ಸತೀಶ್‌ ಜಾರಕಿಹೊಳಿ- ಹೆಚ್‌ ಡಿ ಕುಮಾರಸ್ವಾಮಿ ಕ್ಲೋಸ್‌ ಡೋರ್‌ ಮೀಟಿಂಗ್‌, ರಾಜಕೀಯದಲ್ಲಿ ಹೆಚ್ಚಿದ ಕುತೂಹಲ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಡಿಸಿಎಂ ಡಿ ಕೆ ಶಿವಕುಮಾರ್‌ ಅವರಿಗೆ ಬದ್ಧ ವೈರಿಯಂತಿರುವ ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಅವರ ಜೊತೆ ಕ್ಲೋಸ್‌ ಡೋರ್‌ ಮೀಟಿಂಗ್ ನಡೆಸಿದ್ದು ಚರ್ಚೆಗೆ ಗ್ರಾಸವಾಗಿದೆ.

ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ಪ್ರಕರಣ ಭಾರೀ ಸಂಚಲನ ಮೂಡಿಸಿರುವ ಹೊತ್ತಲ್ಲೇ ದೊಡ್ಡ ದೊಡ್ಡ ಬೆಳವಣಿಗೆಗಳು ನಡೆಯುತ್ತಿವೆ. ಒಂದು ಕಡೆ ಸಿದ್ದರಾಮಯ್ಯ ಬಣದ ನಾಯಕರ ಮೇಲೆಯೇ ಹನಿಟ್ರ್ಯಾಪ್ ನಡೆಯುತ್ತಿವೆ ಎನ್ನುವ ಗಂಭೀರ ಆರೋಪಗಳು ಕೇಳಿಬಂದಿವೆ. ಅತ್ತ ಬಿಜೆಪಿಯಲ್ಲೂ ಯಡಿಯೂರಪ್ಪ ವಿರೋಧಿ ಬಣದ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಆರು ವರ್ಷಗಳ ಕಾಲ ಬಿಜೆಪಿಯಿಂಚ ಉಚ್ಛಾಟಿಸಲಾಗಿದೆ. ಒಟ್ಟಾರೆ ರಾಜ್ಯ ರಾಜಕಾರಣದಲ್ಲಿ ಕಾವೇರಿದ ಚರ್ಚೆಗಳಿಗೆ ಈಗ ಬರವಿಲ್ಲ.

ಈ ಮಧ್ಯೆ ಹೆಚ್ ಡಿ ಕುಮಾರಸ್ವಾಮಿ ಮತ್ತು ಸಚಿವ ಸತೀಶ್ ಜಾರಕಿಹೊಳಿ ಅವರು ಬುಧವಾರ ದೆಹಲಿಯಲ್ಲಿ ಒಟ್ಟಿಗೆ ಭೇಟಿಯಾಗಿ ದೀರ್ಘ ಅವಧಿವರೆಗೂ ಚರ್ಚಿಸಿದ್ದು, ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಇದೇ ವೇಳೆ ಮಾಜಿ ಪ್ರಧಾನಿ ಮತ್ತು ಜೆಡಿಎಸ್‌ ವರಿಷ್ಠ ಹೆಚ್‌ ಡಿ ದೇವೇಗೌಡರನ್ನು ಸಹ ಜಾರಕಿಹೊಳಿ ಭೇಟಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಸತೀಶ್ ಜಾರಕಿಹೊಳಿ 1 1

ಸಾಹುಕಾರ್ ಹಾಗೂ ದಳಪತಿಗಳ ಈ ನಡೆ ಭಾರೀ ಕುತೂಹಲ ಮೂಡಿಸಿದೆ. ಡಿನ್ನರ್‌ಗೆ ಬರುವಂತೆ ಹೆಚ್.ಡಿ.ಕುಮಾರಸ್ವಾಮಿ ಅವರೇ ಸತೀಶ್ ಜಾರಕಿಹೊಳಿ ಅವರನ್ನು ಆಹ್ವಾನಿಸಿದ್ದರು ಎನ್ನಲಾಗಿದ್ದು, ಈ ವೇಳೆ ಹಲವು ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಸಿಎಂ ಬದಲಾವಣೆ ವಿಚಾರವಾಗಿ ಕಾಂಗ್ರೆಸ್‌ನೊಳಗೆ ಚರ್ಚೆ ಜೀವಂತವಿದೆ. ಸತೀಶ್‌ ಜಾರಕಿಹೊಳಿ ಸಹ ನಾನೂ ಸಿಎಂ ಅಭ್ಯರ್ಥಿ ಎಂದು ಈಗಾಗಲೇ ಹೇಳಿದ್ದಾರೆ. ಒಂದು ವೇಳೆ ಕಾಂಗ್ರೆಸ್‌ನಲ್ಲಿ ದಿಢೀರ್‌ ಬೆಳವಣಿಗೆಗಳು ನಡೆದು, ಸಿಎಂ ಬದಲಾವಣೆ ವಿಚಾರ ಮುನ್ನೆಲೆಗೆ ಬಂದರೆ ಬಹುಮತಕ್ಕಾಗಿ ಮುಂಚಿತವಾಗಿ ಜೆಡಿಎಸ್‌ ಮತ್ತು ಬಿಜೆಪಿ ನಾಯಕರ ಜೊತೆ ಸತೀಶ್‌ ಜಾರಕಿಹೊಳಿ ಚರ್ಚೆಗೆ ಮುದಾಗಿದ್ದಾರೆ ಎನ್ನುವ ಸುದ್ದಿಗಳು ಹರಿದಾಡುತ್ತಿವೆ.

ಸದ್ಯದಲ್ಲೇ ಬಿಜೆಪಿ ನಾಯಕರನ್ನು ಸತೀಶ್‌ ಜಾರಕಿಹೊಳಿ ಅವರು ಭೇಟಿಯಾಗಬಹುದು ಎನ್ನಲಾಗುತ್ತಿದೆ. ಒಟ್ಟಾರೆ ಈಗ ಎಲ್ಲವೂ ಅಸ್ಪಷ್ಟವಾದ ಚರ್ಚೆಗಳೇ ಆಗಿವೆ. ಮುಂದಿನ ಬೆಳವಣಿಗೆಗಳನ್ನು ಕಾದು ನೋಡಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...