ಜಾತ್ಯತೀತತೆಯು ಕಾಂಗ್ರೆಸ್‌ನ ಮೂಲ ತತ್ವ; ತಮ್ಮ ನಾಯಕರಿಗೆ ನೆನಪಿಸಿದ ರಾಹುಲ್‌ ಗಾಂಧಿ

Date:

ಜಾತ್ಯತೀತತೆಯು ಕಾಂಗ್ರೆಸ್‌ನ ಮೂಲ ತತ್ವಗಳಲ್ಲಿ ಒಂದಾಗಿದೆ. ಪಕ್ಷವು ಅದರಿಂದ ದೂರ ಸರಿಯಬಾರದು, ವಿಮುಖವಾಗಬಾರದು. ಎಲ್ಲರ ಧಾರ್ಮಿಕ ನಂಬಿಕೆಗಳಿಗೂ ಸಮಾನ ಗೌರವ ಸಿಗಬೇಕು ಎಂದು ವಿಪಕ್ಷ ನಾಯಕ, ಕಾಂಗ್ರೆಸ್‌ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಹೇಳಿದ್ದಾರೆ.

ಅಹಮದಾಬಾದ್‌ನಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ ಅಧಿವೇಶನಕ್ಕೂ ಮುನ್ನ ನಡೆದ ಕಾಂಗ್ರೆಸ್‌ ಸಿಡಬ್ಲ್ಯೂಸಿ ಸಭೆಯಲ್ಲಿ ರಾಹುಲ್‌ ಗಾಂಧಿ ಮಾತನಾಡಿದ್ದು, ಪಕ್ಷದ ನಾಯಕರಿಗೆ ಪಕ್ಷದ ಮೂಲ ಸಿದ್ದಾಂತಗಳ ಕುರಿತು ವಿವರಿಸಿದ್ದಾರೆ. ಬಿಜೆಪಿಯ ಕೋಮು ಧ್ರುವೀಕರಣವನ್ನು ಎದುರಿಸಲು ಪಕ್ಷವು ಏನೆಲ್ಲ ಕಾರ್ಯತಂತ್ರಗಳನ್ನು ರೂಪಿಸಬೇಕು ಎಂಬುದರ ಬಗ್ಗೆ ಚರ್ಚಿಸಿದ್ದಾರೆ.

“ಕಾಂಗ್ರೆಸ್ ಅನ್ನು ‘ಒಂದು ಸಮುದಾಯ/ಧರ್ಮ’ದ ಪಕ್ಷವೆಂದು ನೋಡಲಾಗುವುದಿಲ್ಲ. ಒಬ್ಬ ವ್ಯಕ್ತಿಯ ಧಾರ್ಮಿಕ ನಂಬಿಕೆಯ ಕಾರಣಕ್ಕಾಗಿ ಅವರ ಮೇಲೆ ದಾಳಿ ನಡೆದರೆ, ನಾವು ಅದನ್ನು ವಿರೋಧಿಸಬೇಕು. ಪ್ರತಿಯೊಬ್ಬರ ಧಾರ್ಮಿಕ ನಂಬಿಕೆಯನ್ನು ಗೌರವಿಸುವ ಬಗ್ಗೆ ಪಕ್ಷದ ನಾಯಕರಿಗೆ ಸ್ಪಷ್ಟತೆ ಇರಬೇಕು” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜನರ ಹಕ್ಕುಗಳಿಗಾಗಿ ಕಾಂಗ್ರೆಸ್ ಪ್ರಜಾಸತ್ತಾತ್ಮಕವಾಗಿ ಹೋರಾಡುವುದನ್ನು ಮುಂದುವರಿಸುತ್ತದೆ:” ಎಂದು ಹೇಳಿದ್ದಾರೆ.

“1991ರ ನಂತರ ಕಾಂಗ್ರೆಸ್ ಜನಸಂಖ್ಯೆಯ ಸರಿಸುಮಾರು 50% ರಷ್ಟಿರುವ ಇತರ ಹಿಂದುಳಿದ ವರ್ಗಗಳ (ಒಬಿಸಿ) ಬೆಂಬಲವನ್ನು ಕಳೆದುಕೊಂಡಿದೆ. ದಲಿತರು (22%) ಮತ್ತು ಆದಿವಾಸಿಗಳು (22%) ಹಾಗೂ ಅಲ್ಪಸಂಖ್ಯಾತರು (15%) ಹಾಗೂ ಒಬಿಸಿಗಳನ್ನು ನಿರ್ಲಕ್ಷಿಸುವುದರಿಂದ ದೇಶವು ಪ್ರಗತಿ ಸಾಧಿಸಲು ಸಾಧ್ಯವಿಲ್ಲ. ಸಾಮಾಜಿಕ ನ್ಯಾಯದ ಮೇಲೆ ಪಕ್ಷದ ಗಮನವು ಹೆಚ್ಚಿರಬೇಕು” ಎಂದು ರಾಹುಲ್‌ ಗಾಂಧಿ ಒತ್ತಿ ಹೇಳಿದ್ದಾರೆ.

ವಕ್ಫ್ ತಿದ್ದುಪಡಿ ಕಾಯ್ದೆಯು ಬಿಜೆಪಿಯ ‘ಧ್ರುವೀಕರಣ ರಾಜಕಾರಣ’ದ ಭಾಗವಾಗಿದೆ. ಎಂಎಸ್‌ಪಿಗಾಗನ ರೈತರ ಹೋರಾಟ, ಮಹಿಳೆಯರ ಸಬಲೀಕರಣ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಧಿಸಿದ ಸುಂಕಗಳು, ಪ್ಯಾಲೆಸ್ಟೈನ್-ಇಸ್ರೇಲ್ ಸಂಘರ್ಷದಲ್ಲಿ ಅಮಾಯಕರ ಸಾವುಗಳು, ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲಿನ ಹಲ್ಲೆಗಳು, ಚೀನಾ ಜೊತೆಗಿನ ಸಂಘರ್ಷಗಳ ವಿಚಾರದಲ್ಲಿ ಕೇಂದ್ರ ಸರ್ಕಾರದ ದೌರ್ಬಲ್ಯ ಮತ್ತು ವಿಫಲತೆಗಳ ಬಗ್ಗೆ ಕಾಂಗ್ರೆಸ್‌ ಅಧಿವೇಶನದಲ್ಲಿ ಚರ್ಚೆಯಾಗುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...