ಮೋದಿ ಅಲೆಗೆ ಬೆಚ್ಚಿ ಸ್ಪರ್ಧಿಸದ ಸಚಿವರು: ಬಿ ವೈ ವಿಜಯೇಂದ್ರ

Date:

ಲೋಕಸಭಾ ಚುನಾವಣೆಗೆ 18-20 ಸಚಿವರನ್ನು ಕಣಕ್ಕೆ ಇಳಿಸಲು ಕಾಂಗ್ರೆಸ್‌ನವರು ತೀರ್ಮಾನಿಸಿದ್ದರು. ರಾಜ್ಯದ ಯಾವುದೇ ಒಬ್ಬ ಸಚಿವರೂ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಧೈರ್ಯ ತೋರಿಸಿಲ್ಲ. ಕಾರಣ ನರೇಂದ್ರ ಮೋದಿ ಪರ ಅಲೆ ಇದೆ. ಸೋಲುವ ಭಯದಿಂದ ಮುಂದೆ ಬಂದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.

ಮೈಸೂರಿನಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ರಾಜ್ಯದಲ್ಲಿದ್ದ ಸಣ್ಣಪುಟ್ಟ ಗೊಂದಲಗಳು ಬಗೆಹರಿಯುತ್ತಿವೆ. ಶಿವಮೊಗ್ಗವೂ ಸೇರಿ ಎಲ್ಲ ಸಮಸ್ಯೆಗಳೂ ಪರಿಹಾರವಾಗಲಿವೆ” ಎಂದರು.

“ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬಂದು ನರೇಂದ್ರ ಮೋದಿಯವರು ಪ್ರಧಾನಿ ಆಗುವುದು ಖಚಿತವಾಗಿರುವ ಕಾರಣ ಬಿಜೆಪಿಗೆ ಟಿಕೆಟ್ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ರಾಜ್ಯದಲ್ಲಿ ಕೆಲವೊಂದು ಸಮಸ್ಯೆಗಳಿದ್ದು, ಅವು ಶೀಘ್ರವೇ ಬಗೆಹರಿಯಲಿವೆ” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಭ್ರಷ್ಟರು ಬೇಕಾಗಿದ್ದಾರೆ’ ಇದು ಬಿಜೆಪಿಯ ಹೊಸ ಜಾಹೀರಾತು

ಕೆ.ಎಸ್.ಈಶ್ವರಪ್ಪ ಅವರ ಸ್ಪರ್ಧೆ ಕುರಿತ ಪ್ರಶ್ನೆಗೆ ಉತ್ತರ ನೀಡಿದ ಅವರು, “ನಮ್ಮದೊಂದು ರಾಷ್ಟ್ರೀಯ ಪಕ್ಷ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇದ್ದರೂ ಬಿಜೆಪಿ ಗೆಲ್ಲುವ ನಿರೀಕ್ಷೆಯಿಂದ ಆಕಾಂಕ್ಷಿಗಳೂ ಹೆಚ್ಚಾಗಿದ್ದರು. ದಾವಣಗೆರೆ ಮತ್ತು ಬೆಳಗಾವಿಗೆ ನಮ್ಮ ರೈತ ನಾಯಕರಾದ ಯಡಿಯೂರಪ್ಪನವರು ಭೇಟಿ ಕೊಟ್ಟು ಅಲ್ಲಿನ ಸಮಸ್ಯೆಗಳನ್ನು ಪರಿಹರಿಸಿದ್ದಾರೆ. ಈಶ್ವರಪ್ಪನವರ ಸಮಸ್ಯೆಯೂ ಬಗೆಹರಿಯಲಿದೆ” ಎಂದರು.

“ನಮ್ಮ ಪಕ್ಷದ ಕೇಂದ್ರದ ನಾಯಕತ್ವವು ಕೇವಲ ವಿಜಯೇಂದ್ರ ಮತ್ತು ಯಡಿಯೂರಪ್ಪ ಅವರ ಮಾತು ಕೇಳಿ ತೀರ್ಮಾನ ಮಾಡುವುದಿಲ್ಲ. ಒಂದು ಬಲಿಷ್ಠ ನಾಯಕತ್ವ ನಮ್ಮ ಕೇಂದ್ರದಲ್ಲಿದೆ. ಬಲಿಷ್ಠ ನಾಯಕರಾದ ಮೋದಿಜೀ, ನಡ್ಡಾಜೀ, ಅಮಿತ್ ಶಾ ಜೀ ಅವರಿದ್ದಾರೆ. ರಾಜ್ಯಕ್ಕೆ ಸಂಬಂಧಿಸಿ ಎಲ್ಲ ನಾಯಕರ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡಿದ್ದಾರೆ ಎಂದು ಪ್ರಶ್ನೆಗೆ ಉತ್ತರಿಸಿದರು. ಚುನಾವಣೆ ಫಲಿತಾಂಶ ಬಂದಾಗ ಯಾರೆಲ್ಲ ಸಕ್ರಿಯರಾಗಿ ಕೆಲಸ ಮಾಡಿದ್ದಾರೆ ಎಂಬುದು ಗೊತ್ತಾಗಲಿದೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...