ಮುಖ್ಯ ಕಾರ್ಯದರ್ಶಿಗಳ ಸಮ್ಮೇಳನದಲ್ಲಿ ಏಕೈಕ ಮಹಿಳೆ ಕರ್ನಾಟಕದ ಡಾ. ಶಾಲಿನಿ ರಜನೀಶ್

Date:

ಇತ್ತೀಚೆಗೆ 2025ನೇ ಡಿಸೆಂಬರ್ 26ರಿಂದ 28ರವರೆಗೆ ನವದೆಹಲಿಯಲ್ಲಿ ನಡೆದ ಐದನೇ ರಾಷ್ಟ್ರೀಯ ಮುಖ್ಯ ಕಾರ್ಯದರ್ಶಿಗಳ ಸಮ್ಮೇಳನದಲ್ಲಿ ಕರ್ನಾಟಕ ರಾಜ್ಯದ ಮುಖ್ಯ ಕಾರ್ಯದರ್ಶಿಯವರು ಭಾಗಿಯಾಗಿದ್ದು, ಈ ಸಮ್ಮೇಳನದಲ್ಲಿ ಭಾಗಿಯಾದ ಏಕೈಕ ಮಹಿಳಾ ಮುಖ್ಯ ಕಾರ್ಯದರ್ಶಿ ಎನಿಸಿಕೊಂಡಿದ್ದಾರೆ.

ಮೂರು ದಿನಗಳ ಕಾಲ ನಡೆದ ಈ ಸಮ್ಮೇಳನದಲ್ಲಿ ದೇಶದ ವಿವಿಧ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳು ಭಾಗವಹಿಸಿದ್ದರು. ಈ ಸಮ್ಮೇಳನವು ರಾಷ್ಟ್ರೀಯ ಅಭಿವೃದ್ಧಿ ಆದ್ಯತೆಗಳ ಕುರಿತು ರಚನಾತ್ಮಕ ಮತ್ತು ನಿರಂತರ ಸಂವಾದದ ಮೂಲಕ ಕೇಂದ್ರ–ರಾಜ್ಯ ಪಾಲುದಾರಿಕೆಯನ್ನು ಬಲಪಡಿಸುವ ಗುರಿಯನ್ನು ಹೊಂದಿತ್ತು.

ಇದನ್ನು ಓದಿದ್ದೀರಾ? ನಮ್ಮ ಸಂವಿಧಾನ ನೀಡಿರುವ ಮತದಾನದ ಅಧಿಕಾರವನ್ನು ಮಹಿಳೆಯರು ಚಲಾಯಿಸಬೇಕು: ಶಾಲಿನಿ ರಜನೀಶ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಹಕಾರಿ ಒಕ್ಕೂಟ ಪರಿಕಲ್ಪನೆಯ ಭಾಗವಾಗಿ, ಈ ಸಮ್ಮೇಳನವು ಕೇಂದ್ರ ಮತ್ತು ರಾಜ್ಯಗಳು ಸಹಕರಿಸುವ ಮಹತ್ವದ ವೇದಿಕೆಯಾಗಿದ್ದು, ದೇಶದ ಮಾನವ ಸಂಪನ್ಮೂಲ ಸಾಮರ್ಥ್ಯವನ್ನು ಹೆಚ್ಚಿಸಲು ಹಾಗೂ ಸಮಗ್ರ ಭವಿಷ್ಯಕ್ಕಾಗಿ ಸುಸ್ಥಿರ ಬೆಳವಣಿಗೆಯ ವೇಗವನ್ನು ಹೆಚ್ಚಿಸಲು ಏಕೀಕೃತ ಮಾರ್ಗಸೂಚಿಗಳನ್ನು ರೂಪಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದೆ.

ಈ ಸಮ್ಮೇಳನವು ‘ವಿಕಸಿತ ಭಾರತಕ್ಕಾಗಿ ಮಾನವ ಬಂಡವಾಳ’ ಎಂಬ ವಿಷಯದ ಮೇಲೆ ಕೇಂದ್ರೀಕೃತವಾಗಿದ್ದು, ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಅನುಸರಿಸಬೇಕಾದ ಅತ್ಯುತ್ತಮ ವಿಧಾನಗಳು ಮತ್ತು ತಂತ್ರಗಳನ್ನು ಪ್ರಸ್ತಾಪಿಸಿದೆ.

