ಲೈಂಗಿಕ ದೌರ್ಜನ್ಯ ಪ್ರಕರಣ | ಶಾಸಕ ರೇವಣ್ಣ ಮನೆಗೆ ಎಸ್‌ಐಟಿ ತಂಡ; ಸಂತ್ರಸ್ತೆಯರ ಸಮ್ಮುಖದಲ್ಲಿ ಮಹಜರು

Date:

ಮಾಜಿ ಸಚಿವ, ಹೊಳೆನರಸೀಪುರ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ಕಿರುಕುಳ ಪ್ರಕರಣದ ತನಿಖೆ ಆರಂಭಿಸಿರುವ ಎಸ್‍ಐಟಿ ಅಧಿಕಾರಿಗಳು, ಹೊಳೆನರಸೀಪುರದ ಅವರ ನಿವಾಸದಲ್ಲಿ ಸಂತ್ರಸ್ತೆಯ ಸಮ್ಮುಖದಲ್ಲಿ ಇಂದು ಸ್ಥಳ ಮಹಜರು ನಡೆಸಿದರು.

ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಹಾಗೂ ಸಂತ್ರಸ್ತ ಮಹಿಳೆಯ ಅಪಹರಣ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆ ರೇವಣ್ಣ ವಿರುದ್ಧ ಆರೋಪಿಸಿರುವ ಮಹಿಳೆಯ ಸಮ್ಮುಖದಲ್ಲಿ, ಅಡುಗೆ ಮನೆ, ಬೆಡ್ ರೂಂ ಹಾಗೂ ಸ್ಟೋರ್‌ ರೂಮ್‌ನಲ್ಲಿ ಮಹಜರು ನಡೆಸಿದ್ದಾರೆ. ಮನೆಯಲ್ಲಿ ಭವಾನಿ ರೇವಣ್ಣ ಇಲ್ಲದ ವೇಳೆ ಈ ಮೂರು ಕಡೆ ದೌರ್ಜನ್ಯ ನಡೆಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದರು.

ಡಿವೈಎಸ್‍ಪಿ ಸತ್ಯ ನಾರಾಯಣ್ ಸಿಂಗ್, ಸುಮಾ ರಾಣಿ ನೇತೃತ್ವದಲ್ಲಿ ಮೂರು ವಾಹನಗಳಲ್ಲಿ ಆಗಮಿಸಿರುವ ಎಸ್‍ಐಟಿ ತಂಡ ಪರಿಶೀಲನೆ ನಡೆಸುತ್ತಿದೆ. ಮನೆಯಲ್ಲಿ ಹೆಚ್.ಡಿ ರೇವಣ್ಣ ಹಾಗೂ ಪತ್ನಿ ಭವಾನಿ ರೇವಣ್ಣ ಇದ್ದು, ಮನೆಯ ಬಳಿ ಬಿಗಿ ಭದ್ರತೆ ಕಲ್ಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಪೆನ್‍ಡ್ರೈವ್ ದೇಶದಲ್ಲಿ ಭಾರೀ ಸದ್ದು ಮಾಡುತ್ತಿದೆ. ವಿಡಿಯೋಗಳು ವೈರಲ್ ಆಗುತ್ತಿದ್ದಂತೆ ಸಂತ್ರಸ್ತೆಯರು ಮಹಿಳಾ ಆಯೋಗದ ಮೊರೆ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರ ಪ್ರಕರಣದ ತನಿಖೆಗೆ ಎಸ್‍ಐಟಿ ರಚನೆ ಮಾಡಿತ್ತು. ಇದಾದ ಬೆನ್ನಲ್ಲೇ ಮಾಜಿ ಸಚಿವ ರೇವಣ್ಣ ವಿರುದ್ಧ ಸಹ ಲೈಂಗಿಕ ದೌರ್ಜನ್ಯ ಹಾಗೂ ಸಂತ್ರಸ್ತೆಯ ಅಪಹರಣದ ಆರೋಪದಡಿ ಪ್ರಕರಣ ದಾಖಲಾಗಿತ್ತು.

ಇದನ್ನು ಓದಿದ್ದೀರಾ? ಪ್ರಜ್ವಲ್ ಲೈಂಗಿಕ ಹಗರಣ | ಸಂತ್ರಸ್ತೆಯರಿಗೆ ಅಗತ್ಯ ಬೆಂಬಲ ಒದಗಿಸಿ; ಸಿಎಂಗೆ ರಾಹುಲ್‌ ಮನವಿ

ಈ ಬಗ್ಗೆ ಎಸ್‍ಐಟಿ ತನಿಖೆ ನಡೆಸುತ್ತಿದೆ. ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿದ್ದು, ಅವರಿಗೆ ಲುಕ್‍ಔಟ್ ನೋಟಿಸ್ ಜಾರಿಗೊಳಿಸಲಾಗಿದೆ. ಅಲ್ಲದೇ ರೇವಣ್ಣ ಸಹ ವಿದೇಶಕ್ಕೆ ತೆರಳುವ ಶಂಕೆಯ ಮೇಲೆ ಅವರ ಮೇಲೂ ಲುಕ್‍ಔಟ್ ನೋಟಿಸ್ ಜಾರಿಗೊಳಿಸಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...