ಮಹಾರಾಷ್ಟ್ರ ಚುನಾವಣೆಗೂ ಮುನ್ನ 160 ಸ್ಥಾನಗಳ ಆಫರ್‌ ಬಂದಿತ್ತು, ನಿರಾಕರಿಸಿದ್ದೆವು: ಸಂಚಲನ ಸೃಷ್ಟಿಸಿದ ಶರದ್ ಪವಾರ್ ಹೇಳಿಕೆ

Date:

ಮಹಾರಾಷ್ಟ್ರ ಚುನಾವಣೆಗೂ ಮುನ್ನ ಇಬ್ಬರು ತಮ್ಮನ್ನು ಸಂಪರ್ಕಿಸಿದ 288 ವಿಧಾನಸಭೆ ಸ್ಥಾನಗಳ ಪೈಕಿ 160 ಸ್ಥಾನಗಳ ಗೆಲುವು ಖಾತರಿಪಡಿಸಬಹುದು ಎಂದು ಹೇಳಿಕೊಂಡಿದ್ದರು. ಆದರೆ ನಾವು ಈ ಆಫರ್ ಅನ್ನು ನಿರಾಕರಿಸಿದ್ದೆವು ಎಂದು ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ(ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಶನಿವಾರ ಹೇಳಿದ್ದಾರೆ.

ನಾಗ್ಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶರದ್ ಪವಾರ್ ಅವರು, “ಈ ವ್ಯಕ್ತಿಗಳು ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡುವೆ ಚರ್ಚೆ ನಡೆದಿದೆ. ಆದರೆ ನಾವಿಬ್ಬರು(ರಾಹುಲ್, ಶರದ್) ಅಂತಿಮವಾಗಿ ಆ ಪ್ರಸ್ತಾಪವನ್ನು ತಿರಸ್ಕರಿಸಿದರು. ಇದು ನಮ್ಮ ಮಾರ್ಗವಲ್ಲ” ಎಂದು ತಿಳಿಸಿದ್ದು ಸದ್ಯ ಈ ಹೇಳಿಕೆ ಸಂಚಲನ ಸೃಷ್ಟಿಸಿದೆ.

ಇದನ್ನು ಓದಿದ್ದೀರಾ? ಮೋದಿ ಮತಗಳ ಕಳವು ಮಾಡಿ ಪ್ರಧಾನಿಯಾಗಿದ್ದಾರೆ, ಸಾಬೀತುಪಡಿಸಬಲ್ಲೆವು: ರಾಹುಲ್ ಗಾಂಧಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನನಗೆ ಆಗ ಆಶ್ಚರ್ಯವಾಗಿತ್ತು. ಆ ಇಬ್ಬರು ಸ್ಪಷ್ಟವಾಗಿ ಗ್ಯಾರಂಟಿ ನೀಡುತ್ತಿದ್ದರೂ ನನಗೆ ಚುನಾವಣಾ ಆಯೋಗದ ಮೇಲೆ ಯಾವುದೇ ಸಂದೇಹ ಬಂದಿರಲಿಲ್ಲ. ನಾನು ರಾಹುಲ್ ಗಾಂಧಿಯವರೊಂದಿಗೆ ಅವರ ಭೇಟಿಯನ್ನು ಏರ್ಪಡಿಸಿದ್ದೆ. ಇಬ್ಬರೂ ಮಾತನಾಡಿದರು. ಈ ರೀತಿಯ ಮಾರ್ಗಗಳು ಸರಿಯಲ್ಲ, ಜನರ ಮುಂದೆ ಹೋಗಿ ಅವರ ಬೆಂಬಲವನ್ನು ಪಡೆಯುವುದೇ ಉತ್ತಮ ಎಂದು ನಿರ್ಧರಿಸಿದೆವು. ಇವರನ್ನು ನಾವು ನಿರ್ಲಕ್ಷಿಸಿದೆವು” ಎಂದೂ ಶರದ್ ಪವಾರ್ ತಿಳಿಸಿದ್ದಾರೆ.

ಹಾಗೆಯೇ ಚುನಾವಣಾ ಅಕ್ರಮಗಳ ಕುರಿತು ರಾಹುಲ್ ಗಾಂಧಿಯವರ ಇತ್ತೀಚೆಗೆ ನೀಡಿದ ಮಾಹಿತಿಯನ್ನು ಪವಾರ್ ಶ್ಲಾಘಿಸಿದರು. ಪ್ರತ್ಯೇಕ ಅಫಿಡವಿಟ್ ಕೋರಿದ ಭಾರತೀಯ ಚುನಾವಣಾ ಆಯೋಗವನ್ನು (ECI) ಟೀಕಿಸಿದರು. “ಚುನಾವಣಾ ಆಯೋಗವು ಸ್ವತಂತ್ರ ಸಂಸ್ಥೆ. ರಾಹುಲ್ ಗಾಂಧಿ ಅವರು ಈಗಾಗಲೇ ಸಂಸತ್ತಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆದ್ದರಿಂದ ಪ್ರತ್ಯೇಕ ಅಫಿಡವಿಟ್ ಅಗತ್ಯವಿಲ್ಲ” ಎಂದು ರಾಹುಲ್ ಪರ ನಿಂತರು.

“ರಾಹುಲ್ ಗಾಂಧಿಯವರ ಆರೋಪಗಳನ್ನು ಆಳವಾಗಿ ತನಿಖೆ ನಡೆಸಬೇಕು. ನಾವು ಚುನಾವಣಾ ಆಯೋಗದ ಬಗ್ಗೆ ಪ್ರಶ್ನೆ ಎತ್ತುತ್ತಿದ್ದೇವೆ. ಹಾಗಿರುವಾಗ ಬಿಜೆಪಿ ನಾಯಕರು ಅಥವಾ ಮುಖ್ಯಮಂತ್ರಿ ಏಕೆ ಪ್ರತಿಕ್ರಿಯಿಸಬೇಕು? ನಮಗೆ ಚುನಾವಣಾ ಆಯೋಗದಿಂದ ಉತ್ತರ ಬೇಕು, ಬಿಜೆಪಿಯಿಂದ ಅಲ್ಲ” ಎಂದು ವಾಗ್ದಾಳಿ ನಡೆಸಿದರು.

ಮಹದೇವಪುರ ಸೇರಿದಂತೆ ದೇಶದ ಹಲವು ಕಡೆಗಳಲ್ಲಿ ಮತ ಕಳವು ನಡೆದಿರುವ ಬಗ್ಗೆ ಕಾಂಗ್ರೆಸ್ ಇತ್ತೀಚೆಗೆ ಡೇಟಾ ಬಿಡುಗಡೆ ಮಾಡಿದೆ. ಇದಾದ ಬಳಿಕ ಕೆಲವು ಮಾಧ್ಯಮಗಳೂ ಮತ ಕಳವು ಬಗ್ಗೆ ಗ್ರೌಂಡ್ ರಿಪೋರ್ಟ್ ಮಾಡಿದೆ. ಇವೆಲ್ಲ ಬೆಳವಣಿಗೆ ನಡುವೆ ಶರದ್ ಪವಾರ್ ಈ ಮಾಹಿತಿ ಬಹಿರಂಗಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...