ಸಂದೇಶ್‌ಖಾಲಿ ಪ್ರಕರಣ | ‘ನಿಮ್ಮನ್ನು ಮುಂದಿನ 10 ವರ್ಷ ಬ್ಯುಸಿಯಾಗಿಸುತ್ತವೆ’; ಶೇಖ್‌ ಪರ ವಕೀಲರಿಗೆ ಕೋರ್ಟ್‌ ಕಿಡಿ

Date:

ಸಂದೇಶ್‌ಖಾಲಿ ಪ್ರಕರಣದ ಆರೋಪಿ, ಟಿಎಂಸಿ ಪ್ರಬಲ ಮುಖಂಡ ಷಹಜಹಾನ್ ಶೇಖ್ ಪರ ವಕೀಲರ ಕುರಿತು ಕೊಲ್ಕತ್ತಾ ಹೈಕೋರ್ಟ್‌ ಕಟುವಾದ ಮಾತುಗಳನ್ನಾಡಿದೆ. ಶೇಖ್‌ ಅವರಿಗೆ ಜಾಮೀನು ನೀಡುವಂತೆ ವಕೀಲ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಟಿಎಸ್ ಶಿವಜ್ಞಾನಂ ನೇತೃತ್ವದ ಪೀಠವು ತಿರಸ್ಕರಿಸಿದೆ. ಅಲ್ಲದೆ, ‘ಶೇಖ್‌ ಬಗ್ಗೆ ಯಾವುದೇ ಸಹಾನುಭೂತಿ ಇಲ್ಲ’ ಎಂದು ಹೇಳಿದೆ.

ಕಳೆದ ತಿಂಗಳು, ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ ತಂಡದ ಮೇಲೆ ಗುಂಪು ದಾಳಿಗೆ ನಡೆಸಿದ್ದ ಪ್ರಕರಣದಲ್ಲಿ ಶೇಖ್‌ ಅವರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಅಲ್ಲದೆ, ಶೇಖ್‌ ವಿರುದ್ಧ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಸಂದೇಶ್‌ಖಾಲಿ ಪ್ರದೇಶದ ಆದಿವಾಸಿ, ಬುಡಕಟ್ಟು ಜನರು ಸುಮಾರು 100ಕ್ಕೂ ಹೆಚ್ಚು ದೂರುಗಳನ್ನ ದಾಖಲಿಸಿದ್ದಾರೆ. ಶೇಖ್‌ ಮತ್ತು ಸಹಚರರು ತಮ್ಮ ಭೂಮಿಯನ್ನ ಬಲವಂತವಾಗಿ ಕಸಿದುಕೊಂಡಿದ್ದಾರೆ. ಮನರೇಗಾ ಅಡಿಯಲ್ಲಿ ತಮ್ಮ ದುಡಿಮೆಯ ಹಣವನ್ನೂ ಕಿತ್ತುಕೊಂಡಿದ್ದಾರೆ. ಸಮುದಾಯದ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯಗಳನ್ನ ಎಸಗಿದ್ದಾರೆ ಎಂದು ದೂರುಗಳಲ್ಲಿ ಆರೋಪಿಸಿದ್ದಾರೆ.

ಕಳೆದ 55 ದಿನಗಳಿಂದ ತಲೆ ಮರೆಸಿಕೊಂಡಿದ್ದ ಶೇಖ್‌ ಅವರನ್ನು ಬಂಧಿಸಿರುವ ಪೊಲೀಸರು, ನ್ಯಾಯಾಲಯದಲ್ಲಿ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿದೆ. ಗುರುವಾರ, ಶೇಖ್‌ ಅವರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದು, ಮುಖ್ಯ ನ್ಯಾಯಮೂರ್ತಿಗಳು ಅರ್ಜಿಯನ್ನು ತಿರಸ್ಕರಿಸಿದ್ದಾರೆ. ಪ್ರಕರಣದ ವಿಚಾರಣೆ ಸೋಮವಾರ ನಡೆಯಲಿದ್ದು, ಅಂದು ಬನ್ನಿ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಿಸ್ಟರ್ ಕೌನ್ಸಿಲ್ (ವಕೀಲ), ಈ ವ್ಯಕ್ತಿಯ -ಶೇಖ್‌ – ವಿರುದ್ಧ ಸುಮಾರು 43 ಪ್ರಕರಣಗಳಿವೆ. ಗಮನದಲ್ಲಿಟ್ಟುಕೊಳ್ಳಿ, ಈಗ ಮುಂದಿನ 10 ವರ್ಷಗಳವರೆಗೆ, ಈ ವ್ಯಕ್ತಿ ನಿಮ್ಮನ್ನು ಬ್ಯುಸಿಯಾಗಿರಿಸುತ್ತಾರೆ. ಮುಂದಿನ 10 ವರ್ಷಗಳವರೆಗೆ ನೀವು ಅವರ ಎಲ್ಲ ಪ್ರಕರಣಗಳನ್ನು ನಿರ್ವಹಿಸಬೇಕಾಗುತ್ತದೆ,” ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.

“ಆ ವ್ಯಕ್ತಿಯ ಬಗ್ಗೆ ನಮಗೆ ಯಾವುದೇ ಸಹಾನುಭೂತಿ ಇಲ್ಲ. ದಯವಿಟ್ಟು ಸೋಮವಾರ ಬನ್ನಿ, ಈಗ ಅಲ್ಲ” ಎಂದು ಪೀಠ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...