ಶಾಲಿನಿ ರಜನೀಶ್
ಸಮ್ಮೇಳನದಲ್ಲಿ ಭಾಗಿಯಾದ ಏಕೈಕ ಮಹಿಳೆ ಡಾ. ಶಾಲಿನಿ ರಜನೀಶ್

ಸಮ್ಮೇಳನದಲ್ಲಿ ಆರಂಭಿಕ ಬಾಲ್ಯ ಶಿಕ್ಷಣ, ಶಾಲಾ ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಉನ್ನತ ಶಿಕ್ಷಣ, ಕ್ರೀಡೆ ಹಾಗೂ ಪಠ್ಯೇತರ ಚಟುವಟಿಕೆಗಳು ಸೇರಿದಂತೆ ಐದು ಪ್ರಮುಖ ಕ್ಷೇತ್ರಗಳ ವಿಷಯಗಳ ಮೇಲೆ ವಿವರವಾದ ಚರ್ಚೆಗೆ ವಿಶೇಷ ಒತ್ತು ನೀಡಲಾಯಿತು. ಅಲ್ಲದೆ ‘ಆಡಳಿತದಲ್ಲಿ ತಂತ್ರಜ್ಞಾನ – ಅವಕಾಶಗಳು, ಅಪಾಯಗಳು ಮತ್ತು ತಗ್ಗಿಸುವಿಕೆ’, ಸ್ಮಾರ್ಟ್ ಪೂರೈಕೆ ಸರಪಳಿಗಳು, ‘ಒಂದು ರಾಜ್ಯ – ಒಂದು ವಿಶ್ವದರ್ಜೆಯ ಪ್ರವಾಸಿ ತಾಣ’, ಆತ್ಮನಿರ್ಭರ ಭಾರತ ಹಾಗೂ ಸ್ವದೇಶಿ ಚಿಂತನೆಗಳು ಸೇರಿದಂತೆ ಆರು ಮಹತ್ವದ ವಿಷಯಗಳನ್ನೂ ಕೇಂದ್ರೀಕರಿಸಲಾಗಿತ್ತು.

ಶಾಲಿನಿ ರಜನೀಶ್ ಯಾರು?

ಡಾ. ಶಾಲಿನಿ ರಜನೀಶ್ ಅವರು ಕರ್ನಾಟಕ ಸರ್ಕಾರದ ಪ್ರಸ್ತುತ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದು 2024ರ ಜುಲೈನಲ್ಲಿ ನೇಮಕಗೊಂಡಿದ್ದಾರೆ. 1989ರ ಬ್ಯಾಚ್‌ನ ಐಎಎಸ್ (IAS) ಅಧಿಕಾರಿಯಾಗಿದ್ದು, ತಮ್ಮ ಪತಿ ರಜನೀಶ್ ಗೋಯಲ್ ಅವರ ನಿವೃತ್ತಿಯ ನಂತರ ಪತಿಯ ಸ್ಥಾನಕ್ಕೆಯೇ ನೇಮಕಗೊಂಡಿದ್ದಾರೆ. ಈ ಮೂಲಕ ಕರ್ನಾಟಕದ ಇತಿಹಾಸದಲ್ಲಿ ಪತಿಯ ನಂತರ ಪತ್ನಿ ಮುಖ್ಯ ಕಾರ್ಯದರ್ಶಿ ಹುದ್ದೆ ಅಲಂಕರಿಸಿದ ಮೂರನೇ ಜೋಡಿ ಎಂಬ ಹೆಗ್ಗಳಿಕೆಗೆ ಇವರು ಪಾತ್ರರಾಗಿದ್ದಾರೆ.

ಮನಃಶಾಸ್ತ್ರದಲ್ಲಿ ಚಿನ್ನದ ಪದಕ ವಿಜೇತರಾಗಿರುವ ಶಾಲಿನಿ ರಜನೀಶ್ ಅವರು, ಗ್ರಾಮೀಣಾಭಿವೃದ್ಧಿಯಲ್ಲಿ ಪಿಎಚ್.ಡಿ ಮತ್ತು ಆಸ್ಟ್ರೇಲಿಯಾದಲ್ಲಿ ಎಂಬಿಎ ಪದವಿ ಪಡೆದಿದ್ದಾರೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಸಕಾಲ’ ಯೋಜನೆಯನ್ನು ಜಾರಿಗೆ ತರುವಲ್ಲಿ ಶಾಲಿನಿ ಪ್ರಮುಖ ಪಾತ್ರ ವಹಿಸಿದ್ದರು. ಅಲ್ಲದೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಶಿಕ್ಷಣ ಮತ್ತು ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...