ಲೈಂಗಿಕ ದೌರ್ಜನ್ಯ ಪ್ರಕರಣ | ಪ್ರಜ್ವಲ್ ಯಾವುದೇ ದೇಶದಲ್ಲಿದ್ದರೂ ಹಿಡಿದು ತರುತ್ತೇವೆ: ಸಿಎಂ ಸಿದ್ದರಾಮಯ್ಯ

Date:

ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಯಾವುದೇ ದೇಶದಲ್ಲಿ ಇದ್ದರೂ ಹಿಡಿದು ತರುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬಾಗಲಕೋಟೆಯಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿ, “ಪ್ರಜ್ವಲ್​ ರೇವಣ್ಣನ ಪಾಸ್​ಪೋರ್ಟ್ ಸಂಬಂಧ ನಾನು ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದೇನೆ. ರಾಜತಾಂತ್ರಿಕ ಪಾಸ್​ಪೋರ್ಟ್​ ರದ್ದತಿ ಅಧಿಕಾರವಿರುವುದು ಕೇಂದ್ರ ಸರ್ಕಾರಕ್ಕೆ ಮಾತ್ರ. ಆದರೆ ಮೋದಿ ಸರ್ಕಾರ ಪ್ರಜ್ವಲ್ ರಕ್ಷಣೆ ‌ಮಾಡುತ್ತಿದೆ” ಎಂದು ಆರೋಪಿಸಿದರು.

“ಮಹಿಳೆಯರ ಮೇಲೆ ಅನ್ಯಾಯ ನಡೆದಿದೆ. ಹೆಚ್ ​ಡಿ ಕುಮಾರಸ್ವಾಮಿ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣ ನನ್ನ ಮಗ ಎಂದು ಹೇಳಿದ್ದರು. ನನ್ನ ಮಗ ನಿಖಿಲ್​ ಬೇರೆ ಅಲ್ಲ, ಪ್ರಜ್ವಲ್ ರೇವಣ್ಣ ಬೇರೆ ಅಲ್ಲ ಅಂದಿದ್ದರು. ಈಗ ಅವರ ಕುಟುಂಬ ಬೇರೆ ನಮ್ಮ ಕುಟುಂಬ ಬೇರೆ ಅಂತಿದ್ದಾರೆ. ಈಗ ವಕೀಲರನ್ನು ಕರೆಯಿಸಿ ಯಾಕೆ ಚರ್ಚೆ ಮಾಡುತ್ತಿದ್ದಾರೆ” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಜ್ವಲ್ ಪ್ರಕರಣ ಮೊದಲೇ ಬಿಜೆಪಿಗೂ ಗೊತ್ತಿತ್ತು. ಆದರೂ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡರು. ಈಗ ಯಾಕೆ ಕ್ರಮ ವಹಿಸುತ್ತಿಲ್ಲ” ಎಂದು ಪ್ರಶ್ನಿಸಿದರು.

“ಸಂತ್ರಸ್ತ ಮಹಿಳೆಯ ಅಪಹರಣ ಮಾಡಲಾಗಿದೆ ಎಂಬ ದೂರು ದಾಖಲಾಗಿದೆ. ಆ ಹೆಣ್ಣು ಮಗಳ ರಕ್ಷಣೆಗೆ ದಾವಿಸಿ ಎಂದಿದ್ದೇನೆ. ಅಧಿಕಾರಿಗಳು ಪತ್ತೆ ಹಚ್ಚುತ್ತಾರೆ” ಎಂದು ಹೇಳಿದರು.

ಪೊಲೀಸರಿಗೆ ಫ್ರೀ ಹ್ಯಾಂಡ್ ನೀಡಲಾಗಿದೆ: ಡಿಕೆ ಶಿವಕುಮಾರ್​

“ಪ್ರಕರಣದ ತನಿಖೆಗೆ ಪೊಲೀಸರಿಗೆ ಫ್ರೀ ಹ್ಯಾಂಡ್ ನೀಡಲಾಗಿದೆ. ಬಿಜೆಪಿಯವರು ಈಗ ಯಾಕೆ ಯಾರು ಮಾತನಾಡುತ್ತಿಲ್ಲ. ಸಿ.ಟಿ.ರವಿ, ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ಸದಾನಂದಗೌಡ, ಆರ್​. ಅಶೋಕ್​​ ಎಲ್ಲಿ ಹೋದರು? ಮಹಿಳೆಯರ ಬಗ್ಗೆ ಗೌರವ ಇಟ್ಟುಕೊಂಡಿದ್ದೇವೆಂದು ಹೇಳುತ್ತಾರೆ, ಈಗ ಮಹಿಳೆಯರಿಗೆ ಅನ್ಯಾಯ ಆಗಿದೆ ಯಾಕೆ ಮಾತನಾಡಿಲ್ಲ. ಸಂತ್ರಸ್ತ ಮಹಿಳೆಯರಿಗೆ ಧೈರ್ಯ ಹೇಳುವ ಕೆಲಸ ಮಾಡಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...