ಎಂಟು ಲಕ್ಷ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ: ಸಚಿವ ಜಮೀರ್ ಅಹಮದ್ ಖಾನ್

Date:

ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ ಪ್ರಾಥಮಿಕ ಹಂತದಿಂದ ಉನ್ನತ ಶಿಕ್ಷಣದವರೆಗೆ 7.85 ಲಕ್ಷ ವಿದ್ಯಾರ್ಥಿಗಳಿಗೆ 290 ಕೋಟಿ ರೂ. ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ ಎಂದು ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವರು, ಈಗಾಗಲೇ 6.25 ಲಕ್ಷ ವಿದ್ಯಾರ್ಥಿಗಳಿಗೆ ನೇರ ನಗದು ವರ್ಗಾವಣೆಯ ಮೂಲಕ 180 ಕೋಟಿ ರೂ. ವರ್ಗಾವಣೆ ಮಾಡಲಾಗಿದ್ದು, 1.60 ಲಕ್ಷ ವಿದ್ಯಾರ್ಥಿಗಳಿಗೆ 100 ಕೋಟಿ ರೂ. ಅನುದಾನ ಅಗತ್ಯ ಇರುವ ಬಗ್ಗೆ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.

ವಿದ್ಯಾಸಿರಿ ಯೋಜನೆಯಡಿಯಲ್ಲಿ ಜನವರಿ ಅಂತ್ಯದವರೆಗೆ ಹಾಸ್ಟೆಲ್‌ಗಳಲ್ಲಿ 23 ಸಾವಿರ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗಿದ್ದು, ಹಾಸ್ಟೆಲ್‌ನಲ್ಲಿ ಪ್ರವೇಶ ಸಿಗದ 5753 ವಿದ್ಯಾರ್ಥಿಗಳಿಗೆ ಮಾಸಿಕ 1500 ರೂ. ನಂತೆ ಹತ್ತು ತಿಂಗಳ ಮೊತ್ತ 15 ಸಾವಿರ ರೂ. ವರ್ಗಾವಣೆ ಮಾಡಲಾಗಿದೆ. ಅದಕ್ಕಾಗಿ 8.63 ಕೋಟಿ ರೂ. ವೆಚ್ಚ. ಮಾಡಲಾಗಿದೆ ಎಂದು ಅಂಕಿ ಅಂಶಗಳನ್ನು ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು 200 ವಿದ್ಯಾರ್ಥಿಗಳ ಆಧಾರ್ ಲಿಂಕ್ ಸಮಸ್ಯೆ ಇದ್ದು ಅದು ಸರಿ ಹೋದ ನಂತರ ಅವರಿಗೂ ಹಣ ವರ್ಗಾವಣೆ ಆಗಲಿದ್ದು, ಶೇ. 100 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಿದಂತಾಗಲಿದೆ ಎಂದು ವಿವರಿಸಿದ್ದಾರೆ.

ಇದನ್ನು ಓದಿದ್ದೀರಾ? ಬೆಂಗಳೂರು | ಮಾ.1ರಿಂದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; 200 ಸಿನಿಮಾ ಪ್ರದರ್ಶನ; ಪಾಸ್‌ಗೆ ನೋಂದಣಿ ಆರಂಭ

ನಿರ್ದೇಶನಾಲಯಕ್ಕೆ ಪ್ರಸಕ್ತ ವರ್ಷ 2292 ಕೋಟಿ ರೂ. ನಿಗದಿಯಾಗಿ 1941 ಕೋಟಿ ರೂ. ಬಿಡುಗಡೆಯಾಗಿದ್ದು ಅದರಲ್ಲಿ 1608 ಕೋಟಿ ರೂ. ವೆಚ್ಚ ಮಾಡಲಾಗಿದ್ದು ಶೇ. 83 ರಷ್ಟು ಖರ್ಚು ಮಾಡಲಾಗಿದೆ ಎಂದು ಹೇಳಿದ್ದಾರೆ.

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ 7500 ವಿದ್ಯಾರ್ಥಿಗಳಿಗೆ ಅರಿವು ಯೋಜನೆ ಹಾಗೂ ವಿದೇಶಿ ವಿದ್ಯಾಭ್ಯಾಸ ನೆರವು ಯೋಜನೆಯಡಿಯಲ್ಲಿ 92.50 ಕೋಟಿ ರೂ. ಸಾಲ ವಿತರಿಸಲಾಗಿದೆ ಎಂದು ತಿಳಿಸಿದ್ದು, ಇದೇ ರೀತಿ ವಖ್ಫ್ ಬೋರ್ಡ್ ಗೆ 157 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು 125 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...