ರೈತನಿಗೆ ಅವಮಾನ | ಏಳು ದಿನ ಜಿ ಟಿ ಮಾಲ್‌ ಮುಚ್ಚಿಸಲು ರಾಜ್ಯ ಸರ್ಕಾರ ಕ್ರಮ

Date:

ರೈತರ ವಿಷಯದಲ್ಲಿ ಯಾರೇ ಅವಮಾನ ಮಾಡಿದರೂ ಸಹಿಸುವುದಿಲ್ಲ ಎಂದು ವಾರದ ಹಿಂದೆ ಎಚ್ಚರಿಕೆ ಕೊಟ್ಟಿದ್ದ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಮಾತಿಗೆ ಬದ್ಧರಾಗಿ ನಡೆದುಕೊಂಡಿದ್ದಾರೆ.

ಪಂಚೆ ತೊಟ್ಟ ರೈತನಿಗೆ ಪ್ರವೇಶ ನಿರಾಕರಣೆ ಮಾಡಿ ಅವಮಾನ ಮಾಡಿದ ಜಿ ಟಿ ಮಾಲ್ ಅನ್ನು ಏಳು ದಿನಗಳ ಕಾಲ ಮುಚ್ಚಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

ಸದನದಲ್ಲಿ ಜಿ ಟಿ ಮಾಲ್‌ನಲ್ಲಿ ರೈತನಿಗೆ ಅವಮಾನ ಆದ ವಿಚಾರ ಚರ್ಚೆಗೆ ಕಾರಣವಾಗಿದೆ. ಜಿಟಿ ಮಾಲ್ ಒಳಗೆ ಪಂಚೆ ಉಟ್ಟ ರೈತನನ್ನ ಬಿಡದೆ ಅವಮಾನಿಸಿದ ವಿಚಾರವಾಗಿ ಸಭಾಧ್ಯಕ್ಷ ಯು ಟಿ ಖಾದರ್ ಕೋಪಗೊಂಡರು. “ರೈತನಿಗೆ ಅವಮಾನ ಮಾಡಿದವನು ಎಷ್ಟೇ ದೊಡ್ಡವನು ಇರಲಿ, ಅವಮಾನ ಮಾಡಿದ್ದನ್ನು ಖಂಡಿಸಬೇಕು. ಸರ್ಕಾರ ಕಠಿಣ ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಪೀಕರ್ ಮಾತಿಗೆ ಧ್ವನಿಗೂಡಿಸಿದ ಶಾಸಕ ಲಕ್ಷಣ ಸವದಿ, “ಎಲ್ಲ ಮಾಲ್‌ಗಳಿಗೂ ಒಂದೇ ರೂಲ್ಸ್ ಮಾಡಬೇಕು. ಪಂಚೆ ನಮ್ಮ ಸಂಸ್ಕೃತಿ. ಸರ್ಕಾರದಿಂದ ಒಂದು ಆದೇಶ ಹೊರಡಿಸಲಿ, ಆ ಮಾಲ್ ಗೆ ವಾರಗಳ ಕಾಲ ಪವರ್ ಕಟ್ ಮಾಡಲಿ” ಎಂದು ಒತ್ತಾಯಿಸಿದರು.

ಶಾಸಕ ಪ್ರಕಾಶ್ ಕೋಳಿವಾಡ ಕೂಡ ಎದ್ದು ನಿಂತು, “ರೈತನಿಗೆ ಅವಮಾನ ಮಾಡಿದ ಆ ಮಾಲ್ ಅನ್ನು ಮುಚ್ಚಬೇಕು” ಎಂದು ಆಗ್ರಹಿಸಿದರು.

