ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಸಿಐಡಿ ಎದುರು ಯಡಿಯೂರಪ್ಪ ಹಾಜರ್

Date:

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಸಿಐಡಿ ಎದುರು ಹಾಜರಾಗಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ಅವರ ಧ್ವನಿ ಮಾದರಿ (ವಾಯ್ಸ್‌ ಸ್ಯಾಂಪಲ್) ಸಂಗ್ರಹಿಸಿದ್ದಾರೆ.

ನ್ಯಾಯ ದೊರಕಿಸಿಕೊಡುವಂತೆ ಸಹಾಯ ಕೋರಿ ಯಡಿಯೂರಪ್ಪ ಮನೆಗೆ ಫೆಬ್ರವರಿ 2ರಂದು ತೆರಳಿದ್ದಾಗ ಬಾಲಕಿಗೆ ಯಡಿಯೂರಪ್ಪ ಕಿರುಕುಳ ನೀಡಿದ್ದಾರೆ ಎಂದು ಬಾಲಕಿಯ ತಾಯಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಪೋಕ್ಸೋ ಕಾಯ್ದೆಯ ಸೆಕ್ಷನ್ 8 ಮತ್ತು ಐಪಿಸಿ ಸೆಕ್ಷನ್ 354(ಎ) ಅಡಿಯಲ್ಲಿ ಸದಾಶಿವನಗರ ಠಾಣೆಯಲ್ಲಿ ಮಾರ್ಚ್​​ 14ರಂದು ಎಫ್‌ಐಆರ್ ದಾಖಲಾಗಿತ್ತು.

ಪ್ರಕರಣವನ್ನು ಸಿಐಡಿ ತನಿಖೆಗೆ ಸರ್ಕಾರ ಆದೇಶಿಸಿತ್ತು. ಇತ್ತೀಚೆಗೆ, ಸಿಐಡಿ ಅಧಿಕಾರಿಗಳು ಬಾಲಕಿಯ ಹೇಳಿಕೆಯನ್ನೂ ದಾಖಲಿಸಿಕೊಂಡಿದ್ದಾರೆ. ಧ್ವನಿ ಮಾದರಿ ಸಂಗ್ರಹಿಸಿಕೊಳ್ಳಲು ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿದ್ದರು. ಇದೀಗ, ಯಡಿಯೂರಪ್ಪ ಸಿಐಡಿ ಎದುರು ಹಾಜರಾಗಿದ್ದು, ಅವರ ಧ್ವನಿ ಮಾದರಿಯನ್ನು ಅಧಿಕಾರಿಗಳು ಸಂಗ್ರಹಿಸಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯಡಿಯೂರಪ್ಪ ಮತ್ತು ಸಂತ್ರಸ್ತೆಯ ತಾಯಿ ಮಾತನಾಡುವ ವಿಡಿಯೋವನ್ನು ಸಂತ್ರಸ್ತೆಯ ತಾಯಿ ಪೊಲೀಸರಿಗೆ ಸಾಕ್ಷ್ಯವಾಗಿ ಒದಗಿಸಿದ್ದರು. ಬಳಿಕ, ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಆ ವಿಡಿಯೋ ಯಡಿಯೂರಪ್ಪ ಅವರದ್ದೇ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಲು ಅಧಿಕಾರಿಗಳು ಧ್ವನಿ ಮಾದರಿ ಸಂಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...