕಾರಿ ಆಗಿದ್ದ ರವಿ ಬಾಯಲ್ಲಿ ಇಂಥಾ ಮಾತು ನಾಚಿಕೆಗೇಡಿನದ್ದು. ಇತರೆ ವಿಧಾನ ಪರಿಷತ್ ಸದಸ್ಯರು ರವಿ ಆ ಪದ ಬಳಸಿರುವುದನ್ನು ಕೇಳಿಸಿಕೊಂಡಿದ್ದಾರೆ. ರವಿ ಅತ್ಯಂತ ತುಚ್ಚವಾಗಿ ಮಾತಾಡಿರುವುದು ಸತ್ಯ ಎಂದು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...