ಶಿವಮೊಗ್ಗ | ಎಸ್‌ಡಿಪಿಐಗೂ ರಾಗಿಗುಡ್ಡ ಘಟನೆಗೂ ಯಾವುದೇ ಸಂಬಂಧವಿಲ್ಲ: ಜಿಲ್ಲಾಧ್ಯಕ್ಷ ಇಮ್ರಾನ್

Date:

ಪ್ರವಾದಿ ಮುಹಮ್ಮದ್ ಅವರ ಜನ್ಮದಿನಾಚರಣೆ ‘ಮೀಲಾದುನ್ನಬಿ’ಯ ಪ್ರಯುಕ್ತ ಶಿವಮೊಗ್ಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮೆರವಣಿಗೆಯ ವೇಳೆ ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಘಟನೆಯ ಬಳಿಕ ಉಂಟಾದ ಪ್ರಕ್ಷುಬ್ಧ ಘಟನೆಗೂ ಎಸ್‌ಡಿಪಿಐ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ’ ಎಂದು ಶಿವಮೊಗ್ಗ ಜಿಲ್ಲಾಧ್ಯಕ್ಷ ಇಮ್ರಾನ್ ಸ್ಪಷ್ಟೀಕರಣ ನೀಡಿದ್ದಾರೆ.

ಬಜರಂಗದಳದ ರೋಹನ್ ಕಲ್ಲೆಸೆತವೇ ಶಿವಮೊಗ್ಗ ಗಲಭೆಯ ಆರಂಭ ಬಿಂದುವೇ? ಎಂಬ ವರದಿಯನ್ನು ಈ ದಿನ.ಕಾಮ್ ಪ್ರಕಟಿಸಿತ್ತು. ವರದಿಯಲ್ಲಿ ಸ್ಥಳೀಯರ ಆರೋಪವನ್ನು ಉಲ್ಲೇಖಿಸಿ ‘ಎಸ್‌ಡಿಪಿಐನವರೂ ಕೂಡ ಪ್ರಕ್ಷುಬ್ಧ ಘಟನೆಯಲ್ಲಿ ಇದ್ದರು’ ಎಂಬುದನ್ನು ಉಲ್ಲೇಖಿಸಿತ್ತು.

ಈ ಹಿನ್ನೆಲೆಯಲ್ಲಿ ಈ ಬಗ್ಗೆ ಈ ದಿನ.ಕಾಮ್‌ಗೆ ಸ್ಪಷ್ಟೀಕರಣ ನೀಡಿರುವ ಶಿವಮೊಗ್ಗ ಜಿಲ್ಲಾಧ್ಯಕ್ಷ ಇಮ್ರಾನ್, “ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ – ಒಂದು ರಾಜಕೀಯ ಪಕ್ಷ. ಮೀಲಾದುನ್ನಬಿಗೂ ಎಸ್‌ಡಿಪಿಐಗೂ ಏನೂ ಸಂಬಂಧವಿರಲ್ಲ. ನಮ್ಮ ಪಕ್ಷದಲ್ಲಿ ಎಲ್ಲ ಜಾತಿ ಧರ್ಮದವರೂ ಇದ್ದಾರೆ. ಪಕ್ಷದಲ್ಲಿ ಗುರುತಿಸಿಕೊಂಡಿರುವವರ ಪೈಕಿ ಮೀಲಾದುನ್ನಬಿ ಆಚರಿಸುವವರೂ ಇದ್ದಾರೆ. ಮಾಡದಿರುವವರೂ ಇದ್ದಾರೆ. ಮೀಲಾದುನ್ನಬಿ ಆಚರಿಸುವುದು ಅವರವರ ವೈಯಕ್ತಿಕ ಸ್ವಾತಂತ್ರ್ಯ. ಆದರೆ ಮೊನ್ನೆ ರಾಗಿಗುಡ್ಡದಲ್ಲಿ ನಡೆದ ಘಟನೆಗೂ ನಮ್ಮ ಪಕ್ಷಕ್ಕೂ ಸಂಬಂಧವಿಲ್ಲ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

sdpi shimoga president imran

‘ಎಸ್‌ಡಿಪಿಐ ಜನರ ಸಮಸ್ಯೆಗೆ ಸ್ಪಂದಿಸಿ ಎಲ್ಲ ಕಡೆಗೆ ಬೆಳೆಯುತ್ತಿದೆ. ಅಲ್ಲದೇ, ಮುಂದಿನ ದಿನಗಳಲ್ಲಿ ಸ್ಥಳೀಯ ಚುನಾವಣೆಯೂ ಇದೆ. ಹೀಗಾಗಿ, ಪಕ್ಷದ ಬೆಳವಣಿಗೆ ಸಹಿಸದವರು ಬೇರೆ ಪಕ್ಷದ ಬಗ್ಗೆ ಆಸಕ್ತಿ ಇರುವವರು ನಮ್ಮನ್ನು ಎಳೆದು ತಂದಿದ್ದಾರೆ. ನಾನು ಸ್ವತಃ ಮೀಲಾದುನ್ನಬಿ ಆಚರಿಸುತ್ತೇನೆ. ಆದರೆ ಬೇರೆಯವರೂ ಮಾಡಿ ಎಂದು ನಾನು ಒತ್ತಾಯ ಮಾಡುವುದಿಲ್ಲ. ಮೊನ್ನೆ ನಡೆದ ರಾಗಿಗುಡ್ಡದ ಘಟನೆಯಲ್ಲಿ ಎಸ್‌ಡಿಪಿಐನವರು ಇದ್ದರು ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಾಗಲೀ, ಪೊಲೀಸ್ ಇಲಾಖೆಯಾಗಲಿ ಎಲ್ಲೂ ಹೇಳಿಕೆ ನೀಡಿಲ್ಲ. ಅಂದ ಮೇಲೆ ನಮ್ಮ ಬೆಳವಣಿಗೆ ಸಹಿಸದವರು ಪಕ್ಷದ ವಿರುದ್ಧ ನಡೆಸಿರುವ ಷಡ್ಯಂತ್ರ. ಹಾಗಾಗಿ, ಎಸ್‌ಡಿಪಿಐಗೂ ರಾಗಿಗುಡ್ಡ ಘಟನೆಗೂ ಯಾವುದೇ ಸಂಬಂಧವಿಲ್ಲ” ಎಂದು ಇಮ್ರಾನ್ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...