ಸರ್ಕಾರ ರಚಿಸಲು ಒಪ್ಪಿಕೊಂಡು ಮೋಸ ಮಾಡಿದ್ದ ಶರದ್ ಪವಾರ್: ದೇವೇಂದ್ರ ಫಡ್ನವಿಸ್

Date:

ಶರದ್‌ ಪವಾರ್ ಅವರು 2019 ರಲ್ಲಿ ಬಿಜೆಪಿ – ಎನ್‌ಸಿಪಿ ಸರ್ಕಾರ ರಚಿಸಲು ಮೊದಲು ಒಪ್ಪಿಗೆ ನೀಡಿ 3-4 ದಿನಗಳ ನಂತರ ಹಿಂದೆ ಸರಿಯುವ ಮೂಲಕ ಇಬ್ಬಗೆ ನೀತಿ ಅನುಸರಿಸಿದ್ದರು. ಹೀಗಾಗಿ ಅಜಿತ್‌ ಪವಾರ್‌ ಅವರು ಆಗ ಪ್ರಮಾಣ ವಚನ ಸ್ವೀಕರಿಸದೆ ಬೇರೆ ದಾರಿಯಿರಲಿಲ್ಲ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ.

ಸುದ್ದಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, 2019ರಲ್ಲಿ ಅಜಿತ್‌ ಪವಾರ್‌ ಅವರು ಬಿಜೆಪಿ ಸರ್ಕಾರದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಗೆಯನ್ನು ವಿವರಿಸಿದ್ದಾರೆ. ಆ ಸಂದರ್ಭದಲ್ಲಿ ಶರದ್‌ ಪವಾರ್‌ ಸೇರಿದಂತೆ ಎನ್‌ಸಿಪಿಯ ಕೆಲವು ನಾಯಕರು ಬಿಜೆಪಿಯನ್ನು ಸಂಪರ್ಕಿಸಿದ್ದರು. ನಮ್ಮ ಪಕ್ಷವು ಬಿಜೆಪಿಯೊಂದಿಗೆ ಸರ್ಕಾರ ರಚಿಸಲು ಬೆಂಬಲ ನೀಡುತ್ತದೆ ಎಂದಿದ್ದರು ಎಂದು ದೇವೇಂದ್ರ ಫಡ್ನವಿಸ್ ತಿಳಿಸಿದ್ದಾರೆ.

“2019ರಲ್ಲಿ ಶರದ್ ಪವಾರ್ ಅವರೊಂದಿಗೆ ಸಭೆ ನಡೆದ ನಂತರ ಕೆಲವೊಂದು ಕಾರ್ಯತಂತ್ರದ ಜೊತೆಗೆ ಸರ್ಕಾರ ರಚಿಸಲಾಗುವುದೆಂದು ನಿರ್ಧರಿಸಲಾಯಿತು. ನನಗೆ ಮತ್ತು ಅಜಿತ್ ಪವಾರ್ ಅವರಿಗೆ ಸರ್ಕಾರ ರಚಿಸಲು ಎಲ್ಲ ಅಧಿಕಾರವನ್ನು ನೀಡಲಾಯಿತು. ಅದರಂತೆ ನಾವು ಸಿದ್ಧತೆಗಳನ್ನು ನಡೆಸಿದ್ದೆವು. ಆದರೆ ಪ್ರಮಾಣ ವಚನಕ್ಕೆ 3-4 ದಿನಗಳ ಮೊದಲು ಶರದ್ ಪವಾರ್‌ ಬೆಂಬಲವನ್ನು ಹಿಂತೆಗೆದುಕೊಂಡರು. ಆ ಕಾರಣದಿಂದ ಎನ್‌ಸಿಪಿಯ ಶಾಸಕರ ಬೆಂಬಲವಿಲ್ಲದಿದ್ದರೂ ಅಜಿತ್ ಪವಾರ್ ಅವರು ನಮ್ಮೊಂದಿಗೆ ಪ್ರಮಾಣ ವಚನ ಸ್ವೀಕರಿಸದೆ ಬೇರೆ ವಿಧಿಯಿರಲಿಲ್ಲ. ಅಲ್ಲದೆ ಸ್ವೀಕಾರ ಸಮಾರಂಭಕ್ಕೆ ಶರದ್ ಪವಾರ್ ಕೂಡ ಬರುತ್ತಾರೆಂದು ಅಜಿತ್‌ ಹೇಳಿದ್ದರು” ಎಂದು ದೇವೇಂದ್ರ ಫಡ್ನವಿಸ್ ಸಂದರ್ಶನದಲ್ಲಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಂದ್ರಯಾನ 3 ದಿನಾಂಕ ಘೋಷಿಸಿದ ಇಸ್ರೋ

