ಸಾವರ್ಕರ್ ಫೋಟೋ ಬಗ್ಗೆ ಸ್ಪೀಕರ್ ನಿಲುವಿಗೆ ಆಕ್ಷೇಪಾರ್ಹ ಬರಹ: ಎಸ್‌ಡಿಪಿಐ ಮುಖಂಡನ ಬಂಧನ, ಬಿಡುಗಡೆ

Date:

ಬೆಳಗಾವಿಯ ಸುವರ್ಣ ಸೌಧದಲ್ಲಿರುವ ಬಲಪಂಥೀಯ ಸಿದ್ಧಾಂತಿ, ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಬ್ರಿಟೀಷರಲ್ಲಿ ಕ್ಷಮಾಪಣೆ ಕೇಳಿ ಪತ್ರ ಬರೆದಿದ್ದ ಸಾವರ್ಕರ್ ಫೋಟೋ ತೆಗೆಯುವ ವಿಚಾರದಲ್ಲಿ ಸ್ಪೀಕರ್ ಯು.ಟಿ.ಖಾದರ್ ಮೃದು ಧೋರಣೆ ತಾಳಿದ್ದರು. ಈ ನಡೆಯ ವಿರುದ್ಧ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಸಂದೇಶ ಹಾಕಿದ ಆರೋಪದ ಮೇರೆಗೆ ಎಸ್‌ಡಿಪಿಐ ಮುಖಂಡನೋರ್ವನನ್ನು ಬಂಧಿಸಿ, ಬಳಿಕ ಬಿಡುಗಡೆಗೊಳಿಸಿದ ಬೆಳವಣಿಗೆ ಮಂಗಳೂರಿನಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.

ಮಂಗಳೂರು ನಗರದ ಉರ್ವ ಠಾಣೆಯ ಪೊಲೀಸರು ಎಸ್‌ಡಿಪಿಐ ಮುಖಂಡ ರಿಯಾಝ್ ಕಡಂಬು ಅವರನ್ನ ಬಂಧಿಸಿ‌ ವಿಚಾರಣೆ ನಡೆಸಿದ ಬಳಿಕ ತಡರಾತ್ರಿ ಬಿಡುಗಡೆ ಮಾಡಿದ್ದಾರೆ.

ಅವಹೇಳನಕಾರಿ ಸಂದೇಶ ಹಾಕಿದ ಹಿನ್ನೆಲೆಯಲ್ಲಿ ಮಂಗಳೂರು ಸೈಬರ್, ಇಕಾನಾಮಿಕ್ ಹಾಗೂ ನಾರ್ಕೋಟಿಕ್ಸ್ (ಸೆನ್) ಠಾಣೆಯಲ್ಲಿ ಪೊಲೀಸರು ಸ್ವಯಂಪ್ರೇರಿತ ದಾಖಲಿಸಿಕೊಂಡಿದ್ದರು. ರಿಯಾಝ್ ನಗರದ ಫ್ಲ್ಯಾಟ್‌ವೊಂದರಲ್ಲಿ ವಾಸವಾಗಿದ್ದು, ಅಲ್ಲಿಂದ ಉರ್ವ ಪೊಲೀಸರು ಬಂಧಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯ ವಿಧಾನಸಭೆಯ ಅಧ್ಯಕ್ಷ, ಉಳ್ಳಾಲದ ಶಾಸಕರೂ ಆಗಿರುವ ಯು.ಟಿ.ಖಾದರ್ ವಿರುದ್ಧ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಸಂದೇಶ ಹಾಕಿದ ಆರೋಪದ ಮೇರೆಗೆ ಮಂಗಳೂರು ಸೆನ್ ಠಾಣೆಯಲ್ಲಿ ಪೊಲೀಸರು ಮಂಗಳವಾರ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು.

ಮುಹಮ್ಮದ್ ರಿಯಾಝ್ ಎಂಬ ಫೇಸ್‌ಬುಕ್‌ನಲ್ಲಿ ಖಾತೆ ಹೊಂದಿರುವ ವ್ಯಕ್ತಿಯು ಡಿ.10ರಂದು ಸ್ಪೀಕರ್ ಯು.ಟಿ.ಖಾದರ್‌ ಅವರ ಭಾವಚಿತ್ರವನ್ನು ಎಡಿಟ್ ಮಾಡಿ ಸಾವರ್ಕರ್ ಹಾಕಿರುವ ಟೋಪಿಯನ್ನು ಹಾಕಿ “ನಾನು ಸಾವರ್ಕರ್ ಅಭಿಮಾನಿ ಖಾದರ್ಕರ್” ಎಂಬುದಾಗಿ ಹಾಗೂ “ಆತ ಬ್ರಿಟಿಷರೊಂದಿಗೆ ಕ್ಷಮಾಪಣಾ ಪತ್ರ ಬರೆದರೆ ಈತ ಸಂಘಿಗಳೆದುರು ಮಂಡಿಯೂರಿದ ಸಭಾಧ್ಯಕ್ಷ” ಎಂಬುದಾಗಿ ಹಾಕಿದ್ದಾರೆ ಎಂದು ಸ್ವಯಂ ಪ್ರೇರಿತ ದೂರಿನಲ್ಲಿ ತಿಳಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿ, ಬಳಿಕ ವಿಚಾರಣೆ ನಡೆಸಿದ್ದಾರೆ. ಬಿಡುಗಡೆಗೊಂಡ ಬಳಿಕ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿರುವ ಎಸ್‌ಡಿಪಿಐ ಮುಖಂಡ ರಿಯಾಝ್ ಕಡಂಬು, “ಪಕ್ಷದ ನಾಯಕರ ಶ್ರಮ ಮತ್ತು ಕಾರ್ಯಕರ್ತರ, ಹಿತೈಷಿಗಳ ಬೆಂಬಲದ ಕಾರಣದಿಂದ ಬಿಡುಗಡೆಗೊಂಡಿದ್ದೇನೆ. ನನಗಾಗಿ ಧ್ವನಿಯಾದ, ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದ” ಎಂದು ತಿಳಿಸಿದ್ದಾರೆ.

