ಕನ್ನಡಿಗರಿಗಾದ ತೆರಿಗೆ ಅನ್ಯಾಯ ಸಮರ್ಥಿಸಿಕೊಳ್ಳಲು ಬಿಜೆಪಿಯವರಿಗೆ ನಾಚಿಕೆಯಾಗಬೇಕು: ಸಿಎಂ ಸಿದ್ದರಾಮಯ್ಯ

Date:

ಏಳು ಕೋಟಿ ಕನ್ನಡಿಗರಿಗೆ ಆಗಿರುವ ಅನ್ಯಾಯವನ್ನು ಸಮರ್ಥಿಸಿಕೊಳ್ಳಲು ಬಿಜೆಪಿಯವರಿಗೆ ನಾಚಿಕೆಯಾಗುವುದಿಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿಯೇ ಪ್ರಶ್ನಿಸಿದರು.

ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿದ ಅವರು, “1.40 ಸಾವಿರ ಕೋಟಿ ನಮ್ಮಿಂದ ಕೇಂದ್ರ ಸರ್ಕಾರಕ್ಕೆ ತೆರಿಗೆ ಹೋಗುತ್ತದೆ. 100 ರೂ.ತೆರಿಗೆ ಕೊಟ್ಟರೆ ನಮಗೆ 12 ರೂ.ಗಳು ಮಾತ್ರ ಕೇಂದ್ರದಿಂದ ತೆರಿಗೆ ಬರುತ್ತಿದೆ. ಇದನ್ನು ಸಮರ್ಥಿಸಿಕೊಳ್ಳಲು ಬಿಜೆಪಿ ಗೆ ನಾಚಿಕೆಯಾಗಬೇಕು” ಎಂದರು.

“14ನೇ ಹಣಕಾಸು ಆಯೋಗದಲ್ಲಿ 4.7 % ಹಾಗೂ 15 ನೇ ಹಣಕಾಸು ಆಯೋಗದಲ್ಲಿ 3.64 % ರಾಜ್ಯಕ್ಕೆ ನಿಗಡಿಯಾಗಿ ಶೇ 1.07% ರಷ್ಟು ಕಡಿಮೆಯಾಗಿದೆ. ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ಸಂಗ್ರಹಿಸುವ 2 ನೇ ರಾಜ್ಯವಾಗಿರುವ ಕರ್ನಾಟಕಕ್ಕೆ ಅತಿ ಹೆಚ್ಚು ಅನ್ಯಾಯವಾಗಿದೆ. ಕೇಂದ್ರದ ಅನ್ಯಾಯವನ್ನು ಬೆಂಬಲಿಸುವ ಬಿಜೆಪಿಗೆ ಕನ್ನಡಿಗರ ಬಗ್ಗೆ ಕಾಳಜಿ ಇದೆಯೇ?” ಎಂದು ಕೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ವೇಳೆಗೆ ಮೋದಿ ಮೋದಿ, ಜೈ ಶ್ರೀ ರಾಮ್ ಎಂದು ಕೂಗು ಹಾಕುತ್ತಿದ್ದ ವಿರೋಧಪಕ್ಷದವರನ್ನು ಉದ್ದೇಶಿಸಿ, “ನಿಮ್ಮದು ಕೇವಲ ನಿಶಕ್ತಿ. ಮೋದಿ ಹೆಸರಿನ ಮೇಲೆ ನಡೆಸುತ್ತಿದ್ದೀರಿ. ಸಮಾಜ ಒಡೆಯುವ ಕೆಲ್ಸ ನಿಮ್ಮದು. ನಾವು ಜೈ ಸೀತಾ ರಾಮ್ ಎನ್ನುತ್ತೇವೆ” ಎಂದು ಮುಖ್ಯಮಂತ್ರಿಗಳು ಘೋಷಣೆ ಕೂಗಿದರು.

