ಲೈಂಗಿಕ ದೌರ್ಜನ್ಯ ಪ್ರಕರಣ | ಬಿಜೆಪಿ ಮುಖಂಡ ದೇವರಾಜೇಗೌಡ ಮತ್ತೆ ನ್ಯಾಯಾಂಗ ಬಂಧನಕ್ಕೆ

Date:

ಮಹಿಳೆಗೆ ಲೈಂಗಿಕ ದೌರ್ಜನ್ಯ ನೀಡದ ಆರೋಪದ ಮೇಲೆ ಬಂಧಿತರಾಗಿರುವ ಬಿಜೆಪಿ ಮುಖಂಡ ಮತ್ತು ವಕೀಲ ಡಿ ದೇವರಾಜೇಗೌಡ ಅವರ ಮೂರು ದಿನದ ಪೊಲೀಸ್‌ ಕಸ್ಟಡಿ ಅವಧಿ ಮುಗಿದಿದ್ದು, ಮೇ. 24ವರೆಗೆ ಮತ್ತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮೇ 11ರಂದು ದೇವರಾಜೇಗೌಡ ಬಂಧನವಾಗಿತ್ತು. ಅಂದು ಪ್ರಕರಣದ ಮಾಹಿತಿ ಪಡೆದಿದ್ದ ನ್ಯಾಯಾಲಯವು ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿತ್ತು.

ಹೊಳೆನರಸೀಪುರ ಟೌನ್‌ ಠಾಣೆಯ ಪೊಲೀಸರು ಹೆಚ್ಚಿನ ತನಿಖೆಗಾಗಿ ಪೊಲೀಸ್‌ ಕಸ್ಟಡಿಗೆ ನೀಡುವಂತೆ ಮೇ.13ರಂದು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಎಸ್‌ ಸಿದ್ದರಾಮ ಅವರಿಗೆ ಮನವಿ ಮಾಡಿದರು. ಈ ಮನವಿ ಪುರಸ್ಕರಿಸಿದ ನ್ಯಾಯಾಧೀಶರು ದೇವರಾಜೇಗೌಡರನ್ನು ಮೇ 16ವರೆಗೆ ಪೊಲೀಸ್‌ ಕಸ್ಟಡಿ ನೀಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...