ಶಕ್ತಿ ಯೋಜನೆಗೆ ಚಾಲನೆ | ಬಿಎಂಟಿಸಿ ಬಸ್‌ಗೆ ಭಾನುವಾರ ಸಿಎಂ ಸಿದ್ದರಾಮಯ್ಯ ಕಂಡಕ್ಟರ್‌

Date:

ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ, ಮಹಿಳೆಯರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಒದಗಿಸುವ ‘ಶಕ್ತಿ ಯೋಜನೆ’ ಜೂನ್‌ 11ರ ಭಾನುವಾರ ಜಾರಿಯಾಗಲಿದೆ. ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಅಂದು ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ನಲ್ಲಿ ಕಂಡಕ್ಟರ್‌ ಆಗಿ ಮಹಿಳೆಯರಿಗೆ ಸಿದ್ದರಾಮಯ್ಯ ಉಚಿತ ಬಸ್‌ ಟಿಕೆಟ್‌ ವಿತರಿಸಲಿದ್ದಾರೆ.

ಮೆಜೆಸ್ಟಿಕ್‌ನಲ್ಲಿ ಯೋಜನೆಗೆ ವಿಭಿನ್ನವಾಗಿ ಚಾಲನೆ ನೀಡಲಿರುವ ಸಿದ್ದರಾಮಯ್ಯ, ಮೆಜೆಸ್ಟಿಕ್‌ನಿಂದ ವಿಧಾನಸೌಧಕ್ಕೆ ತೆರಳುವ ಮಾರ್ಗ ಸಂಖ್ಯೆ 43ರ ಬಸ್‌ನಲ್ಲಿ ಕಂಡಕ್ಟರ್‌ ಆಗಿ, ಟಿಕೆಟ್ ವಿತರಿಸಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ಉಳಿದ ನಾಲ್ಕು ಯೋಜನೆಗಳನ್ನೂ ಇದೇ ರೀತಿ ವಿಭಿನ್ನವಾಗಿ ಉದ್ಘಾಟನೆ ಮಾಡಲಿದ್ದಾರೆ ಎನ್ನಲಾಗಿದೆ. ಬಿಪಿಎಲ್‌ ಕುಟುಂಬಗಳಿಗೆ ತಲಾ 10 ಕೆ.ಜಿ ಅಕ್ಕಿ ವಿತರಣೆ ಮಾಡುವ ಅನ್ನಭಾಗ್ಯ ಯೋಜನೆಯನ್ನು ಜುಲೈ 1ರಂದು ಮೈಸೂರಿನಲ್ಲಿ ಉದ್ಘಾಟಿಸಲು ಸರ್ಕಾರ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ. ಇನ್ನು, ಗೃಹಲಕ್ಷ್ಮಿ ಯೋಜನೆಯನ್ನು ಆಗಸ್ಟ್‌ 17ರಂದು ಬೆಳಗಾವಿಯಲ್ಲಿ, ಯುವನಿಧಿ ಯೋಜನೆಯನ್ನು ಮಂಗಳೂರಿನಲ್ಲಿ ಹಾಗೂ ಗೃಹ ಜ್ಯೋತಿ ಯೋಜನೆಯನ್ನು ಕಲಬುರಗಿಯಲ್ಲಿ ಉದ್ಘಾಟಿಸಲು ತೀರ್ಮಾನಿಸಿರುವುದಾಗಿ ಸರ್ಕಾರದ ಮೂಲಗಳು ತಿಳಿಸಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...