ಲೈಂಗಿಕ ದೌರ್ಜನ್ಯ | ಸಿ ಪಿ ಯೋಗೇಶ್ವರ್ ಆಪ್ತ ಟಿ ಎಸ್‌ ರಾಜು ವಿರುದ್ಧ ದೂರು ದಾಖಲು, ಆರೋಪಿ ಪರಾರಿ

Date:

ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಚನ್ನಪಟ್ಟಣ ಬಿಜೆಪಿ ಗ್ರಾಮಾಂತರ ಮಂಡಳದ ಅಧ್ಯಕ್ಷ ತೂಬಿನಕೆರೆಯ ಟಿ ಎಸ್ ರಾಜು ವಿರುದ್ಧ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಭಾನುವಾರ ದೂರು ದಾಖಲಾಗಿದೆ.

ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ತಮ್ಮ ಜೊತೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆಂದು ಆರೋಪಿಸಿ ಬೆಂಗಳೂರಿನಲ್ಲಿ ನೆಲೆಸಿರುವ ಮಹಿಳೆ ಟಿ ಎಸ್ ರಾಜು ವಿರುದ್ಧ ದೂರು ನೀಡಿದ್ದಾರೆ. ಆರೋಪಿ ರಾಜು ವಿಧಾನ ಪರಿಷತ್ ಸದಸ್ಯ ಸಿ ಪಿ ಯೋಗೇಶ್ವರ್ ಅವರ ಆಪ್ತ ಎನ್ನಲಾಗಿದ್ದು, ಘಟನೆ ಬೆನ್ನಲ್ಲೇ ರಾಜು ತಲೆಮರೆಸಿಕೊಂಡಿದ್ದಾನೆ.

ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ರಾಜು ವಿರುದ್ಧ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ, ಇತ್ತ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಎಂ ಎನ್ ಆನಂದಸ್ವಾಮಿ ಅವರು ಸೋಮವಾರ ರಾಜುನನ್ನು ಪಕ್ಷದಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆ ವಿವರ

ಬೆಂಗಳೂರಿನಲ್ಲಿ ನೆಲೆಸಿರುವ ಮಹಿಳೆ ಗಣೇಶ ಹಬ್ಬದ ಸಲುವಾಗಿ ತವರು ಮನೆಗೆ ಬಂದಿದ್ದರು. ಸೆ. 7ರಂದು ಗ್ರಾಮದಲ್ಲಿ ರಾತ್ರಿ ಗಣೇಶ ಮೂರ್ತಿ ವಿಸರ್ಜನೆ ಸಲುವಾಗಿ ಮೆರವಣಿಗೆ ನಡೆಯುವಾಗ ಮಹಿಳೆ ರಾತ್ರಿ 11.40ರ ಸುಮಾರಿಗೆ ತಾಯಿಯೊಂದಿಗೆ ಮನೆ ಮುಂದೆ ನಿಂತಿದ್ದರು. ತಾಯಿ ಕಾರ್ಯನಿಮಿತ್ತ ಒಳಕ್ಕೆ ಹೋಗಿದ್ದರು. ಮಹಿಳೆ ಒಬ್ಬರೇ ಇದ್ದಿದ್ದನ್ನು ಗಮನಿಸಿ ಅವರತ್ತ ಬಂದಿದ್ದ ರಾಜು, ‘ಯಾವಾಗ ಬಂದೆ ಬೇಬಿ’ ಎಂದು ಕೇಳಿದ್ದ ಎಂದು ಮಹಿಳೆ ದೂರಿನಲ್ಲಿಉಲ್ಲೇಖಿಸಿದ್ದಾರೆ.

ಮಹಿಳೆಯ ಹೆಗಲ ಮೇಲೆ ಕೈ ಹಾಕಿ ಎದೆ ಭಾಗವನ್ನು ಮುಟ್ಟುತ್ತಾ, ಕಾಮುಕ ದೃಷ್ಟಿಯಿಂದ ಕೈ ಹಿಡಿದು ಎಳೆದಾಡಿ ಅನುಚಿತವಾಗಿ ವರ್ತಿಸಿದ್ದಾನೆ. ಅಲ್ಲದೆ, ತನ್ನ ಮೊಬೈಲ್‌ ಫೋನ್‌ನಿಂದ ಮಹಿಳೆಯ ಫೋಟೊ ತೆಗೆದು ತನ್ನ ಸ್ನೇಹಿತರಿಗೆ ಕಳಿಸಿದ್ದ. ಈ ಕುರಿತು ಮಹಿಳೆ ಪ್ರಶ್ನಿಸಿದಾಗ, ‘ನನ್ನ ಮೊಬೈಲ್, ನನ್ನಿಷ್ಟ’ ಎಂದು ರಾಜು ಕೆಟ್ಟದಾಗಿ ಪ್ರತಿಕ್ರಿಯಿಸಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.

ರಾಜು ವರ್ತನೆಯಿಂದ ದಿಗ್ಬ್ರಮೆಗೊಂಡ ಮಹಿಳೆ ತಕ್ಷಣ ಒಳಗಿದ್ದ ತನ್ನ ಅಣ್ಣನಿಗೆ ವಿಷಯ ತಿಳಿಸಿದ್ದಾರೆ. ಅವರು ಬಂದು ಪ್ರಶ್ನಿಸಿದಾಗ, ರಾಜು ತಬ್ಬಿಬ್ಬುಗೊಂಡಿದ್ದಾನೆ. ನಂತರ, ಕುಟುಂಬದವರು ಆತನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ, ಆತನ ಮೊಬೈಲ್ ಕಿತ್ತಕೊಂಡು ಇಟ್ಟುಕೊಂಡಿದ್ದು, ತನಿಖೆ ಸಂದರ್ಭದಲ್ಲಿ ಹಾಜರುಪಡಿಸುವುದಾಗಿ ಮಹಿಳೆ ದೂರಿನಲ್ಲಿ ಹೇಳಿದ್ದಾರೆ.

ಹಿಂದೆಯೂ ಕಿರಿ ಕಿರಿ

ಈ ಹಿಂದೆಯೂ ರಾಜು ನನಗೆ ಕಿರಿಕಿರಿ ಕೊಟ್ಟಿದ್ದಾನೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನನಗೆ ಕರೆ ಮಾಡಿ, ‘ಮೈಸೂರು ಕಾಫಿ ಡೇಗೆ ಹೋಗೋಣ. ನೀನೊಬ್ಬಳೇ ಬಾ. ಯಾರಿಗೂ ಹೇಳಬೇಡ’ ಎಂದಿದ್ದ. ನನ್ನೊಂದಿಗೆ ಕೆಟ್ಟದಾಗಿ ನಡೆದುಕೊಂಡಿರುವ ರಾಜು, ನನ್ನ ಗೌರವಕ್ಕೆ ಚ್ಯುತಿ ತಂದಿದ್ದಾನೆ” ಎಂದು ಮಹಿಳೆ ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...