“ಬಿಜೆಪಿಗೆ ತಲೆ ಖಾಲಿ, ಮಿದುಳು ಇಲ್ಲ. ರಾಮಾಯಾಣ, ಮಹಾಭಾರತ ಓದಿಕೊಂಡೇ ಇಲ್ಲ. 15ನೇ ಹಣಕಾಸು ಆಯೋಗ ಬಂದಾಗ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದರು. ನಮಗೆ ದೊಡ್ಡ ಅನ್ಯಾಯ ಆಯಿತು. ನಾನು 14 ನೇ ಹಣಕಾಸು ಆಯೋಗದಲ್ಲಿ ಮುಖ್ಯಮಂತ್ರಿ ಆಗಿದ್ದೆ. ನಮಗೆ ಇಷ್ಟೊಂದು ಅನ್ಯಾಯ ಆಗಲಿಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಭುತ್ವ ಪೋಷಿತ ಮೈತೇಯಿ ಮಿಲಿಟೆಂಟ್‌ ಅಟ್ಟಹಾಸ ಮತ್ತು ಮಣಿಪುರ ಪೊಲೀಸರ ಅಸಹಾಯಕತೆ

ಬೆಲೆ ಏರಿಕೆ, ಸಂಕಷ್ಟಕ್ಕೆ ಗ್ಯಾರಂಟಿ ಉತ್ತರ

“ಸಬ್‌ ಕಾ ಸಾಥ್‌ ಎಂದವರು ಪೆಟ್ರೋಲ್‌ ಡೀಸೆಲ್‌ ಬೆಲೆ, ಗ್ಯಾಸ್‌ ಬೆಲೆ, ಅಗತ್ಯವಸ್ತುಗಳ ಬೆಲೆ ಏರಿಸಿದರು. ಬಡವರಿಗೆ ನಿರುದ್ಯೋಗ, ಬೆಲೆ ಏರಿಕೆಯಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಅವರಿಗೆ ನಾವು ಗ್ಯಾರಂಟಿ ಯೋಜನೆಗಳ ಮೂಲಕ ನಾಲ್ಕರಿಂದ ಐದು ಸಾವಿರ ರೂ. ಕೊಡ್ತಾ ಇದ್ದೀವಿ. 1.2 ಕೋಟಿ ರೂ. ಕುಟುಂಬಗಳು ಅಂದರೆ ಸುಮಾರು 4.5 ಕೋಟಿ ಜನರಿಗೆ ಕೊಡ್ತಾ ಇದ್ದೀವಿ. ಈಗ ಅವರು ನಮ್ಮನ್ನು ಕಾಪಿ ಮಾಡುತ್ತಿದ್ಧಾರೆ” ಎಂದು ಹೇಳಿದರು.

“ಆರ್.ಎಸ್.ಎಸ್.ನವರಿಗೆ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಗೊತ್ತಿಲ್ಲ. ಸ್ವಾತಂತ್ರ್ಯ ಹೋರಾಟ ತೀವ್ರಗೊಂಡಿದ್ದಾಗಲೂ ಸಂಘ ಪರಿವಾರದ ಹೆಡಗೇವಾರ್ ಆಗಲಿ, ಗೋಲ್ವಾಲ್ಕರ್ ಆಗಲಿ ಪಾಲ್ಗೊಂಡಿಲ್ಲ. ಬಿಜೆಪಿ ಯಿಂದ ನಾವು ದೇಶಭಕ್ತಿಯ ಪಾಠ ಕಲಿಯಬೇಕಿಲ್ಲ. ಧರ್ಮದ ಹೆಸರಿನಲ್ಲಿ ದೇಶ ಹಾಗೂ ಸಮಾಜವನ್ನು ಒಡೆಯುವವರು ಬಿಜೆಪಿಯವರು” ಎಂದು ಕಿಡಿಕಾರಿದರು.

“ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಯ ಇಬ್ಬರು ಕಾಂಗ್ರೆಸ್ ಪರವಾಗಿದ್ದುದ್ದನ್ನು ಮರೆ ಮಾಚಲು ವಿಧಾನ ಸಭೆಯಲ್ಲಿ ಗದ್ದಲ ಎಬ್ಬಿಸಿದ್ದಾರೆ. ಪೈಪೋಟಿಗೆ ಬಿದ್ದಂತೆ ಕೇಂದ್ರ ಸರ್ಕಾರವನ್ನು ಹೊಗಳಿದ್ದಾರೆ. ಜೆಡಿಎಸ್ ತಮ್ಮ ಪಕ್ಷದ ಹೆಸರಿನಲ್ಲಿರುವ “ಎಸ್” ನ್ನು ತೆಗೆದುಹಾಕುವುದು ಉತ್ತಮ. ಏಕೆಂದರೆ ಅದು ಈಗ ಜಾತ್ಯತೀತ ವಾಗಿ ಉಳಿದಿಲ್ಲ” ಎಂದು ಕುಟುಕಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...