ರಾಜಕೀಯ ತಂತ್ರಕ್ಕೆ ಬಿಜೆಪಿಯವರಿಂದ ಅಧಿವೇಶನ ಬಳಕೆ: ಎಚ್‌ ಕೆ ಪಾಟೀಲ್‌ ಕಿಡಿ

Date:

ತಮ್ಮ ಮೇಲೆಯೇ ಆಪಾದನೆ ಇದ್ದರೂ ತನಿಖೆಗೆ ಮುಖ್ಯಮಂತ್ರಿ ಅವರು ವಿಚಾರಣಾ ಆಯೋಗ ರಚಿಸಿದ್ದಾರೆ. ತನ್ನ ಮೇಲೆ ಆರೋಪ ಇದ್ದಾಗ ಯಾರಾದರೂ ಒಬ್ಬ ಮುಖ್ಯಮಂತ್ರಿ ತನಿಖಾ‌ ಆಯೋಗ ರಚಿಸಿರುವ ನಿದರ್ಶನ ಇದೆಯಾ ಎಂದು ಕಾನೂನು ಸಚಿವ ‌ಎಚ್‌ ಕೆ ಪಾಟೀಲ್ ಪ್ರಶ್ನಿಸಿದರು.

ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, “ಮುಖ್ಯಮಂತ್ರಿಯಾಗಿದ್ದ ಎಚ್‌.ಡಿ. ಕುಮಾರಸ್ವಾಮಿ, ಬಿ.ಎಸ್‌. ಯಡಿಯೂರಪ್ಪ, ಜಗದೀಶ ಶೆಟ್ಟರ್, ಬಸವರಾಜ ಬೊಮ್ಮಾಯಿ ಮೇಲೂ ಆರೋಪಗಳಿದ್ದವು. ಮುಡಾ ವಿಚಾರದಲ್ಲಿ ಆಯೋಗ ರಚಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿಲುವನ್ನು ವಿರೋದ ಪಕ್ಷದವರು ಪ್ರಶಂಸೆ ಮಾಡಬೇಕಿತ್ತು. ಆದರೆ, ಅವರು ಧರಣಿ ನಡೆಸುತ್ತಿರುವುದು ಕೇವಲ ರಾಜಕೀಯ ನಾಟಕ” ಎಂದು ಟೀಕಿಸಿದರು.

“ಬಿಜೆಪಿಯವರು ರಾಜಕೀಯ ತಂತ್ರಕ್ಕೆ ವಿಧಾನಮಂಡಲ ಅಧಿವೇಶನವನ್ನು ಬಳಸಿಕೊಳ್ಳುತ್ತಿದ್ದಾರೆ. ಉತ್ತರ ಕನ್ನಡ, ಮಲೆನಾಡು ಭಾಗದಲ್ಲಿ ಮಳೆಯಿಂದಾಗಿ ಸಾಕಷ್ಟು ಅನಾಹುತ ಆಗಿದೆ. ಅಧಿವೇಶನದಲ್ಲಿ ಈ ವಿಷಯಗಳ ಬಗ್ಗೆ ಚರ್ಚೆ ಮಾಡಿಲ್ಲ” ಎಂದರು.

“ಒಂದೇ ದೇಶ, ಒಂದು ಚುನಾವಣೆ ಮತ್ತು ನೀಟ್ ವಿರೋಧಿಸಿ ನಿರ್ಣಯ ಮಂಡಿಸಬೇಕಿದೆ. ಮುಡಾ ವಿಚಾರದಲ್ಲಿ ಚರ್ಚೆಗೆ ಅವಕಾಶ ನೀಡಲಿಲ್ಲವೆಂದು ವಿರೋದ ಪಕ್ಷದವರು ಅಹೋರಾತ್ರಿ ಧರಣಿ ಮಾಡಿದ್ದಾರೆ. ನಿಲುವಳಿ ಪ್ರಸ್ತಾವ ಯಾಕೆ ಮಾಡಬಾರದು ಎನ್ನುವುದನ್ನು ನಾವು ವಿವರಿಸಿದ್ದೇವೆ. ಆದರೂ ಅವರು ಧರಣಿ ಮಾಡುತ್ತಿದ್ದಾರೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...