ಯುವಕನಿಗೆ ಲೈಂಗಿಕ ದೌರ್ಜನ್ಯ ಆರೋಪ : ಸೂರಜ್ ರೇವಣ್ಣ ವಿರುದ್ಧ ಎಫ್‌ಐಆರ್

Date:

ಯುವಕನೋರ್ವನಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದ ಮೇಲೆ ಜೆಡಿಎಸ್ ಮುಖಂಡ, ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಸಂತ್ರಸ್ತ ಯುವಕ ನೀಡಿದ ದೂರನ್ನು ಆಧರಿಸಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಾಯ್ದೆ ಸಂಖ್ಯೆ 1860ರ ಅಡಿಯಲ್ಲಿರುವ ಸೆಕ್ಷನ್ 377 (ಅಸ್ವಾಭಾವಿಕ ಅಪರಾಧ), 342 (ತಪ್ಪಾದ ಬಂಧನಕ್ಕೆ ಶಿಕ್ಷೆ ) ಹಾಗೂ 506 (ಬೆದರಿಕೆ) ಯಡಿ ಪ್ರಕರಣ ದಾಖಲು ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂತ್ರಸ್ತ ಯುವಕ ಶುಕ್ರವಾರ ಡಿಜಿ ಕಛೇರಿಯಲ್ಲಿ ದೂರು ನೀಡಿದ್ದ. ಅಲ್ಲದೇ, ಹಾಸನ ಎಸ್‌ಪಿಗೂ ದೂರಿನ ಪ್ರತಿ ಇ-ಮೇಲ್ ಮೂಲಕ ಕಳಿಸಿದ್ದ. ಇದೀಗ ಈ ದೂರನ್ನು ಆಧರಿಸಿ ಸಂತ್ರಸ್ತನನ್ನ ಕರೆಸಿ ಮಾಹಿತಿ ಪಡೆದಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಿನ್ನೆ ಸೂರಜ್ ರೇವಣ್ಣ ಅವರ ಆಪ್ತ ಶಿವಕುಮಾರ್ ನೀಡಿದ ದೂರು ಆಧರಿಸಿ, ಹೊಳೆನರಸೀಪುರ ನಗರ ಠಾಣೆಯಲ್ಲಿ ಸಂತ್ರಸ್ತ ಯುವಕನ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.

ಸಂತ್ರಸ್ತ ನೀಡಿದ ದೂರಿನಲ್ಲೇನಿದೆ?

ಸೂರಜ್ ರೇವಣ್ಣ ನನಗೆ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪರಿಚಯವಾಗಿದ್ದರು. ನಾನು ಅವರ ತಮ್ಮ ಪ್ರಜ್ವಲ್ ರೇವಣ್ಣ ಪರ ಕೆಲಸ ಮಾಡಿದ್ದೇನೆ. ಆ ಸಂದರ್ಭ ನನ್ನ ನಂಬರ್ ಅನ್ನು ಸೂರಜ್ ರೇವಣ್ಣ ಪಡೆದುಕೊಂಡಿದ್ದರಿಂದ ಸಂಪರ್ಕವಾಗಿತ್ತು. ಜೂ.14 ರಂದು ಸೂರಜ್ ನನಗೆ ಮೆಸೇಜ್ ಮಾಡಿದ್ದರು. ಮೆಸೇಜ್‍ನಲ್ಲಿ ನನ್ನ ಬಗ್ಗೆ ಎಲ್ಲಾ ಮಾಹಿತಿ ಪಡೆದಿದ್ದರು. ನಂತರ ಜೂ.16 ರಂದು ಹೊಳೆನರಸೀಪುರ ತಾಲೂಕಿನ, ಗನ್ನಿಕಡ ತೋಟಕ್ಕೆ ಸಂಜೆ ಬರಲು ಹೇಳಿದ್ದರು. ನಾನು ಹೋದ ಸಂದರ್ಭ ಮನೆಯಲ್ಲಿ ಒಬ್ಬರೇ ಇದ್ದರು. ನನಗೆ ಇಷ್ಟವಿಲ್ಲದಿದ್ದರೂ, ಲೈಂಗಿಕ ಕಿರುಕುಳ ನೀಡಿದ್ದಾರೆ. ಆ ಸಂದರ್ಭ ನನಗೆ ಪುರುಷರನ್ನು ಕಂಡರೆ ಆಸಕ್ತಿ ಮಹಿಳೆಯರನ್ನು ಕಂಡರೆ ಆಸಕ್ತಿ ಇಲ್ಲ ಎಂದು ಹೇಳಿ ನನ್ನ ಮೇಲೆ ದೌರ್ಜನ್ಯ ಎಸಗಿದ್ದಾರೆ. ನಾನು ಕಾಲಿಗೆ ಬಿದ್ದು ಬೇಡಿಕೊಂಡರೂ ಕೂಡ ನನ್ನನ್ನು ಬಿಡಲಿಲ್ಲ. ನನಗೆ ಈ ಘಟನೆಯಿಂದ ಆಘಾತಕ್ಕೊಳಗಾಗಿದ್ದೇನೆ ಎಂದು ಯುವಕ ದೂರಿನಲ್ಲಿ ಉಲ್ಲೇಖಿಸಿದ್ದಾನೆ.

ಇದನ್ನು ಓದಿದ್ದೀರಾ? ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಸಂತ್ರಸ್ತನ ವಿರುದ್ಧವೇ FIR ದಾಖಲು

“ಈಗ ನನಗೆ ಆಗಿರುವ ದೌರ್ಜನ್ಯದ ಬಗ್ಗೆ ಕುಟುಂಬದವರಿಗೂ ತಿಳಿಸಿದ್ದರಿಂದ ಸೂರಜ್ ರೇವಣ್ಣನವರ ಕಡೆಯಿಂದ ನನಗೆ ಕೊಲೆ ಬೆದರಿಕೆ ಇದೆ. ನನಗೆ ಹಾಗೂ ನನ್ನ ಕುಟುಂಬಕ್ಕೆ ಸೂಕ್ತ ನ್ಯಾಯ ಒದಗಿಸುವುದರೊಂದಿಗೆ ರಕ್ಷಣೆ ನೀಡಬೇಕು. ನನ್ನಲ್ಲಿರುವ ಎಲ್ಲ ದಾಖಲೆಗಳನ್ನು ತನಿಖೆಯ ಸಂದರ್ಭದಲ್ಲಿ ನೀಡಲು ಬದ್ಧನಿದ್ದೇನೆ ಎಂದು ಸಂತ್ರಸ್ತ ಯುವಕ ದೂರಿನಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...