ಕೇರಳದ ತಿರುವನಂತಪುರದ ನೆಡುಮಂಗಾಡ್‌ನಲ್ಲಿ ಭಾನುವಾರ ರಾತ್ರಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) -ಸಿಪಿಐಎಂ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು, ಪ್ರಸ್ತುತ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದೆ.
ಭಾನುವಾರ ಸಂಜೆ ಸ್ಥಳೀಯ ಸಿಪಿಐಎಂ ನಾಯಕನ ಮೇಲೆ ಎಸ್‌ಡಿಪಿಐ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಇದಾದ ಬಳಿಕ ಉಭಯ ಪಕ್ಷಗಳ ನಡುವೆ ಘರ್ಷಣೆ ಉಂಟಾಗಿದೆ ಎಂದು ನೆಡುಮಂಗಾಡ್ ಪೊಲೀಸರು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ದಕ್ಷಿಣ ಕನ್ನಡ | ಕೇಸರಿ ಭದ್ರಕೋಟೆಯಲ್ಲಿ ಹೊಸ ಮುಖ ಪ್ರಯೋಗ; ಪುತ್ತೂರಲ್ಲಿ ಬಿಜೆಪಿ ವರ್ಸಸ್ ಹಿಂದುತ್ವ!
ಈ ದಾಳಿಯ ಬಳಿಕ ಅಪರಿಚಿತರು ಎಸ್‌ಡಿಪಿಐ ಕಾರ್ಯಕರ್ತರ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಮುಸುಕುಧಾರಿಗಳು ಎಸ್‌ಡಿಪಿಐ ಕಾರ್ಯಕರ್ತನ ಒಡೆತನದ ಆಂಬ್ಯುಲೆನ್ಸ್ ಮತ್ತು ಕಾರಿಗೆ ಹಾನಿ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕೃತ್ಯವನ್ನು ಸಿಪಿಐಎಂ ಕಾರ್ಯಕರ್ತರೇ ಮಾಡಿದ್ದಾರೆ ಎಂಬ ಶಂಕೆಯಲ್ಲಿ ಭಾರತ ಪ್ರಜಾಸತಾತ್ಮಕ ಯುವಜನ ಫೆಡರೇಶನ್(ಡಿವೈಎಫ್‌ಐ) ನಿರ್ವಹಿಸುತ್ತಿದ್ದ ಮತ್ತು ಸರ್ಕಾರಿ ಆಸ್ಪತ್ರೆಯ ಬಳಿ ನಿಲ್ಲಿಸಲಾಗಿದ್ದ ಆಂಬ್ಯುಲೆನ್ಸ್‌ಗೆ ಸೋಮವಾರ ಮುಂಜಾನೆ ಬೆಂಕಿ ಹಚ್ಚಲಾಗಿದೆ.
ಸದ್ಯ ಈ ಎಲ್ಲಾ ದಾಳಿ ಪ್ರತಿದಾಳಿಗಳ ಬಗ್ಗೆ ತನಿಖೆ ನಡೆಯುತ್ತಿದೆ. ಹಿಂಸಾಚಾರವನ್ನು ತಡೆಯಲು ಈ ಪ್ರದೇಶದಲ್ಲಿ ಗಸ್ತು ತಿರುಗುವಿಕೆಯನ್ನು ಹೆಚ್ಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.