ಸಚಿವ ಬೈರತಿ ಸುರೇಶ್ ಧ್ವನಿಗೂಡಿಸಿ, “ದೇವೇಗೌಡರು, ಸಿದ್ದರಾಮಯ್ಯ ಅವರು ಪಂಚೆ ಉಡುತ್ತಾರೆ. ಅವರು ಕ್ಲಬ್ ಗಳಿಗೆ ಹೋದರೆ ಬಿಡುತ್ತಾರೆ. ಆದರೆ, ಬೇರೆಯವರಿಗೆ ಆ ರೂಲ್ಸ್ ಇಲ್ವಾ” ಎಂದು ಪ್ರಶ್ನಿಸಿದರು.

“ಏಳು ದಿನಗಳ ಕಾಲ‌ ಮಾಲ್ ಮುಚ್ಚಿಸುತ್ತೇವೆ. ಈಗಾಗಲೇ ಬಿಬಿಎಂಪಿ ಆಯುಕ್ತರ ಹತ್ತಿರ ಮಾತಾಡಿದ್ದೇವೆ. ಕಾನೂನಿನಲ್ಲಿ ಅವಕಾಶ ಇದೆ, ಸರ್ಕಾರದ ಕ್ರಮ ಕೈಗೊಳ್ಳಬಹುದು” ಎಂದು ಬೈರತಿ ಹೇಳಿದರು.

ಕಾಂಗ್ರೆಸ್ ಸದಸ್ಯ ಅಶೋಕ್ ಪಟ್ಟಣ ಮಾತನಾಡಿ, ರಾಜ್ಯದ ಎಲ್ಲ ಕ್ಲಬ್ ಗಳು, ಮಾಲ್ ಗಳಲ್ಲಿ ಒಂದೇ ರೂಲ್ಸ್ ತರಬೇಕು. ಪಂಚೆ ಸೇರಿದಂತೆ ಸಾಂಪ್ರದಾಯಿಕ ಉಡುಗೆಗಳನ್ನು ಧರಿಸುವುದರಿಗೆ ಎಂಟ್ರಿ ಕೊಡಬೇಕು ಎಂದರು.

ಘಟನೆ ಹಿನ್ನೆಲೆ?

ಬೆಂಗಳೂರಿನ ಮಾಗಡಿ ಟೋಲ್ ಗೇಟ್ ಬಳಿಯಿರುವ ಜಿಟಿ ಮಾಲ್‌ನಲ್ಲಿ ಹಾವೇರಿ ಮೂಲದ ರೈತನೋರ್ವನಿಗೆ ಅಪಮಾನವಾದ ಘಟನೆ ಜುಲೈ 16 ರಂದು ನಡೆದಿದೆ. ವಿಜಯನಗರದ ನಿವಾಸಿ ನಾಗರಾಜ್‌ ತಂದೆ ಹಾವೇರಿಯವರಾಗಿದ್ದು, ಬೆಂಗಳೂರಿಗೆ ಬಂದಾಗ ಸಿನಿಮಾ ತೋರಿಸಲೆಂದು ಜಿಟಿ ಮಾಲ್‌ಗೆ ಕರೆದುಕೊಂಡು ಹೋಗಿದ್ದರು. ಸಿನಿಮಾ ಥಿಯೇಟರ್‌ ಒಳಗೆ ಪ್ರವೇಶಿಸುವ ಸಂದರ್ಭದಲ್ಲಿ ತಪಾಸಣೆ ನಡೆಸುವ ಸೆಕ್ಯುರಿಟಿ ಸಿಬ್ಬಂದಿ, ರೈತ ಪಂಚೆ ಉಟ್ಟಿರುವ ಕಾರಣಕ್ಕೆ ಥಿಯೇಟರ್ ಒಳಗೆ ಬಿಟ್ಟಿಲ್ಲ.

ಬೇಸತ್ತ ನಾಗರಾಜ್ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ. ಇದಕ್ಕೆ ನೆಟ್ಟಿಗರು ಸೇರಿದಂತೆ, ರಾಜ್ಯದಾದ್ಯಂತ ಮಾಲ್‌ ಸಿಬ್ಬಂದಿಗಳ ನಡೆಗೆ ಆಕ್ರೋಶ ಹೊರಹಾಕಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...