ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣರಿಗೆ ರೂ. 5 ಲಕ್ಷದವರೆಗೆ ಸಹಾಯಧನ: ಕೃಷ್ಣಬೈರೇಗೌಡ

Date:

  • ವಿದ್ಯಾರ್ಥಿಗಳಿಗೆ 1 ಲಕ್ಷದವರೆಗೆ ಸಾಂದೀಪಿನಿ ಶಿಷ್ಯ ವೇತನ
  • ಶಿಷ್ಯ ವೇತನ, ಸ್ವಾವಲಂಬಿ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಜ. 31 ಕೊನೆ ದಿನ

ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಕುಟುಂಬಗಳ ಶ್ರೇಯೋಭಿವೃದ್ದಿಗಾಗಿ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನೀಡುವ ಸ್ವಾವಲಂಬಿ ಮತ್ತು ಸಾಂದೀಪಿನಿ ಶಿಷ್ಯ ವೇತನದ ಯೋಜನೆಗಳ ಉಪಯೋಗವನ್ನು ಅರ್ಹರು ಪಡೆದುಕೊಳ್ಳಿ ಎಂದು ಸಚಿವ ಕೃಷ್ಣಬೈರೇಗೌಡ ತಿಳಿಸಿದರು.

ತಮ್ಮ ಕಚೇರಿಯಲ್ಲಿ ನಿಗಮದ ಡಿಬಿಟಿ ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿದ ಅವರು, “ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಕುಟುಂಬಗಳು ಸ್ವಯಂ ಉದ್ಯೋಗ ಹಾಗೂ ಆರ್ಥಿಕ ಚಟುವಟಿಕೆಗಳಿಗಾಗಿ ಬ್ಯಾಂಕ್ ನಿಂದ ಸಾಲ ಪಡೆದಿದ್ದಲ್ಲಿ, ಸಾಲದ ಪೈಕಿ ಶೇ. 20ರಷ್ಟು ಹಣವನ್ನು ಸರ್ಕಾರ ಸ್ವಾವಲಂಬಿ ಯೋಜನೆ ಅಡಿಯಲ್ಲಿ ಸಹಾಯಧನ ನೀಡಲಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗರಿಷ್ಠ 5 ಲಕ್ಷದವರೆಗೆ ಸಹಾಯಧನ ನೀಡಲಾಗುವುದು. ವ್ಯಾಪಾರ, ಅಂಗಡಿ, ಹೈನುಗಾರಿಕೆ, ಹೊಲಿಗೆ ವೃತ್ತಿ, ಆಟಿಕೆ ತಯಾರಿಕೆ, ಮೊಬೈಲ್ ಅಂಗಡಿ, ಗುಡಿ ಕೈಗಾರಿಕೆ ಸೇರಿದಂತೆ ಹೆಚ್ಚಿನ ಘಟಕ ವೆಚ್ಚವಿರುವ ಆದಾಯ ಬರುವಂತಹ ಲಾಭದಾಯಕ ಉದ್ಯಮಗಳನ್ನು ಸ್ಥಾಪಿಸಲು ರಾಷ್ಟ್ರೀಕೃತ ಬ್ಯಾಂಕ್‌ಗಳಿ‌ಂದ ಸಾಲ ಪಡೆದವರು ಈ ಯೋಜನೆ ಅರ್ಹರಾಗಿರುತ್ತಾರೆ. ಜನವರಿ 31ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ಇದ್ದು ಅರ್ಹರು ಇದರ ಉಪಯೋಗ ಪಡೆದುಕೊಳ್ಳಿ” ಎಂದು ಸಚಿವ ಕೃಷ್ಣಬೈರೇಗೌಡ ಅವರು ತಿಳಿಸಿದರು.

ಸಾಂದೀಪಿನಿ ಶಿಷ್ಯ ವೇತನ:
ಮೆಟ್ರಿಕ್ ನಂತರದ ಪ್ರಥಮ ಹಾಗೂ ದ್ವಿತೀಯ ಪಿಯುಸಿ ಓದುತ್ತಿರುವ ಬ್ರಾಹ್ಮಣ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ 15,000 ರೂ. ವರೆಗೆ ‘ಸಾಂದೀಪಿನಿ’ ಯೋಜನೆ ಅಡಿ ಶಿಷ್ಯ ವೇತನ ನೀಡಲಾಗುವುದು.

ಯುಜಿ-ಪಿಜಿ ಸೇರಿದಂತೆ ವಿವಿಧ ಕೋರ್ಸ್‌ಗಳಿಗೆ ಸಿಇಟಿ ಪ್ರವೇಶ ಪರೀಕ್ಷೆ ಮೂಲಕ ತೇರ್ಗಡೆಯಾದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ, ದಾಖಲಾತಿ ಶುಲ್ಕದ ಮೊತ್ತದ 2/3 ಭಾಗ ಹಾಗೂ ಗರಿಷ್ಠ ರೂ. 1 ಲಕ್ಷದ ವರೆಗೆ ಬ್ರಾಹ್ಮಣ ಅಭಿವೃದ್ಧಿ ನಿಗಮದ ಮೂಲಕ ಸರ್ಕಾರ ಪಾವತಿಸಲಿದೆ. ಸದರಿ ಯೋಜನೆಗೆ ಅರ್ಜಿ ಸಲ್ಲಿಸಲು ಜನವರಿ.31 ಕೊನೆಯ ದಿನವಾಗಿರಲಿದೆ ಎಂದು ಅವರು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...