ಫೆ.12ರಿಂದ ಅಧಿವೇಶನ ಆರಂಭ; 16ಕ್ಕೆ ಸಿಎಂ ಬಜೆಟ್‌ ಮಂಡನೆ: ಸ್ಪೀಕರ್‌ ಯು ಟಿ ಖಾದರ್‌

Date:

ವಿಧಾನ ಮಂಡಲದ ಅಧಿವೇಶನ ಫೆ.12ರಂದು ಆರಂಭಗೊಳ್ಳಲಿದ್ದು, ರಾಜ್ಯಪಾಲರು ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಆಯವ್ಯಯವನ್ನು ಮಂಡಿಸಲಿದ್ದಾರೆ ಎಂದು ವಿಧಾನಸಭೆಯ ಸಭಾಧ್ಯಕ್ಷ ಯು ಟಿ ಖಾದರ್‌ ತಿಳಿಸಿದರು.

ವಿಧಾನಸೌಧದದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಅಧಿವೇಶನಕ್ಕೂ ಮುನ್ನ ಫೆ.9ರಂದು ಬೆಂಗಳೂರಿನ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌ನಲ್ಲಿ ಶಾಸಕರಿಗೆ ಹಾಗೂ ಮಾಧ್ಯಮ ಪ್ರತಿನಿಧಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿದೆ” ಎಂದರು.

“ಶಾಸಕರಿಗೆ ಬಜೆಟ್‌ ಅಧಿವೇಶನದ ಸ್ವರೂಪ, ಚರ್ಚೆಗಳ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಗುವುದು ಮತ್ತು ಬಜೆಟ್‌ ಅಧಿವೇಶನದ ವರದಿಗಾರಿಕೆ ಬಗ್ಗೆಯೂ ಮಾಧ್ಯಮ ಪ್ರತಿನಿಧಿಗಳಿಗೆ ವಿಶೇಷ ತರಬೇತಿ ನೀಡಲಾಗುವುದು. ಈ ತರಬೇತಿ ಕಾರ್ಯಾಗಾರಕ್ಕೆ ವಿಧಾನ ಪರಿಷತ್‌ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ಚಾಲನೆ ನೀಡಲಿದ್ದಾರೆ” ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಫೆ.16ಕ್ಕೆ ಸಿಎಂ ಬಜೆಟ್‌ ಮಂಡನೆ

“ಫೆ.16ರಂದು ಸಿಎಂ ಅವರು ಬಜೆಟ್‌ ಮಂಡಿಸಲಿದ್ದು, ಆಯವ್ಯಯದ ಮೇಲೆ ಸಾಮಾನ್ಯ ಚರ್ಚೆ ನಡೆಯಲಿದೆ.
12ರಂದು ರಾಜ್ಯಪಾಲರು ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದು, ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ನಡೆದು ತದನಂತರ ನಿರ್ಣಯ ಅಂಗೀಕಾರವಾಗಲಿದೆ. ರಾಜ್ಯಪಾಲರ ಭಾಷಣದ ನಂತರ 16ನೇ ವಿಧಾನಸಭೆಯ 2ನೇ ಅಧಿವೇಶನ ಮುಕ್ತಾಯವಾದ ನಂತರ ಇಲ್ಲಿಯವರೆಗೆ ನಿಧನ ಹೊಂದಿದ ಗಣ್ಯ ವ್ಯಕ್ತಿಗಳ ಕುರಿತು ಸಂತಾಪ ಸೂಚನಾ ನಿರ್ಣಯಗಳನ್ನು ಮಂಡಿಸಲಾಗುವುದು” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಗರ ರಥ, ರಕ್ತ ಮತ್ತು ಭಾರತ ರತ್ನ

“ಈ ಅಧಿವೇಶನದಲ್ಲಿ ಸರಕಾರದಿಂದ ಸ್ವೀಕರಿಸಲಾಗುವ ವಿಧೇಯಕಗಳನ್ನು ಪರ್ಯಾಲೋಚನೆಗೆ ಹಾಗೂ ಅಂಗೀಕಾರಕ್ಕೆ ತೆಗೆದುಕೊಳ್ಳಲಾಗುವುದು. 10 ದಿನಗಳ ಕಾಲ ನಡೆಯುವ ಈ ಅಧಿವೇಶನದಲ್ಲಿ 8 ದಿನಗಳ ಕಾಲ ಪ್ರಶ್ನೋತ್ತರ ಕಲಾಪಗಳನ್ನ ನಿಗದಿಪಡಿಸಲಾಗಿದೆ. ಇದರ ಜೊತೆಗೆ ಗಮನಸೆಳೆಯುವ ಸೂಚನೆಗಳು, ಶೂನ್ಯವೇಳೆ, ನಿಲುವಳಿ ಸೂಚನೆ, ನಿಯಮ 69ರ ಸೂಚನೆಗಳು, ಖಾಸಗಿ ಸದಸ್ಯರುಗಳ ಕಾರ್ಯಕಲಾಪಗಳನ್ನು ನಡೆಸಲಾಗುವುದು” ಎಂದು ತಿಳಿಸಿದರು.

“ಸದನದಲ್ಲಿ ಉತ್ತರಿಸಲಾಗುವ ಪ್ರಶ್ನೆಗಳು, ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಇತ್ಯಾದಿ ಸೂಚನೆಗಳನ್ನು ಸರಕಾರದವರು ನೀಡುವ ಲಿಖಿತ ಉತ್ತರಗಳನ್ನು ಸದನದಲ್ಲಿ ಮಂಡಿಸಿದ ತರುವಾಯ ಮಾನ್ಯ ಸಂಸದರಿಗೆ ಹಾಗೂ ಪತ್ರಕರ್ತರಿಗೆ ಇ-ಮೇಲ್‌ ಮುಖಾಂತರ ಕಳುಹಿಸುವ ವ್ಯವಸ್ಥೆ ಮಾಡಲಾಗುವುದು. ಪತ್ರಕರ್ತರಿಗೆ ವಾರ್ತಾ ಇಲಾಖೆಯ ಮುಖಾಂತರ ಇ-ಮೇಲ್‌ ಕಳುಹಿಸಲಾಗುವುದು. ಅಲ್ಲದೇ ಸಚಿವಾಲಯದ ವೆಬ್‌ಸೈಟಿನಲ್ಲಿಯೂ ದೊರೆಯುತ್ತದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...