“ಶರದ್‌ ಪವಾರ್‌ ಅವರೊಂದಿಗಿನ ಚರ್ಚೆಯೊಂದಿಗೆ ಸರ್ಕಾರ ರಚನೆಯ ಪ್ರಕ್ರಿಯೆ ಪ್ರಾರಂಭವಾಯಿತು. ಉದ್ಧವ್‌ ಠಾಕ್ರೆ ಕೂಡ ಮೈತ್ರಿ ಮುರಿದುಕೊಂಡು ಬೆನ್ನಿಗೆ ಚೂರಿ ಹಾಕಿದರು. ಶರದ್‌ ಪವಾರ್‌ ಕೂಡ ಇಬ್ಬಗೆ ನೀತಿ ಅನುಸರಿಸಿದರು” ಎಂದು ತಿಳಿಸಿದ್ದಾರೆ.

“ಉಪಮುಖ್ಯಮಂತ್ರಿಯಾಗಿರುವುದು ಕೂಡ ನನಗೆ ಖಂಡಿತಾ ಆಘಾತವಾಗಿದೆ. ಪಕ್ಷಕ್ಕಾಗಿ ಕೆಲಸ ಮಾಡುವ ಹಿತದೃಷ್ಟಿಯಿಂದ ನನ್ನ ಮನಸ್ಥಿತಿಯನ್ನು ಬದಲಾಯಿಸಿಕೊಂಡೆ. ಆದರೆ ಈ ಬಗ್ಗೆ ಇಂದು ಯಾರಾದರೂ ಕೇಳಿದರೆ ನನ್ನ ನಿರ್ಧಾರ ಸರಿ ಎಂದು ಹೇಳುವೆ. ಪಕ್ಷವನ್ನು ನೋಡಿಕೊಳ್ಳಲು ಹಾಗೂ ನನ್ನ ಅನುಭವದಿಂದ ಸರ್ಕಾರ ಕೂಡ ಪ್ರಯೋಜನ ಪಡೆಯುತ್ತಿದೆ. ಮುಖ್ಯಮಂತ್ರಿ ಹುದ್ದೆಯ ದುರಾಸೆಯಿಂದ ನಾನು ಆ ಹುದ್ದೆ ಅಲಂಕರಿಸಿದರೆ ನನ್ನ ಪಕ್ಷಕ್ಕೆ ತಪ್ಪು ಸಂದೇಶ ಹೋಗುತ್ತದೆ, ಹಾಗಾಗಿ ಪಕ್ಷದ ಆದೇಶದಂತೆ ನಾನು ಉಪ ಮುಖ್ಯಮಂತ್ರಿಯಾದೆ. ಪಕ್ಷದ ಮುಖಂಡರು ಕೂಡ ಸರ್ಕಾರದಲ್ಲಿ ಅನುಭವಿಯಾದವರು ಇರಬೇಕೆಂದು ನನ್ನನ್ನು ಈ ಹುದ್ದೆಗೆ ನೇಮಿಸಿದ್ದಾರೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...