ಆಗಿರುವುದೇನು?

ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ಸಾವರ್ಕರ್ ಫೋಟೋ ಹಾಕಲಾಗಿತ್ತು. ಈ ಫೋಟೋ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಮಾಧ್ಯಮದವರು ಸ್ಪೀಕರ್ ಯು ಟಿ ಖಾದರ್ ಅವರನ್ನು ಪ್ರಶ್ನಿಸಿದ್ದರು.

ಫೋಟೋ ತೆರವು ಮಾಡುವ ಬಗ್ಗೆ ಅಭಿಪ್ರಾಯ ತಿಳಿಸಿದ್ದ ಸ್ಪೀಕರ್ ಖಾದರ್, ‘ನನ್ನ ಕೆಲಸ ಜೋಡಿಸುವುದು, ಕಿತ್ತು ಬಿಸಾಕುವುದಲ್ಲ’ ಎಂದಿದ್ದರು.

WhatsApp Image 2023 12 13 at 12.17.43 PM
ಫೇಸ್‌ಬುಕ್ ಪೋಸ್ಟ್

 

ಇದಕ್ಕೆ ವಿರುದ್ಧವಾಗಿ ಫೇಸ್‌ಬುಕ್ ನಲ್ಲಿ ಖಾದರ್ ವಿರುದ್ದ ಪೋಸ್ಟ್ ಹಾಕಿದ್ದ ರಿಯಾಝ್ ಕಡಂಬು,” ‘ಇಷ್ಟೇ… ಅದ್ಯಾವ ಪರಿಸರ ಹೇಳಿ, ಚಪ್ಪಲಿ ನೆಕ್ಕಿ ಸಾವರ್ಕರ್‌ನ ಫೋಟೋವನ್ನು ಇಟ್ಟು ಜೋಡಿಸುತ್ತಿದ್ದ ಪರಿಸರ. ಈ ವ್ಯಕ್ತಿಯಿಂದ ಆರ್‌ಎಸ್‌ಎಸ್‌ ವಿರುದ್ಧ ನಿಲ್ಲಲು ಈ ಆಯಸ್ಸು ಪೂರ್ತಿ ಅಧಿಕಾರದಲ್ಲಿದ್ದರೂ ಸಾಧ್ಯವಿಲ್ಲ. ಚುನಾವಣೆಯಲ್ಲಿ ಕೇಳ್ತಿದ್ರಲ್ಲಾ ಎಸ್‌ಡಿಪಿಐ ಯಾಕೆ ಒಬ್ಬ ಮುಸ್ಲಿಂ ಎಂಎಲ್‌ಎ ವಿರುದ್ಧ ಸ್ಪರ್ಧೆ ಮಾಡುವುದೆಂದು. ದೇಶದ್ರೋಹಿ, ಸಂವಿಧಾನ ವಿರೋಧಿ, ಜಾತ್ಯತೀತ ವಿರೋಧಿ, ಕೋಮುವಾದಿ ಆರ್‌ಎಸ್‌ಎಸ್‌ ಜೊತೆ ಹೊಂದಾಣಿಕೆ ಮಾಡಿಕೊಂಡು ಈ ರೀತಿ ಜೋಡಿಸಲು ಹೊರಟಿದ್ದಾರೆ. ಎಂದಾದರೂ ಒಂದು ದಿನ ಎಸ್‌ಡಿಪಿಐ ಅದರೊಳಗೆ ಲಗ್ಗೆ ಇಟ್ಟರೆ, ಸಾವರ್ಕರ್ ಫೋಟೊ ಕಿತ್ತು ಬಿಸಾಕಲು ಸದನದಲ್ಲಿ ಹೋರಾಟ ಮಾಡುತ್ತೇವೆ. ಅದ್ಯಾವ ವ್ಯಕ್ತಿ ಸಭಾಧ್ಯಕ್ಷ ಆಗಿದ್ದರೂ, ನಾವು ಆ ಕೆಲಸ ಮಾಡುತ್ತೇವೆ. ಈ ಸಭಾಧ್ಯಕ್ಷರಿಗೆ ಚಾಲೆಂಜ್, ಕಿತ್ತು ಬಿಸಾಕಿ, ಟಿಪ್ಪು ಭಾವಚಿತ್ರ ಧಮ್ಮಿದ್ದರೆ ಅಳವಡಿಸಿ” ಎಂದು ಪೋಸ್ಟ್ ಹಾಕಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...