ಅಧಿವೇಶನ | ಮಾಲ್ ಸೇರಿ ಇತರೆಡೆ ಪ್ರವೇಶಕ್ಕೆ ಶೀಘ್ರ ಮಾರ್ಗಸೂಚಿ ಪ್ರಕಟ: ಡಿ ಕೆ ಶಿವಕುಮಾರ್

Date:

ಮಾಲ್ ಸೇರಿದಂತೆ ಯಾವುದೇ ಸ್ಥಳಗಳಿಗೆ ಭೇಟಿ ನೀಡುವವರ ನಿರ್ದಿಷ್ಟ ವಸ್ತ್ರಗಳಿಗೆ ನಿರ್ಬಂಧ ಹೇರದಂತೆ ಮಾರ್ಗಸೂಚಿಯನ್ನು ಹೊರಡಿಸಲಾಗುವುದು. ಪಂಚೆ ನಮ್ಮ ಸಂಸ್ಕೃತಿ. ಇದಕ್ಕೆ ಪೂರಕವಾಗಿ ನಿಯಮ ತರಲಾಗುವುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಸದನದಲ್ಲಿ ತಿಳಿಸಿದರು.

ಸೋಮವಾರ ಅಧಿವೇಶನದಲ್ಲಿ ಮಾತನಾಡಿದ ಅವರು, “ಇಡೀ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಈ ರೀತಿಯ ಘಟನೆಗಳು ನಡೆಯದಂತೆ ನಿಯಮಾವಳಿ ರೂಪಿಸಲಾಗುವುದು” ಎಂದರು.

“ಮಾಲ್‌ಗೆ ಪಂಚೆ ಧರಿಸಿ ಬಂದ ರೈತನನ್ನು ತಡೆದ ವಿಚಾರವಾಗಿ ಶುಕ್ರವಾರ (ಜುಲೈ 19) ವಿಧಾನಸಭೆಯಲ್ಲಿ ಪ್ರಸ್ತಾವನೆ ಮೇಲೆ ಚರ್ಚೆ ನಡೆಸಲಾಗಿತ್ತು. ಈ ವಿಚಾರವಾಗಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಹೇಳಿಕೆ ನೀಡಿದ್ದರು. ನಾನು ಶುಕ್ರವಾರ ಗೈರಾಗಿದ್ದ ಕಾರಣ ಈಗ ನನ್ನ ಹೇಳಿಕೆ ನೀಡುತ್ತಿದ್ದೇನೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಿ.ಟಿ ಮಾಲ್ ಗೆ ಪಂಚೆ ಉಟ್ಟುಕೊಂಡು ಬಂದ ರೈತನಿಗೆ ಪ್ರವೇಶ ನೀಡದೆ ಇದ್ದ ಕಾರಣ ಮಾಲ್ ಮಾಲೀಕರಿಗೆ ಕಾರಣ ಕೇಳಿ ನೋಟಿಸ್ ನೀಡಲಾಯಿತು ಹಾಗೂ ತೆರಿಗೆ ಬಾಕಿ ಇದ್ದ ಕಾರಣ ಬೀಗ ಹಾಕಲಾಯಿತು. ಅವರು ತಪ್ಪೊಪ್ಪಿಗೆ ಪತ್ರ ಬರೆದುಕೊಟ್ಟಿದ್ದಾರೆ. ಈಗ ಚೆಕ್ ಮುಖಾಂತರ ಬಾಕಿ ತೆರಿಗೆ ಪಾವತಿ ಮಾಡಿದ್ದಾರೆ” ಎಂದರು.

“ಕೆಲವು ಕ್ಲಬ್ ಗಳಲ್ಲಿ ಪಂಚೆ ಹಾಕಿದ್ದರೆ, ಶೂ ಹಾಕದೆ ಇದ್ದರೆ ಒಳಗೆ ಬಿಡುವುದಿಲ್ಲ. ಇದರ ಬಗ್ಗೆಯೂ ಗಮನ ಹರಿಸಿ” ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರು ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...