ಲೈಂಗಿಕ ದೌರ್ಜನ್ಯ ಪ್ರಕರಣ | ಸೂರಜ್‌ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು

Date:

ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕಳೆದ ತಿಂಗಳು ಬಂಧನಕ್ಕೆ ಒಳಗಾಗಿದ್ದ ವಿಧಾನ ಪರಿಷತ್‌ ಸದಸ್ಯ ಸೂರಜ್‌ ರೇವಣ್ಣಗೆ ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ ಸೋಮವಾರ ಜಾಮೀನು ಮಂಜೂರು ಮಾಡಿದೆ.

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಸೂರಜ್‌ ರೇವಣ್ಣಗೆ ಜಾಮೀನು ದೊರೆತ ಹಿನ್ನೆಲೆಯಲ್ಲಿ ಮಂಗಳವಾರ ಮಧ್ಯಾಹ್ನದ ಹೊತ್ತಿಗೆ ಬಿಡುಗಡೆಯಾಗಲಿದ್ದಾರೆ.

ಜೂನ್‌ ಎರಡನೇ ವಾರದಲ್ಲಿ ಸೂರಜ್‌ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿತ್ತು. ಜೆಡಿಎಸ್‌ ಕಾರ್ಯಕರ್ತನೊಬ್ಬ “ಸೂರಜ್‌ ರೇವಣ್ಣ ಅವರು ತಮ್ಮ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ, ಕಾನೂನು ಕ್ರಮ ಕೈಗೊಳ್ಳಿ” ಎಂದು ಹೊಳೆನರಸೀಪುರ ಪೊಲೀಸರಿಗೆ ದೂರು ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಚಾರಣೆ ಕೈಗೊಂಡ ಪೊಲೀಸರು ಜೂನ್ 23 ರಂದು ಸೂರಜ್‌ ರೇವಣ್ಣನನ್ನು ಬಂಧಿಸಿದ್ದರು. ನಂತರ ಸೂರಜ್‌ನನ್ನು ನ್ಯಾಯಾಲಯ ಬಂಧನಕ್ಕೆ ಒಳಗಾಗಿದ್ದರು. ನಂತರ ಸೂರಜ್‌ ರೇವಣ್ಣ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.

ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರು ಸೋಮವಾರ ವಿಚಾರಣೆ ನಡೆಸಿ, ಸೂರಜ್‌ ರೇವಣ್ಣ ಪರ ವಕೀಲರು ಹಾಗೂ ಸರ್ಕಾರದ ವಿಶೇಷ ಅಭಿಯೋಜಕರ ವಾದ ಆಲಿಸಿ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ್ದಾರೆ.

ಅರ್ಜಿದಾರರು ತನಿಖಾಧಿಕಾರಿಯ ಮುಂದೆ ಕರೆದಾಗ ಕಡ್ಡಾಯವಾಗಿ ಹಾಜರಾಗಬೇಕು. ತಿಂಗಳ ಪ್ರತಿ 2ನೇ ಭಾನುವಾರ ತನಿಖೆಗೆ ತನಿಖಾಧಿಕಾರಿಗಳ ಮುಂದೆ ಬರಬೇಕು. ಯಾವುದೇ ಕಾರಣಕ್ಕೂ ಸಂತ್ರಸ್ತರನ್ನು ನೇರವಾಗಿ ಅಥವಾ ಪರೋಕ್ಷವಾಗಿ ಸಂಪರ್ಕಿಸಲೇಬಾರದು ಎನ್ನುವ ಷರತ್ತು ಸೂರಜ್‌ಗೆ ವಿಧಿಸಲಾಗಿದೆ.

ಈಗಾಗಲೇ ಲೈಂಗಿಕದೌರ್ಜನ್ಯದ ಪ್ರಕರಣದಲ್ಲಿ ಜೈಲಿನಲ್ಲಿರುವ ಹಾಸನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಕೂಡ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು ಅವರ ಪ್ರಕರಣ ಬಾಕಿಯಿದೆ. ಇದೇ ಪ್ರಕರಣದಲ್ಲಿ ಅವರ ತಂದೆ, ಮಾಜಿ ಸಚಿವ ಎಚ್.ಡಿ. ರೇವಣ್ಣ ಜಾಮೀನಿನಲ್ಲಿದ್ದಾರೆ. ತಾಯಿ ಭವಾನಿ ರೇವಣ್ಣ ಅವರ ಮೇಲೂ ಪ್ರಕರಣವಿದ್ದು, ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್‌ ನಲ್ಲಿ ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...